First Aarti to Kaveri - History created!

ಗುಡ್ಮಾರ್ನಿಂಗ್ ನ್ಯೂಸ್: ಜೀವನದಿ ಕಾವೇರಿಗೆ ಪ್ರಥಮ ಆರತಿ‌ – ಇತಿಹಾಸ ಸೃಷ್ಠಿ!

ಮಂಡ್ಯ: ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್‌) ಬೃಂದಾವನ ಉದ್ಯಾನದ ಆವರಣದಲ್ಲಿ ನಡೆದ ಐತಿಹಾಸಿಕ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾವೇರಿ (Kaveri) ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಶುಕ್ರವಾರ ಸಂಜೆ ಚಾಲನೆ ನೀಡಿದರು.

10 ಸಾವಿರಕ್ಕೂ ಹೆಚ್ಚು ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಮೊದಲಿಗೆ ದಕ್ಷಿಣ ಭಾರತ ಶೈಲಿಯಲ್ಲಿ ಸ್ಥಳೀಯ ಪುರೋಹಿತರ ತಂಡ ಆರತಿ ಬೆಳಗಿತು.

ಆನಂತರ ವಾರಣಾಸಿಯಿಂದ ಬಂದಿದ್ದ 13 ಜನ ಪುರೋಹಿತರ ತಂಡ ಆರತಿ ಬೆಳಗಿತು. ನಾಡಿನ ಜೀವನದಿ, ನಮ್ಮೆಲ್ಲರ ತಾಯಿ ಕಾವೇರಿಗೆ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆರತಿ ಬೆಳಗುವ ಈ ದಿವ್ಯ ಕ್ಷಣವು ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ನಡೆಯುವ ಗಂಗಾ ಆರತಿಯನ್ನೇ ಮೀರಿಸುವಂತೆ ಭಾವಿಸಿತು.

ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಮೈಸೂರಿನ ಸೋಮನಾಥ ಸ್ವಾಮೀಜಿಯವರು ಹಾಗೂ ಸಚಿವರಾದ ಚಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ, ದರ್ಶನ್‌ ಪುಟ್ಟಣ್ಣಯ್ಯ, ದಿನೇಶ್‌ ಗೂಳಿಗೌಡ, ಮಧು ಜಿ. ಮಾದೇಗೌಡ ಅವರು ಸಹ ಉಪಸ್ಥಿತರಿದ್ದರು.

ಆರತಿಯನ್ನು ಬರೀ ಧಾರ್ಮಿಕ ಕಾರ್ಯಕ್ರಮವಾಗಿ ರೂಪಿಸಿಲ್ಲ

“ಕಾವೇರಿ ಆರತಿಯನ್ನು ಬರೀ ಧಾರ್ಮಿಕ ಕಾರ್ಯಕ್ರಮವಾಗಿ ರೂಪಿಸಿಲ್ಲ. ನಮ್ಮೆಲ್ಲರನ್ನು ಕಾಪಾಡುವ ಕಾವೇರಿ ತಾಯಿಗೆ ಗೌರವ ಸಲ್ಲಿಸುವ, ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮವಾಗಿ ರೂಪಿಸಿದ್ದೇವೆ. ಇದನ್ನು ಯಾವುದೇ ತೊಂದರೆ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

“ಹೆತ್ತತಾಯಿಗೆ ಗೌರವ ನೀಡುತ್ತಿರುವಂತೆ ತುತ್ತು ನೀಡುವ ತಾಯಿಗೆ ಶುಭ ಲಗ್ನ, ಶುಭ ಗಳಿಗೆಯಲ್ಲಿ ನಮನ ಸಲ್ಲಿಸುತ್ತಿದ್ದೇವೆ. ದೇಹದಲ್ಲಿ ರಕ್ತ ಹರಿದರೆ ಶಕ್ತಿ, ಈ ರಕ್ತಕ್ಕೆ ಶಕ್ತಿ ನೀಡುವುದು ಕಾವೇರಿ ತಾಯಿ ನೀರು. ಈ ತಾಯಿಗೆ ಪೂಜೆ ಮಾಡುವುದೇ ಮನಸ್ಸಿಗೆ ನೆಮ್ಮದಿ, ಕಣ್ಣಿಗೆ ಹಬ್ಬ. ಕನ್ನಡಿಗರ ಭಾಗ್ಯ ದೇವತೆ, ರೈತರ ಜೀವದಾತೆ ಕಾವೇರಿ ಮಾತೆ” ಎಂದು ಬಣ್ಣಿಸಿದರು.

“ಸೂರ್ಯ, ಚಂದ್ರ, ಗಾಳಿಯಿಲ್ಲದೇ ನಾವುಗಳು ಬದುಕಲು ಸಾಧ್ಯವಿಲ್ಲ. ಪಂಚಭೂತಗಳಿಗೆ ಪ್ರತಿದಿನ ನಾವು ಪೂಜೆ ಮಾಡುತ್ತೇವೆ. ಅದೇ ರೀತಿ ರಾಜ್ಯದ ಹಳೇ ಮೈಸೂರು ಭಾಗದ ಜೀವನದಿಯಾಗಿ ಮೂರುವರೆ ಕೋಟಿ ಜನರು ಸೇರಿದಂತೆ ಪಕ್ಕದ ತಮಿಳುನಾಡು,‌ ಪಾಂಡಿಚೇರಿಯ ಜನರಿಗೆ ಜೀವನಾಧಾರವಾದ ಕಾವೇರಿಗೆ ನಾವು ಪೂಜೆ ಸಲ್ಲಿಸುತ್ತಿದ್ದೇವೆ.‌ ಇಂದು ಬೆಳಗಿರುವ ಜ್ಯೋತಿ ಇಡೀ ರಾಜ್ಯವನ್ನು ಶಾಶ್ವತವಾಗಿ ಬೆಳಗುತ್ತದೆ ಎಂದರು.

“ಕೊಡಗಿನಲ್ಲಿ ಹುಟ್ಟಿದ ಈ ನದಿ ಕನ್ನಂಬಾಡಿಯಲ್ಲಿ ನೆಲೆ ನಿಂತಿದ್ದಾಳೆ. ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆಯಾಗಿದೆ. ಕಾವೇರಿ ಆರತಿ ಕಾರ್ಯಕ್ರಮ ಎಷ್ಟು ದೊಡ್ಡ ಮಟ್ಟದ ಕಾರ್ಯಕ್ರಮವಾಗಿ ಬೆಳೆಯುತ್ತದೆ ಎಂಬುದನ್ನು ನಾನು ಈಗ ಹೇಳಲು ಹೋಗುವುದಿಲ್ಲ” ಎಂದರು.

“ನಾವು ಯಾರೂ ಸಹ ಶಾಶ್ವತರಲ್ಲ.‌ ಆದರೆ ನಾವು ಮಾಡುವ ಕೆಲಸಗಳು ಶಾಶ್ವತ. ಕೃಷ್ಣರಾಜ ಒಡೆಯರ್ ಅವರನ್ನು, ವಿಶ್ವೇಶ್ವರಯ್ಯ ಅವರನ್ನು ಸದಾ ನೆನಪಿನಲ್ಲಿಟ್ಟುಕೊಂಡಿದ್ದೇವೆ. ಏಕೆಂದರೆ ನಾವು ಬದುಕುವುದೇ ಸ್ವಲ್ಪಕಾಲ ಆದರೆ ಕೆಲಸಗಳು ಸದಾಕಾಲ ಉಲಿಯಬೇಕು. ಪ್ರಯತ್ನ ವಿಫಲವಾಗಬಹುದು ಆದರೆ ಪ್ರಾರ್ಥನೆ ವಿಫಲವಾಗಲು ಸಾಧ್ಯವಿಲ್ಲ. ಅದೇ ರೀತಿ ನಮ್ಮನ್ನು ಕಾವೇರಿ ತಾಯಿ ಎಂದೂ ಕೈ ಬಿಡುವುದಿಲ್ಲ. 92 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ತುಂಬಿ ಇತಿಹಾಸ ನಿರ್ಮಾಣವಾಗಿದೆ” ಎಂದರು.

“ಕಾವೇರಿ ಆರತಿಯನ್ನು ಹತ್ತು ಸಾವಿರ ಜನರು ಕುಳಿತು ವೀಕ್ಷಣೆ ಮಾಡುವಂತಹ ಸ್ಟೇಡಿಯಂ ಮಾದರಿ ಮಂಟಪ ನಿರ್ಮಾಣ ಮಾಡಿ ವಾರಕ್ಕೆ ಮೂರು ದಿನ ಆರತಿ ನಡೆಸುವುದು ನಮ್ಮ ಆಲೋಚನೆಯಾಗಿತ್ತು. ಕಾರಣಾಂತರಗಳಿಂದ ಇದು ಸಾಧ್ಯವಾಗಿಲ್ಲ. ಸಚಿವರಾದ ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ವಾರಣಾಸಿ, ಹರಿದ್ವಾರಗಳಲ್ಲಿ ನಡೆಯುವ ಗಂಗಾ ಆರತಿಯನ್ನು ಅಧ್ಯಯನ ಮಾಡಲು ತಂಡವನ್ನು ಕಳುಹಿಸಲಾಗಿತ್ತು. ಇವರು ವರದಿ ನೀಡಿದ್ದಾರೆ. ಆದಷ್ಟು ಬೇಗ ಇದು ನೆರವೇರುವಂತೆ ಆಗಲಿ” ಎಂದರು.

“ಮೇಕೆದಾಟು ಯೋಜನೆಗೆ ನಾವೆಲ್ಲರೂ ಹೆಜ್ಜೆ ಹಾಕಿದ್ದೇವೆ ಆದಷ್ಟು ಬೇಗ ಫಲ ದೊರಕುವಂತೆ ಕಾವೇರಿ ತಾಯಿ ಹಾಗೂ ಚಾಮುಂಡಿ ತಾಯಿ ಆಶೀರ್ವಾದ ಮಾಡುತ್ತಾರೆ. ರಾಜ್ಯದ ಜನರೂ ಸಹ ಪ್ರಾರ್ಥನೆ ಮಾಡಬೇಕೆಂದು ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾವು ರೂಪಿಸಿರುವ ಯೋಜನೆಯನ್ನು ಮುಂದುವರೆಸುತ್ತೇವೆ. ನಮಗೆ ತಾಯಿ ಚಾಮುಂಡಿ ಸಂಪೂರ್ಣವಾದ ಶಕ್ತಿ ನೀಡುತ್ತಾಳೆ ಎನ್ನುವ ಭರವಸೆಯಿದೆ ಎಂದು ಹೇಳಿದರು.

“ಅಧಿಕಾರಿಗಳಾದ ರಾಮ್ ಪ್ರಸಾತ್ ಮನೋಹರ್ ಅವರು ಬಳ್ಳಾರಿಯಲ್ಲಿದ್ದಾಗ ತುಂಗಾ ಆರತಿಯನ್ನು ಚೆನ್ನಾಗಿ ರೂಪಿಸಿದ್ದರು. ಆದ ಕಾರಣಕ್ಕೆ ಅವರಿಗೆ ಕಾವೇರಿ ಆರತಿ ಜವಾಬ್ದಾರಿ ನೀಡಲಾಗಿದೆ” ಎಂದರು.

ಗಂಗೆಯಷ್ಟೇ ಪಾವಿತ್ರ್ಯ ಹೊಂದಿರುವ ಕಾವೇರಿ ನದಿಗೆ ಕಾವೇರಿ ಆರತಿ ಮಾಡಿ ಭಕ್ತಿ ಭಾವದಿಂದ ನಮಿಸಿ ಪೂಜಿಸಬೇಕೆಂಬುದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕನಸಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2024ರಲ್ಲಿ ಕೆಆರ್‌ಎಸ್‌ನಲ್ಲಿ ಕಾವೇರಿಗೆ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಡಿಸಿಎಂ ಈ ವಿಷಯವನ್ನು ಘೋಷಣೆ ಮಾಡಿದ್ದರು‌. ಆನಂತರ ಶಾಸಕರ ನಿಯೋಗ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಿ ಗಂಗಾರತಿಯನ್ನು ವೀಕ್ಷಿಸಿ ಸರ್ಕಾರಕ್ಕೆ ವರದಿ ನೀಡಿತ್ತು. ಆ ಪ್ರಕಾರ ಸರ್ಕಾರ ಕಾವೇರಿ ಆರತಿ ಮಾಡಲು ತೀರ್ಮಾನ ಮಾಡಲಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಕೆ ಆರ್ ಎಸ್ ನಲ್ಲಿ ಕಾವೇರಿ ಆರತಿ ಜತೆಗೆ ಸಾಹಸ ಹಾಗೂ ಜಲ ಕ್ರೀಡೆ ಆಯೋಜನೆ: ವಾರಾಂತ್ಯದಲ್ಲಿ ಪ್ರವಾಸಿಗರಿಗೆ ರಸದೌತಣ

ಈ ಬಾರಿಯ ದಸರಾದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗುತ್ತಿರುವ ಕಾವೇರಿ ಆರತಿ ಕಾರ್ಯಕ್ರಮ ಈಗ ಸಾಹಸ ಕ್ರೀಡೆ ಹಾಗೂ ಜಲ ಕ್ರೀಡೆಗಳನ್ನು ಒಳಗೊಳ್ಳುವ ಮೂಲಕ ಪ್ರವಾಸಿಗರಿಗೆ ರಸದೌತಣ ಉಣಬಡಿಸಲು ಸಿದ್ಧವಾಗಿದೆ.

ಗಂಗಾರತಿ ಮಾದರಿಯಲ್ಲಿ ತಾಯಿ ಕಾವೇರಿಗೆ ಪೂಜೆ ಸಲ್ಲಿಸುವ ವರ್ಣರಂಜಿತ ಧಾರ್ಮಿಕ ಕಾರ್ಯಕ್ರಮದ ಜೊತೆಗೆ ಕರ್ನಾಟಕ ಸರ್ಕಾರವು ಪ್ರವಾಸಿಗರಿಗಾಗಿ ಕೆಆರ್ ಎಸ್ ಅಣೆಕಟ್ಟಿನಲ್ಲಿ ಕ್ರೀಡಾ ಉತ್ಸವಗಳನ್ನು ಆಯೋಜಿಸುತ್ತಿದೆ.

ರಾಜ್ಯ ಸರ್ಕಾರ ಈ ವರ್ಷ ಪ್ರಾಯೋಗಿಕವಾಗಿ ಕಾವೇರಿ ಆರತಿ ಕಾರ್ಯಕ್ರಮವನ್ನು ಮಾಡುತ್ತಿದೆಯಾದರೂ ಪ್ರವಾಸಿಗರ ನಿರೀಕ್ಷೆಗೂ ಮೀರಿದ ರೀತಿಯಲ್ಲಿ ವರ್ಣರಂಜಿತವಾಗಿ ಕಾರ್ಯಕ್ರಮ ಆಯೋಜಿಸಿದೆ.

ವಿಶೇಷವಾಗಿ ಮಕ್ಕಳನ್ನು ಆಕರ್ಷಿಸಲು ಸುಮಾರು 80 ಆಟಗಳನ್ನು ಪರಿಚಯಿಸಲಾಗಿದ್ದು, ವಾರಾಂತ್ಯದಲ್ಲಿ ಕುಟುಂಬ ಸಮೇತರಾಗಿ ಬಂದು ಅಮೂಲ್ಯ ಕ್ಷಣಗಳನ್ನು ಆನಂದಿಸುವ ವಾತಾವರಣ ಕಲ್ಪಿಸಲಾಗಿದೆ.

ಹೀಗಾಗಿ ಪ್ರವಾಸಿಗರು ಹಾಗೂ ರಾಜ್ಯದ ಜನ ಈ ವಾರಾಂತ್ಯದಲ್ಲಿ ಕೆಆರ್ ಎಸ್ ಗೆ ಆಗಮಿಸಿ ಈ ಆಕರ್ಷಕ ಕಣ್ತುಂಬಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದ್ದಾರೆ.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!