ಕುಂದಾಣ ಬೆಟ್ಟದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

World Tourism Day celebrated at Kundana Hills

ಬೆಂ.ಗ್ರಾ.ಜಿಲ್ಲೆ (Kundana Hills): ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳೆಸುವ ಜತೆಗೆ ಪರಿಸರ ಸಮತೋಲನಕ್ಕಾಗಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ಜವಾಬ್ದಾರಿ ಇದ್ದು, ನಾವು ಪರಿಸರ ಸಮತೋಲನ ಕಾಪಾಡುವದರಿಂದ ಉತ್ತಮ ಆರೋಗ್ಯ, ಶುದ್ಧ ವಾತಾವರಣ ಪಡೆಯಲು ಸಾಧ್ಯವಾಗುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕುಂದಾಣ ಬೆಟ್ಟದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಮತ್ತು ಸುಸ್ಥಿರ ಪರಿವರ್ತನೆ ವಾಕ್ಯದೊಂದಿಗೆ ‘ಟ್ರಕ್ಕಿಂಗ್, ಸಸಿ ನೆಡುವ ಹಾಗೂ ಸ್ವಚ್ಛತಾ ಹೀ ಸೇವಾ ಆಂದೋಲನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ವಚ್ಛತೆ ಹಾಗೂ ಗಿಡ-ಮರಗಳು ಬೆಳೆಸೋದು ಕೇವಲ ಸರ್ಕಾರದ ಕೆಲಸ ಅಷ್ಟೇ ಅಲ್ಲ, ಸಾರ್ವಜನಿಕರ ಭಾಗವಹಿಸುವಿಕೆ ಅಗತ್ಯವಾಗಿದೆ. ಪರಿಸರ ಬೆಳೆಸುವ ಕಾರ್ಯದಿಂದ ರೋಗರುಜಿನಗಳು ತಡೆದು ಆಸ್ಪತ್ರೆಗೆ ಹೋಗುವದರಿಂದ ದೂರ ಉಳಿಯಲು ಸಾಧ್ಯವಾಗುತ್ತದೆ ಎಂದು ಸಾರ್ವಜನಿಕರಲ್ಲಿ ಪರಿಸರ ಅರಿವು ಮೂಡಿಸಿದರು.

ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಚಾರಣಕ್ಕೆ ಅನುಕೂಲಕರ ವಾತಾವರಣವನ್ನು ಜಿಲ್ಲಾಡಳಿತ ಕಲ್ಪಿಸುತ್ತಿದ್ದು, ಸಾರ್ವಜನಿಕರು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದಾಗ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಪ್ರಕೃತಿಯ ಸೌಂದರ್ಯ ಹಾಗೂ ಶುದ್ಧ ವಾತಾವರಣವನ್ನು ಆಸ್ವಾದಿಸಬೇಕು ಎಂದರು.

ಪರಿಸರ ಸಂರಕ್ಷಣೆ ಜತೆಗೆ ಪಕ್ಷಿಗಳಿಗೆ ಆಹಾರವಾಗುವಂತ ಹಣ್ಣು ಬಿಡುವ ಗಿಡ-ಮರ ಹೆಚ್ಚಾಗಿ ನೆಟ್ಟು, ಬೆಳೆಸುವ ಮೂಲಕ ಆರೋಗ್ಯಕರ ಪ್ರಕೃತಿ ನಿರ್ಮಿಸಿ ಪರಿಸರ ಸಮತೋಲನ ಕಾಪಾಡಬೇಕು ಎಂದು ಸಚಿವರು ಕರೆ ನೀಡಿದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮ ದಿನಾಚರಣೆ ಹಾಗೂ ಸ್ವಚ್ಛತೆಯೇ ಸೇವೆ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ಇದರ ಭಾಗವಾಗಿ ಜಿಲ್ಲೆಯಾದ್ಯಂತ ಕೆರೆ, ಕುಂಟೆ, ಕಲ್ಯಾಣಿಗಳು ಹಾಗೂ ಗ್ರಾಮದ ಸ್ವಚ್ಛತೆ ಜತೆಗೆ ಸಸಿ ನೆಡುವ ಕಾರ್ಯದಲ್ಲಿ ಜಿ.ಪಂ ಹಾಗೂ ಗ್ರಾ.ಪಂ ಪೌರಕಾರ್ಮಿಕರು ಬಹು ಉತ್ಸುಕತೆಯಿಂದ ಕಾರ್ಯಪ್ರವೃತ್ತರಾಗಿದ್ದಾರೇ. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ವಾತಾವರಣದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಇದಕ್ಕೂ ಮುನ್ನ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ ಸಸಿಗಳನ್ನು ನೆಡಲಾಯಿತು.

ಕಾರ್ಯಕ್ರಮದಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷರಾದ ಶಾಂತಕುಮಾರ್, ದೇವನಹಳ್ಳಿ ತಾಲೂಕು ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಜಗನ್ನಾಥ, ಕುಂದಾಣ ಗ್ರಾ.ಪಂ ಅಧ್ಯಕ್ಷರಾದ ವಿಜಯಮ್ಮ, ದೇವನಹಳ್ಳಿ ಪುರಸಭೆ ಅಧ್ಯಕ್ಷರಾದ ಡಿ.ಎಂ ಮುನಿಕೃಷ್ಣ, ಜಿ.ಪಂ ಮಾಜಿ ಸದಸ್ಯ ಮಂಜುನಾಥ, ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಪ್ರೀತಿ, ದೇವನಹಳ್ಳಿ ತಹಶೀಲ್ದಾರ್ ಅನೀಲ್ ಎಂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]