Legal action against enumerators who neglect survey work..!

ಸಮೀಕ್ಷೆ ಕಾರ್ಯವನ್ನು ನಿರ್ಲಕ್ಷ್ಯಿಸುವ ಗಣತಿದಾರರ ಮೇಲೆ ಕಾನೂನು ಕ್ರಮದ ಎಚ್ಚರಿಕೆ..!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (Social and educational survey) ಪ್ರಗತಿ ಬಗ್ಗೆ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್, ಶಿವರಾಜ ತಂಗಡಗಿ, ಕೃಷ್ಣ ಭೈರೇಗೌಡ, ರಹೀಂ ಖಾನ್, ಭೈರತಿ ಸುರೇಶ್, ಮಧು ಬಂಗಾರಪ್ಪ, ಬೋಸರಾಜು, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ ನಾಯ್ಕ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್‌ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಡಿಯೊ ಕಾನ್ಫರೆನ್ಸ್ ಮುಖ್ಯಾಂಶಗಳು

ಸಮೀಕ್ಷೆ ಕಾರ್ಯವನ್ನು ನಿರ್ಲಕ್ಷ್ಯಿಸುವ ಗಣತಿದಾರರ ಮೇಲೆ ಕಾನೂನು ಕ್ರಮದ ಎಚ್ಚರಿಕೆ..!
  • ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
  • ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು.
  • ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ.
  • ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್‌ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು.
  • ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಬೇಕು.
  • ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ‌
  • ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.
  • ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು.
  • ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ.
  • ಜಿಲ್ಲಾ ಮಟ್ಟದಲ್ಲಿ ಯಾವುದೇ ತಾಂತ್ರಿಕ ತೊಂದರೆಗಳು ಎದುರಾದರೆ ಸ್ಥಳೀಯವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ವಿವಿಧ ಇಲಾಖೆಗಳಲ್ಲಿರುವ ಐಟಿ ತಂತ್ರಜ್ಞರ ನೆರವನ್ನು ಪಡೆದುಕೊಳ್ಳಬೇಕು.
  • ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು.
  • ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‌ಲೈನ್‌ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು.

• ಪ್ರತಿ ದಿನ ಜಿಲ್ಲಾವಾರು ಕನಿಷ್ಠ ಶೇಕಡಾ 10ರಷ್ಟು ಸಮೀಕ್ಷೆ ಗುರಿಯನ್ನು ಸಾಧಿಸಬೇಕು. ಪ್ರಾದೇಶಿಕ ಆಯುಕ್ತರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಮೀಕ್ಷೆ ಪ್ರಗತಿಯ ಪರಿಶೀಲನೆ ನಡೆಸಬೇಕು ಮತ್ತು ಸಕ್ರಿಯವಾಗಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಸೂಚನೆ ನೀಡಲಾಗಿದೆ.

• ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!