Arrest of rowdies

ಗುಡ್ಮಾರ್ನಿಂಗ್ ನ್ಯೂಸ್: ಆತಂಕ ಸೃಷ್ಟಿಸಿದ್ದ ಪುಡಿ ರೌಡಿಗಳ ಬಂಧನ

ಬೆಂಗಳೂರು; ದೊಡ್ಡಬಳ್ಳಾಪುರ ಸೇರಿದಂತೆ ವಿವಿಧೆಡೆ ಚಾಲಕರ ಸುಲಿಗೆ ಮಾಡಿ, ಹಲ್ಲೆ ನಡೆಸಿದ್ದ ಪುಡಿ ರೌಡಿಗಳನ್ನ (Rowdies) ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮೂವರು ಅಪ್ರಾಪ್ತರು ಸೇರಿ ಬ್ಯಾಡರಹಳ್ಳಿಯ ರತ್ನನಗರ ನಿವಾಸಿ ಜಯಂತ್ (19 ವರ್ಷ), ಲಿಖಿತ್ (18 ವರ್ಷ), ಕಾಮಾಕ್ಷಿ ಪಾಳ್ಯದ ಗಗನ್ (23 ವರ್ಷ) ಎಂದು ಗುರುತಿಸಲಾಗಿದೆ.

ಗುರುವಾರ ಬೆಳಗ್ಗಿನ ಜಾವ ದೊಡ್ಡಬಳ್ಳಾಪುರ (Doddaballapura) ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಡಿ ರೌಡಿಗಳ (Rowdy) ಗುಂಪೊಂದು ಆಟೋದಲ್ಲಿ ಬಂದು ವಾಹನ ಚಾಲಕರನ್ನು ಹೆದರಿಸಿ, ಹಣ ದೋಚುವ ಕೆಲಸ ಮಾಡಿತ್ತು.

ಇದಕ್ಕೂ ಮುನ್ನ ಇದೇ ರೌಡಿಗಳ ಗುಂಪು ಬ್ಯಾಡರಹಳ್ಳಿಯ ವಾಲ್ಮೀಕಿನಗರ ಮತ್ತು ಎಪಿನಗರದ ಮುದ್ದಯ್ಯನಪಾಳ್ಯದಲ್ಲಿ ಕಾರ್ ಗ್ಲಾಸ್ ಒಡೆದಿದಿದ್ದು, ನಂತರ ಮಾದನಾಯಕನಹಳ್ಳಿಯ ಮಾಗಡಿ ರೋಡ್ ಲಿಮಿಟ್ಸ್‌ನಲ್ಲಿ ವಾಹನ ಚಾಲಕರಿಗೆ ಮಾರಕಾಸ್ತ್ರ ತೋರಿಸಿ, ಬೆದರಿಸಿ ಹಣ ದೋಚಿದ್ದಾರೆ. ಲಾರಿ ಗ್ಲಾಸ್ ಒಡೆದ ದುರುಳರು ಚಾಲಕ ಮಲಗಿರುವುದನ್ನು ಗಮನಿಸಿ, ಹಣಕ್ಕಾಗಿ ಬೆದರಿಕೆ ಹಾಕಿದ್ದರು.

ಚಾಲಕ ಹೆದರಿ ಅವರಿಗೆ ಹಣ ಕೊಡಲು ಮುಂದಾದರೂ ಲಾಂಗ್ ಬೀಸಿ ಗಾಯಗೊಳಿಸಿದ್ದಾರೆ. ಜೊತೆಗೆ ಗ್ಯಾಂಗ್ ಮೊಬೈಲ್ ಫೋನ್ ಹಾಗೂ 5 ಸಾವಿರ ರೂ. ಹಣವನ್ನು ದೋಚಿ ಪರಾರಿಯಾಗಿದ್ದರು.

ಸಿಕ್ಕ ಸಿಕ್ಕ ಲಾರಿಗಳನ್ನ ಅಡ್ಡಹಾಕಿ ಲಾಂಗ್ ತೋರಿಸಿ, ಬೆದರಿಸಿ ಹಣ ವಸೂಲಿ ಮಾಡಿದೆ. ಕುಡಿದ ಮತ್ತಿನಲ್ಲಿ ಸುಮಾರು 20 ವಾಹನಗಳ ಗ್ಲಾಸ್‌ಗಳನ್ನು ಪುಡಿ ಪುಡಿ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅನ್ನಪೂರ್ಣೇಶ್ವರಿ ನಗರದ ಮುದ್ದಿನಪಾಳ್ಯದ ಬಳಿ ಐದಾರು ವಾಹನಗಳ ಗ್ಲಾಸ್ ಗಳನ್ನು ಒಡೆದು ಹಾಕಿದ್ದರು.

ಗುರುವಾರ ಬೆಳಗ್ಗಿನ ಜಾವ ಮೂರು ಗಂಟೆ ಸಮಯದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಆಲಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ಅಡ್ಡಗಟ್ಟಿರುವ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಚಾಲಕರು ಮತ್ತು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ಹಣ, ಮೊಬೈಲ್ ದೋಚಿ ಪರಾರಿಯಾಗಿತ್ತು.

ಆಟೋದಲ್ಲಿ ಬಂದಿರುವ 6 ಮಂದಿ ದುಷ್ಕರ್ಮಿಗಳು ಎರಡು ವಾಹನಗಳ ಮೇಲೆ ದಾಳಿ ನಡೆಸಿದ್ದರು.

ಘಟನೆಯಲ್ಲಿ ಕೋಲಾರ ಮೂಲದ ಮುನಿರಾಜು (33 ವರ್ಷ) ಎನ್ನುವವರು ಕ್ಯಾಂಟರ್‌ನಲ್ಲಿ ನೆಲಮಂಗಲದ ದಾಸರಯ್ಯನ ಪುರದ ಮಾರುಕಟ್ಟೆ ತರಕಾರಿ ಅನ್‌ಲೋಡ್ ಮಾಡಿ ಬರುವ ವೇಳೆ ಆಲಹಳ್ಳಿ ಬಳಿ ಎಕ್ಸಲೇಟರ್ ತೊಂದರೆ ಉಂಟಾಗಿ ರಸ್ತೆ ಬದಿ ನಿಲ್ಲಿಸಿ, ಕೆಳಗೆ ತೆರಳಿ ದುರಸ್ತಿಗೆ ಮುಂದಾಗಿದ್ದಾರೆ.

ಈ ವೇಳೆ ಆಟೋದಲ್ಲಿ ಬಂದ 6 ಮಂದಿ ದುಷ್ಕರ್ಮಿಗಳು ಏಕಾಏಕಿ ಕ್ಯಾಂಟರ್ ಗಾಜುಗಳನ್ನು ಲಾಂಗ್‌ನಿಂದ ಹೊಡೆದಿದ್ದಾರೆ, ಶಬ್ದ ಕೇಳಿ ಕ್ಯಾಂಟರ್ ಕೆಳಗೆ ರಿಪೇರಿ ಮಾಡುತ್ತಿದ್ದ ಮುನಿರಾಜು ಹೊರಗೆ ಬಂದಾಗ ಅವರ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಮುಂದಾಗಿದ್ದಾರೆ, ಈ ವೇಳೆ ತಪ್ಪಿಸಿಕೊಂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡುವ ವೇಳೆ ಆಯ ತಪ್ಪಿ ಬಿದ್ದಿದ್ದು, ಬೆನ್ನತ್ತಿ ಬಂದ ದುಷ್ಕರ್ಮಿಗಳು ಚಾಕು, ಲಾಂಗ್‌ನಿಂದ ಗಂಭೀರವಾಗಿ ಹಲ್ಲೆ ನಡೆಸಿ, ಮೊಬೈಲ್ ಸೇರಿದಂತೆ 75 ಸಾವಿರ ಮೌಲ್ಯದ ಹಣ ದೋಚಿದ್ದರು.

ಈ ಘಟನೆ ಬೆನ್ನಲ್ಲೇ ಸ್ವಲ್ಪ ದೂರದಲ್ಲಿ ಮತ್ತೊಂದು ಗೂಡ್ಸ್ ವಾಹನವನ್ನು ಅಡ್ಡಗಟ್ಟಿರುವ ಇದೇ ದುಷ್ಕರ್ಮಿಗಳು ಚಾಲಕ ಸೇರಿದಂತೆ ಮೂವರ ಮೇಲೆ ದಾಳಿ ಮಾಡಿ ಹಣ, ಮೊಬೈಲ್ ದೋಚಿದ್ದರೆ ಮತ್ತೆ ಮದುರೆ ಬಳಿ ಕೂಡ ವಾಹನಗಳ ಅಡ್ಡಗಟ್ಟಿ ಲೂಟಿ ಮಾಡಿ ಪರಾರಿಯಾಗಿದ್ದರು.

ಘಟನೆ ಬಗ್ಗೆ ಎಪಿ ನಗರ, ಬ್ಯಾಡರಹಳ್ಳಿ, ಮಾದನಾಯಕನಹಳ್ಳಿ ಮತ್ತು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!