Floods in Kalyana Karnataka; H.D. Kumaraswamy urges state government to urgently undertake relief work

ಕಲ್ಯಾಣ ಕರ್ನಾಟಕದಲ್ಲಿ ನೆರೆ; ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ನವದೆಹಲಿ: ಕಲ್ಯಾಣ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನೆರೆ ಹಾವಳಿಗೆ ಸಿಲುಕಿ ಸಂಕಷ್ಟಕ್ಕೆ ತುತ್ತಾಗಿರುವ ಜನರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ರಾಜ್ಯ ಸರ್ಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಪರಿಹಾರ ಕ್ರಮಗಳ ತ್ವರಿತ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ನಾನು ಖುದ್ದಾಗಿ ಕಲಬುರಗಿ, ಯಾದಗಿರಿ, ವಿಜಯಪುರ, ಬೀದರ್ ಮತ್ತು ರಾಯಚೂರು ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿ ಪರಿಹಾರ ಕಾರ್ಯ, ಆಗಿರುವ ನಷ್ಟದ ಬಗ್ಗೆ ಮಾಹಿತಿ ಪಡೆದು ತುರ್ತು ಕ್ರಮ ವಹಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು ಮತ್ತು ಕೊಪ್ಪಳ ಸೇರಿ ವಿವಿಧ ಜಿಲ್ಲೆಗಳಲ್ಲಿ ಭಾರೀ ಪ್ರವಾಹ ಉಂಟಾಗಿ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕ್ಷೇಮಕ್ಕಾಗಿ ನಾನು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ, ಅವರಿಗೆ ಅಗತ್ಯ ಸೌಕರ್ಯ ಕಲ್ಪಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯ ಎಂದು ಅವರು ಒತ್ತಿ ಹೇಳಿದ್ದಾರೆ.

ನೆರೆಪೀಡಿತ ಪ್ರತೀ ತಾಲ್ಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು ಮತ್ತು ಎಲ್ಲಾ ತುರ್ತು ಸೌಲಭ್ಯಗಳು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ಒತ್ತಾಯಿಸುತ್ತೇನೆ. ಆಹಾರ, ಕುಡಿಯುವ ನೀರು, ಉಡುಪು, ಹೊದಿಕೆ ಮತ್ತು ತುರ್ತು ಔಷಧಿಗಳ ಸಾಕಷ್ಟು ದಾಸ್ತಾನನ್ನು ವಿಳಂಬವಿಲ್ಲದೆ ಅಷ್ಟೂ ಜಿಲ್ಲೆಗಳಿಗೂ ತಲುಪಿಸಬೇಕು. NDRF ಮತ್ತು SDRF ಸಿಬ್ಬಂದಿ ರಕ್ಷಣಾ ಪ್ರಯತ್ನಗಳನ್ನು ತೀವ್ರಗೊಳಿಸಿ ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೆ ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಕೇಂದ್ರ ಸಚಿವರು ಸಲಹೆ ನೀಡಿದ್ದಾರೆ.

ವಿದ್ಯಾರ್ಥಿಗಳ ಬಗ್ಗೆಯೂ ವಿಶೇಷ ಗಮನ ಹರಿಸಬೇಕು. ಶಾಲೆ, ಹಾಸ್ಟೆಲ್‌ ಮತ್ತು ಶಿಕ್ಷಣ ಸಂಸ್ಥೆಗಳನ್ನು ತಕ್ಷಣವೇ ತಾತ್ಕಾಲಿಕ ಪರಿಹಾರ-ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಿ ನೆರೆಪೀಡಿತ ಕುಟುಂಬಗಳು, ಚಿಕ್ಕ ಮಕ್ಕಳು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಜನರ ಪ್ರಾಣ ನಷ್ಟದ ಜೊತೆಗೆ ಈ ಜಿಲ್ಲೆಗಳಲ್ಲಿ ತೀವ್ರ ಬೆಳೆನಷ್ಟ ಮತ್ತು ಹಾನಿ ಸಂಭವಿಸಿದೆ. ರೈತರ ಸ್ಥಿತಿ ಹೃದಯವಿದ್ರಾವಕವಾಗಿದ್ದು, ಅವರಿಗೆ ಸೂಕ್ತ-ಸಕಾಲಿಕ ಪರಿಹಾರ ಒದಗಿಸಬೇಕು. ಇದರಿಂದ ಅವರು ತಮ್ಮ ಜೀವನೋಪಾಯವನ್ನು ಮರಳಿ ಪಡೆಯಲು ಸಾಧ್ಯವಾಗುತ್ತದೆ. ಪಶು-ಪ್ರಾಣಿಗಳು ಅತೀವ ಸಂಕಷ್ಟಕ್ಕೆ ತುತ್ತಾಗಿವೆ. ವಿಶೇಷವಾಗಿ ಕೃಷಿ ಸಮುದಾಯದ ಜೀವನಾಡಿಯಾಗಿರುವ ಜಾನುವಾರುಗಳಿಗೆ ಮೇವು, ಆಶ್ರಯ ಮತ್ತು ವೈದ್ಯಕೀಯ ಆರೈಕೆ ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಜನಾರೋಗ್ಯ, ಪಶು ಆರೋಗ್ಯ ತಂಡಗಳನ್ನು ಸದಾ ಸನ್ನದ್ಧ ಸ್ಥಿತಿಯಲ್ಲಿಡಬೇಕು ಎಂದು ಸಚಿವರು ಒತ್ತಾಯ ಮಾಡಿದ್ದಾರೆ.

ಗೌರಿ ಗಣೇಶ ಹಬ್ಬದ ಸಮಯದಲ್ಲಿ ಬೀದರ್, ವಿಜಯಪುರ, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದು ಈಗಾಗಲೇ ಸಂಕಷ್ಟಕ್ಕೆ ತುತ್ತಾಗಿವೆ. ಆಯುಧ ಪೂಜೆ, ದಸರಾ, ದೀಪಾವಳಿಯ ಸಮಯದಲ್ಲಿ ಜನರು ಮತ್ತೆ ತೊಂದರೆ ಅನುಭವಿಸುವಂತೆ ಆಗಬಾರದು. ಆದ್ದರಿಂದ ಪರಿಹಾರ ಕಾರ್ಯಗಳು ನಿರಂತರವಾಗಿ ಮುಂದುವರಿಯಬೇಕು ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಕೇಂದ್ರ ಸರಕಾರವು ಕರ್ನಾಟಕದ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಕೇಂದ್ರ ಸಚಿವನಾಗಿ ಖಚಿತ ಭರವಸೆ ನೀಡುತ್ತೇನೆ. ನಮ್ಮ ಜನರ ಕ್ಷೇಮ ಮತ್ತು ಅವರ ಸುರಕ್ಷಿತ ಜೀವನೋಪಾಯಕ್ಕಾಗಿ ಕಾಳಜಿ ವಹಿಸಿ ಸಾಧ್ಯವಿರುವ ಎಲ್ಲ ಸಹಕಾರವನ್ನೂ ಕೇಂದ್ರವು ನೀಡಲಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!