JDS supports farmers' struggle: Nikhil Kumaraswamy

ರೈತರ ಹೋರಾಟಕ್ಕೆ ಜೆಡಿಎಸ್ ಬೆಂಬಲ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಬಿಡದಿಯಲ್ಲಿ ಮಾಡುತ್ತಿರುವ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ ಶಿಪ್ ಯೋಜನೆಯನ್ನು ಕೈ ಬಿಡುವಂತೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆಗ್ರಹಿಸಿದರು.

ಬೆಂಗಳೂರಿನ ಜೆ.ಪಿ ಭವನದ ಜೆಡಿಎಸ್ ಪಕ್ಷದ ರಾಜ್ಯ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಡದಿ ಟೌನ್ ಶಿಪ್ ವಿಚಾರವಾಗಿ ವಿಸ್ತೃತವಾಗಿ ಸರ್ಕಾರದ ರೈತ ವಿರೋಧಿ ನಿಲುವನ್ನು ತರಾಟೆಗೆ ತೆಗೆದುಕೊಂಡರು.

ನಾವು ನಾಳೆಯಿಂದ ಬೃಹತ್ ಹೋರಾಟ ಮಾಡುತ್ತೇವೆ. ಈ ಯೋಜನೆ ಕೈಬಿಡುವವರೆಗೂ, ರೈತರ ಬೆನ್ನೆಲುಬು ಆಗಿ ನಿಲ್ಲುತ್ತೇವೆ. ಇದು ಯಾವ ಹಂತಕ್ಕೆ ಹೋಗಲಿ. ನಾವು ಇರುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿಯವರು ಹೇಳಿದರು.

ಯಾವ ಕಾರಣಕ್ಕೂ ಜೆಡಿಎಸ್ ಪಕ್ಷ ರೈತರ ವಿಚಾರದಲ್ಲಿ ಹಿಂದೆ ಸರಿಯುವುದಿಲ್ಲ. ಈ ವಿಚಾರದಲ್ಲಿ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಈ ಯೋಜನೆಯನ್ನ ಕೈ ಬಿಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕೊನೆಯ ಹಂತದವರೆಗೂ ರೈತರ ಧ್ವನಿಯಾಗಿ ನಿಲ್ಲುತ್ತೇವೆ ಎಂದು ತಿಳಿಸಿದರು.

ಕಳೆದ ಹಲವಾರು ತಿಂಗಳಿಂದ ಬಿಡದಿ ಭಾಗದ ರೈತರು ತಮ್ಮ ಜಮೀನು ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ರಾಜ್ಯ ಸರ್ಕಾರ ರೈತರಿಗೆ ವಿಶ್ವಾಸಕ್ಕೆ ತಕ್ಕಂತೆ ವರ್ತಿಸುತ್ತಿಲ್ಲ ಅವರಲ್ಲಿ ಆಕ್ರೋಶ ಹೆಚ್ಚು ಮಾಡೋ ಕೆಲಸ ಮಾಡುತ್ತಿದೆ. GBDA ಅಧಿಕಾರಿಗಳು, ಪೊಲೀಸರು ರೈತರ ಬಳಿ ಹೋಗುತ್ತೀದಾರೆ. ಈ ವಿಚಾರದಲ್ಲಿ ರೈತರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಕಿಡಿಕಾರಿದರು.

ಬಹಳ ದಿನಗಳಿಂದ ರೈತರ ಜಮೀನು ಕಸಿದುಕೊಳ್ಳುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದನ್ನು ಖಂಡಿಸಿ ರೈತರು ಹೋರಾಟ ಮಾಡ್ತಿದ್ದಾರೆ. ನಾಳೆ ಜೆಡಿಎಸ್ ಪಕ್ಷ ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿ ತಾರ್ಕಿಕ ಅಂತ್ಯ ಕಾಣುವವರೆಗೂ ಹೋರಾಟ ನಡೆಸುತ್ತದೆ ಎಂದು ಗುಡುಗಿದರು.

ರೈತರ ವಿಚಾರದಲ್ಲಿ ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಸಹ ಇದೇ ರೀತಿ ಇತ್ತು. ಅಲ್ಲಿ ರೈತರು ಒಂದು ಸಾವಿರ ದಿನಗಳ ಕಾಲ ಹೋರಾಟ ಮಾಡಿದ್ದಾರೆ. ಅದೇ ರೀತಿ ಜೆಡಿಎಸ್ ಸರ್ಕಾರ ವಿರುದ್ಧ ಹೋರಾಟ ನಡೆಸಲಿದೆ. ಇದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಜೆಡಿಎಸ್ ಹೋಗುತ್ತದೆ ಎಂದು ಇದೇ ವೇಳೆ ತಿಳಿಸಿದರು.

ಇನ್ನು ಪ್ರತಿಭಟನೆಯಲ್ಲಿ ದೇವೇಗೌಡರು, ಕುಮಾರಸ್ವಾಮಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ. ನಮ್ಮ ಜೊತೆ ರೈತ ಹೋರಾಟಗಾರು ಇರುತ್ತಾರೆ. ಸಾಕಷ್ಟು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಮೂಡಿದೆ. ಅದನ್ನ ನಿಮ್ಮ ಮುಂದೆ ಇಡುತ್ತೇವೆ ಎಂದರು.

ಮೊದಲ ಈ 900 ಎಕರೆಯಲ್ಲಿ ಪೈಲೆಟ್ ಪ್ರಾಜೆಕ್ಟ್ ಮಾಡಿ ತೋರಿಸಿ. ಕೆಐಡಿಬಿ ಲ್ಯಾಂಡ್ ನಲ್ಲಿ ತೋರಿಸಿ. ಅಮೇಲೆ ಜನರಿಗೆ ವಿಶ್ವಾಸ ಮೂಡುತ್ತದೆ.ಜಿಬಿಡಿಎಗೆ ಯಾವುದೇ ಅನುಭವ ಇಲ್ಲ. ನಿಮಗೆ ಸಿಬ್ಬಂದಿ ಇದ್ದಾರೆ,ಹಣಕಾಸು ಮೂಲ ಇದೀಯಾ.? ಇದೆಲ್ಲರ ಕೊರತೆ ಕಾಣಿಸುತ್ತಿದೆ. ಸರ್ಕಾರ ಇದಕ್ಕೆ ಉತ್ತರ ನೀಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸರ್ಕಾರ ಪರಿಸರ ಕ್ಲೀಯರನ್ಸ್ ಇಲ್ಲಿಯವರೆಗೆ ಪಡೆದುಕೊಂಡಿಲ್ಲ. ಸಾಮಾಜಿಕ ಶೈಕ್ಷಣಿಕ ಸರ್ವೇ ಅಂತ ಎಲ್ಲರಿಗೂ ನ್ಯಾಯ ಕೋಡಬೇಕು ಅಂತ ಇದ್ದೀರಾ.! ಅಲ್ಲಿನ ಸುತ್ತಮುತ್ತ 10 ಹಳ್ಳಿಗಳ ಜನತೆ ಜೀವನ ನಡೆಸುತ್ತಿದ್ದಾರೆ. ಸರ್ಕಾರ ಇದರ ಬಗ್ಗೆ ನೋಡಬೇಕು ಎಂದು ವಾಗ್ದಾಳಿ ನಡೆಸಿದರು.

ರೈತರಿಗೆ ಪರಿಹಾರದ ಬಗ್ಗೆ ಡಿಕೆ ಶಿವಕುಮಾರ್ ಅವರು ಇಲ್ಲಿಯವರೆಗೂ ಸಭೆ ಮಾಡಿಲ್ಲ. ನಾನು ಡಿಸಿಎಂ ಅವರನ್ನ ಪ್ರಶ್ನೆ ಮಾಡ್ತೀನಿ. ರೈತರ ಜೊತೆ ಸೌಜನ್ಯಕ್ಕಾದರು ಒಂದು ಸಭೆ ಮಾಡಿಲ್ಲ. ರೈತರ ಮುಂದೆ ತೊಡೆ ತಟ್ಟಿರೋದು ನೋಡಿದ್ದೀವಿ. ನನ್ನ ತಡೆಯಿರಿ ಎಂದು ಸವಾಲು ಹಾಕಿದ್ದೀರಾ ಎಂದು ಡಿಸಿಎಂ ಶಿವಕುಮಾರ್ ಗೆ ನಿಖಿಲ್ ಪ್ರಶ್ನೆಸಿದರು.

ರೈತರ ಜಮೀನು ಮಾರಾಟ ಮಾಡದಂತೆ ಆದೇಶ ಮಾಡಿದ್ದೀರಾ.? ಅವರ ಮಕ್ಕಳ ಜೀವನಕ್ಕೆ ಏನು ಮಾಡಬೇಕು. ರೈತ ಬೀದಿಗೆ ಬರ್ತಾನೆ ಅದಕ್ಕೆ ಸಾಮಾಜಿಕ ಸಮೀಕ್ಷೆ ಮಾಡಿದ್ದೀರಾ.? ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರು ಇದ್ದಾರೆ. 10 ಹಳ್ಳಿಗಳ ರೈತರ ಜೊತೆ ಮಾತನಾಡಿದ್ದೀರಾ.?ರೈತರ ಜೊತೆ ಮಾಡಿದ್ದೀರಾ.ಇದು ಪ್ರಜಾಪ್ರಭುತ್ವ ವಿರೋಧಿ ಎಂದು ವಾಗ್ದಾಳಿ ನಡೆಸಿದರು

ಸೌಜನ್ಯಕ್ಕಾದರು ಸ್ಥಳೀಯ ರೈತರ ಜತೆ ಸಭೆ ಮಾಡದೇ, ತರಾತುರಿಯಲ್ಲಿ ಟೌನ್ ಶಿಪ್ ಯೋಜನೆ ಜಾರಿ ಮಾಡುತ್ತಿರುವ ಹಿಂದಿನ ಉದ್ದೇಶವೇನು? ರೈತರಿಗೆ ಇದರಿಂದಾಗುತ್ತಿರುವ ನಷ್ಟ ಹಾಗೂ ರೈತರ ಮುಂದಿನ ಬದುಕಿನ ಬಗ್ಗೆ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.

ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಶೇ. 80 ರಷ್ಟು ರೈತರು ಈ ಭೂಸ್ವಾಧೀನ ಪ್ರಕ್ರಿಯೆಗೆ ಪ್ರಬಲವಾದ ವಿರೋಧ ಮಾಡಿದ್ದಾರೆ. ಆದ್ದರಿಂದ ಈ ಕೂಡಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ನಿಲ್ಲಿಸಬೇಕು.

ಜಿಬಿಡಿಎ ಮತ್ತು ಪೋಲಿಸ ಅಧಿಕಾರಿಗಳು ರೈತರ ಮೇಲೆ ದೌರ್ಜನ್ಯ ಮಾಡುತ್ತಿದ್ದು, ಈ ಕೂಡಲೇ ಅವರ
ಮೇಲೆ ಕ್ರಮ ಕೈಗೊಳ್ಳಬೇಕು.

ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ ನವರು ಮಾಡಿರುವ ಯೋಜನಾ ವರದಿಯನ್ನು ಸಾರ್ವಜನಿಕಗೊಳಿಸಬೇಕು.

ಕೈಗಾರಿಕಾ ಉದ್ದೇಶಕ್ಕೆ ಬೆಂಗಳೂರು ಸುತ್ತಮುತ್ತ ಈಗಾಗಲೇ ಭೂಸ್ವಾಧೀನಗೊಂಡಿರುವ ಭೂಮಿಯ ಬಗ್ಗೆ ಶ್ವೇತಪತ್ರ ಹೊರಡಿಸುವುದು ಹಾಗೂ ಈಗ ಲಭ್ಯವಿರುವ ಭೂಮಿಯಲ್ಲಿ ಈ ಯೋಜನೆಯನ್ನು ಮಾಡುವುದು ಸೇರಿದಂತೆ ಇನ್ನೂ ಹಲವಾರು ವಿಷಯಗಳ ಬಗ್ಗೆ ಆಗ್ರಹಿಸಲಾಯಿತು.

ಇದೇ ವೇಳೆ ರೈತರ ಮೇಲೆ ಸರ್ಕಾರ ಮಾಡುತ್ತಿರುವ ದಬ್ಬಾಳಿಕೆ ಖಂಡಿಸಿ ಹಾಗೂ ಈ ಯೋಜನೆಯನ್ನು ಕೈ ಬಿಡುವಂತೆ ಸರ್ಕಾರವನ್ನು ಒತ್ತಾಯಿಸುವ ನಿಟ್ಟಿನಲ್ಲಿ ನಾಳೆ (ದಿನಾಂಕ 28-09-2025)ರ ಭಾನುವಾರ ರಾಮನಗರ ಜಿಲ್ಲೆಯ ಬೈರಮಂಗಲ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಹತ್ತಿರ ರೈತರೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ರೈತ ವಿರೋಧಿ ಸರ್ಕಾರದ ದೂರದೃಷ್ಟಿ ಇಲ್ಲದ ಯೋಜನೆಯಿಂದ ರೈತರನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಯೋಜನೆಯನ್ನು ಸರ್ಕಾರ ಕೈ ಬಿಡುವವರೆಗೆ ಪಕ್ಷದ ವತಿಯಿಂದ ಹೋರಾಟ ಮಾಡಲಾಗುವುದು ಎಂದು ತಿಳಿಸಲಾಯಿತು.

ರಾಜ್ಯದಲ್ಲಿ ನಡೆಯುತ್ತಿರುವ ಸಮೀಕ್ಷೆ ವಿಚಾರ

ಕಳೆದ ಎರಡು ದಿನಗಳಿಂದ ತಾಂತ್ರಿಕ ಕಾರಣದಿಂದ ಸ್ಥಗಿತ ಆಗಿದೆ. ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಎಷ್ಟು ಮನೆಗಳನ್ನ ತಲುಪಿದ್ದಾರೆ. ಇದುವರೆಗೂ 4 ಲಕ್ಷ ಮನೆ ತಲುಪಿದ್ದಾರೆ. ಸಮೀಕ್ಷೆ ಮಾಡೋಕೆ ಹೆಚ್ಚು ಹಣ ಆಗುತ್ತೆ. ಸಮೀಕ್ಷೆ ಮಾಡುವ ಶಿಕ್ಷಕರಿಗೆ ತರಬೇತಿ ಸಹ ನೀಡಿಲ್ಲ. 190 ಕೋಟಿ ಖರ್ಚು ಮಾಡಿರುವ ಕಾಂತರಾಜು ವರದಿಯನ್ನ ಬಿಡುಗಡೆ ಮಾಡಿ ಎಂದು ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದರು.

ಧರ್ಮಸ್ಥಳ ವಿಚಾರ

ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡುತ್ತಿದೆ. ಎಸ್‌ಐಟಿಯನ್ನ ತರಾತುರಿಯಲ್ಲಿ ಈ ಸರ್ಕಾರ ಮಾಡಿತು.ತನಿಖೆ ಮಾಡಿದ್ರು. ಇವರಿಗೆ ಏನು ಸಿಕ್ತು? ಏನು ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.

ಡಿಕೆ ಶಿವಕುಮಾರ್ ಅವರು ಸದನದಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಂದು ಹೇಳಿದ್ದರು. ಆದರೆ ಷಡ್ಯಂತ್ರ ಮಾಡಿದವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಧಾರ್ಮಿಕ ಕ್ಷೇತ್ರಕ್ಕೆ ಅಪಮಾನ ಮಾಡೋ ಕೆಲಸ ಮಾತ್ರ ಈ ಸರ್ಕಾರ ಮಾಡಿದೆ ಎಂದು ಹರಿಹಾಯ್ದರು.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!