ಕರ್ನಾಟಕ ದೂರಸಂವೇದಿ ಅನ್ವಯಿಕ ಕೇಂದ್ರಕ್ಕೆ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗ ಭೇಟಿ

Italian Aerospace and Space Delegation Visits Remote Sensing Application Centre in Karnataka

ಬೆಂಗಳೂರು; ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರಕ್ಕೆ ಇಟಲಿ – ಭಾರತ ಬಾಹ್ಯಾಕಾಶ, ಏರೋಸ್ಪೇಸ್ ಮತ್ತು ರಕ್ಷಣಾ ರೋಡ್ ಶೋ (India Space, Aerospace and Defence Roadshow) ಭಾಗವಾಗಿ ಇಟಾಲಿಯನ್ ಏರೋಸ್ಪೇಸ್ (Italian Aerospace) ಮತ್ತು ಬಾಹ್ಯಾಕಾಶ ನಿಯೋಗವು ಭೇಟಿ ನೀಡಿತು.

ಭೇಟಿಯ ಸಮಯದಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ.ರಾಜೇಶ್ ಎನ್.ಎಲ್. ಅವರು ಕೇಂದ್ರದ ಧ್ಯೇಯ, ಮುಂದುವರೆದ ಸಾಮರ್ಥ್ಯಗಳು, ಬೆಳೆ ಮೇಲ್ವಿಚಾರಣೆ ಹಾಗೂ ವಿಪತ್ತು ನಿರ್ವಹಣೆಯಿಂದ ನಗರ ಯೋಜನೆ ಮತ್ತು ನೈಸರ್ಗಿಕ ಸಂಪನ್ಮೂಲ ನಿರ್ವಹಣೆವರೆಗೆ ಬಾಹ್ಯಾಕಾಶ ಆಧಾರಿತ ಆಡಳಿತ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ವೈವಿಧ್ಯಮಯ ಅನ್ವಯಿಕೆಗಳನ್ನು ಪ್ರಸ್ತುತಪಡಿಸಿದರು.

ಕಿಟ್ಸ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಪ್ರಮೋದ್ ಎಲ್.ಪಾಟೀಲ್ ಅವರು, ಕರಡು ಕರ್ನಾಟಕ ಬಾಹ್ಯಾಕಾಶ ನೀತಿಯ ಪ್ರಮುಖ ಅಂಶಗಳನ್ನು ಹಂಚಿಕೊಂಡು ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವುದನ್ನು ತಿಳಿಸಿದರು.

ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ (ಜಿಐಎ) ಅಡಿಯಲ್ಲಿ ಸುಗಮಗೊಳಿಸಲಾದ ಈ ಕಾರ್ಯಕ್ರಮವು ಬಾಹ್ಯಾಕಾಶ ಅನ್ವಯಿಕೆಗಳು, ಏರೋಸ್ಪೇಸ್ ತಂತ್ರಜ್ಞಾನಗಳು ಮತ್ತು ರಕ್ಷಣಾ ನಾವೀನ್ಯತೆಗಳಲ್ಲಿ ಸಹಯೋಗವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.

ಜಂಟಿ ಸಂಶೋಧನೆ, ಶೈಕ್ಷಣಿಕ ಸಂಪರ್ಕಗಳು ಮತ್ತು ಪ್ರತಿಭಾ ವಿನಿಮಯದಲ್ಲಿ ಭಾರತ – ಇಟಲಿ ಸಹಕಾರವನ್ನು ವೃದ್ಧಿಸುವುದು, ಮಾರುಕಟ್ಟೆ ಪ್ರವೇಶ, ಸಹ ಅಭಿವೃದ್ಧಿ, ಕೈಗಾರಿಕೆ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಅವಕಾಶಗಳನ್ನು ತೆರೆಯುವುದು ಹಾಗೂ ಬಾಹ್ಯಾಕಾಶ, ನಾವೀನ್ಯತೆ ಮತ್ತು ತಂತ್ರಜ್ಞಾನ ನೇತೃತ್ವದ ಬೆಳವಣಿಗೆಯಲ್ಲಿ ಕರ್ನಾಟಕವನ್ನು ಇಟಲಿಗೆ ಕಾರ್ಯತಂತ್ರದ ಪಾಲುದಾರರನ್ನಾಗಿ ಸ್ಥಾನೀಕರಿಸುವುದಕ್ಕೆ ಸಂಬಂಧಿಸಿದ ಪ್ರಮುಖ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಯಿತು.

ಈ ಭೇಟಿಯು ಭಾರತ – ಇಟಲಿಯ ಪಾಲುದಾರಿಕೆಯನ್ನು ಮುನ್ನಡೆಸುವಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಗುರುತಿಸುವುದಲ್ಲದೇ ಬಾಹ್ಯಾಕಾಶ ಮತ್ತು ಬಾಹ್ಯಾಕಾಶ ನಾವೀನ್ಯತೆಯಲ್ಲಿ ಜಾಗತಿಕ ಕೇಂದ್ರವಾಗಿ ಕರ್ನಾಟಕದ ಪಾತ್ರವನ್ನು ಬಲಪಡಿಸಲಿದೆ.

ನಿಯೋಗದಲ್ಲಿ ಇಟಾಲಿಯನ್ ಬಾಹ್ಯಾಕಾಶ ಸಂಸ್ಥೆಯ ಉಪನಿರ್ದೇಶಕರಾದ ಮಾರಿಯಾ ಚಿಯಾರಾ ನೊಟೊ, ನವದೆಹಲಿಯ ಇಟಲಿಯ ವ್ಯಾಪಾರ ಆಯುಕ್ತರಾದ ಆಂಟೋನಿಯೆಟ್ಟಾ ಬಕ್ಕನಾರಿ, ಬೆಂಗಳೂರಿನಲ್ಲಿನ ಇಟಲಿಯ ಕಾನ್ಸುಲ್ ಜನರಲ್ ಜಿಯಾಂಡೊಮೆನಿಕೊ ಮಿಲಾನೊ ಹಾಗೂ ಇಟಲಿಯ ಬಾಹ್ಯಾಕಾಶ ಮತ್ತು ಬಾಹ್ಯಾಕಾಶ ಕ್ಷೇತ್ರದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು ಎಂದು ಕನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ.ರಾಜೇಶ್ ಎನ್.ಎಲ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]