ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷೆ (Former Gram Panchayat President) ಸಾವನಪ್ಪಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಕೋನಪ್ಪಲ್ಲಿ ಗ್ರಾಮದಲ್ಲಿ ನಡೆದಿದೆ.
ಕೋನಪ್ಪಲ್ಲಿ ಗ್ರಾಮದ ಕದಿರಮ್ಮ (55 ವರ್ಷ) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಕದಿರಮ್ಮ ಕೋನಪ್ಪಲ್ಲಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷೆಯಾಗಿದ್ದು, ಗ್ರಾಮ ಹೊರವಲಯದ ತನ್ನದೇ ಜಮೀನಲ್ಲಿರುವ ಕೃಷಿ ಹೊಂಡದಲ್ಲಿ ಕೈಕಾಲು ತೊಳಿಯಲು ತೆರಳಿದ್ದ ವೇಳೆ ಆಯತಪ್ಪಿ ನೀರಿಗೆ ಬಿದ್ದು ಸಾವನಪ್ಪಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ.