Enough with the hit and run, put the documents against me before the people: DK Shivakumar challenges H.D. Kumaraswamy

ಬಿಡದಿ ರೈತರ ಹೋರಾಟ; ಡಿಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ನವದೆಹಲಿ: ಬಿಡದಿ ಟೌನ್ ಶಿಪ್ ದೇವೇಗೌಡರ ಪುತ್ರನ ಕೂಸು ಎಂದು ಆರೋಪ ಮಾಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು, ಬಿಡದಿ ಟೌನ್ʼಶಿಪ್ ಗಾಗಿ ರೈತರ ಒಂದು ಇಂಚು ಭೂಮಿಯನ್ನು ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಗುಡುಗಿದರು.

ಟೌನ್ ಶಿಪ್ ವಿರೋಧಿಸಿ ಬಿಡದಿ ಭಾಗದ ರೈತರು ಭಾನುವಾರ ನಡೆಸಿದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ನವದೆಹಲಿಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಸಚಿವರು ಮಾತನಾಡಿದರು.

ಬಡವರು, ರೈತರ ಭೂಮಿಯನ್ನು ಲೂಟಿ ಹೊಡೆಯುತ್ತಿರುವ ವ್ಯಕ್ತಿ ನನ್ನ ಬಗ್ಗೆ ಲಘವಾಗಿ ಮಾತನಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನಾನು ಒಬ್ಬ ರೈತನಾಗಿ ಬಿಡದಿಯಲ್ಲಿ ಜೀವನ ಕಟ್ಟಿಕೊಂಡಿದ್ದೇನೆ. ಆತನಂತೆ ಕೊಳ್ಳೆ ಹೊಡೆದ ಬಡವರ ಭೂಮಿಯಲ್ಲಿ ಶಾಲೆ, ಕಾಲೇಜು, ಮುಗಿಲೆತ್ತರದ ಕಟ್ಟಡಗಳನ್ನು ಸೇರಿ ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡಿಲ್ಲ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದರು.

ಬಡವರು, ದುರ್ಬಲರ ಭೂಮಿಯನ್ನು ದಬ್ಬಾಳಿಕೆ ಮಾಡಿ ಕಬಳಿಸಿರುವ ಡಿ ಕೆ ಶಿವಕುಮಾರ್ ವಿರುದ್ಧ ಹರಿಹಾಯ್ದ ಕುಮಾರಸ್ವಾಮಿ ಅವರು, ಕೆಲವು ಉದಾಹರಣೆಗಳು ಮತ್ತು ನೈಜ ಘಟನೆಗಳ ಸಮೇತ ರೈತರ ಗಮನಕ್ಕೆ ತಂದರು.

ಡಿಕೆಶಿ ವಿರುದ್ಧ ವಾಗ್ದಾಳಿ ಹೆಚ್ಡಿಕೆ

ಬಿಳ್ಳೆಕೆಂಪನಹಳ್ಳಿ ಗ್ರಾಮದ ಕೃಷ್ಣಮೂರ್ತಿ ಎಂಬ ವ್ಯಕ್ತಿ ಕರ್ನಾಟಕ ಹಣಕಾಸು ನಿಗಮ (KFC) ದಿಂದ ಸಾಲ ಪಡೆದು ಬೆಂಗಳೂರು-ಮೈಸೂರು ಮುಖ್ಯರಸ್ತೆಯಲ್ಲಿ ಹೋಟೆಲ್ ಮಾಡಿದ್ದರು. ಆ ಜಾಗವನ್ನು ದಬ್ಬಾಳಿಕೆಯಿಂದ ಖಾಲಿ ಮಾಡಿಸಿ, ಪುನಾ ಕಡಿಮೆ ಬೆಲೆಗೆ ಅದೇ ಜಾಗವನ್ನು ಖರೀದಿ ಮಾಡಿಸಿ ಅಲ್ಲೇ ಶಾಲಾ ಕಟ್ಟಡ ಕಟ್ಟಿಕೊಂಡಿದ್ದಾರೆ ಎಂದು ಡಿಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವರು ಗಂಭೀರ ಆರೋಪ ಮಾಡಿದರು.

ಇನ್ನೊಬ್ಬರು ರಾಮಸ್ವಾಮಿ ಅಂತ ಇದ್ದರು. ಅವರು ಭಾರತೀಯ ಸೇನೆಯಲ್ಲಿ ರಾಷ್ಟ್ರಸೇವೆ ಮಾಡಿ ಬಂದಿದ್ದರು. ಅವರು ತಮ್ಮ ಕಷ್ಟದ ಹಣದಿಂದ ಒಂದಿಷ್ಟು ಜಮೀನು ಖರೀದಿಸಿ ಬದುಕು ಕಟ್ಟಿಕೊಂಡಿದ್ದರು. ಆ ಭೂಮಿಯ ಮೇಲೆ ಡಿಕೆಶಿ ಕಾಕದೃಷ್ಟಿ ಬಿದ್ದಿತು. ಆ ಜಮೀನು ಬಿಟ್ಟುಕೊಡಿ ಎಂದು ಅವರಿಗೆ ಧಮ್ಕಿ ಹಾಕಿದ್ದರು. ಅವರು ಬಿಟ್ಟು ಕೊಡಲಿಲ್ಲ. ಕೊನೆಗೆ ಆ ಸೈನಿಕನ ಮಗಳನ್ನೇ ಕಿಡ್ನಾಪ್ ಮಾಡಿ ಆ ಜಮೀನನ್ನು ಬರೆಸಿಕೊಂಡಿದ್ದಾರೆ. ಇಂತಹ ನೀಚ ಕೆಲಸ ನಾವು ಮಾಡಿದ್ದೇವೆಯೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಬೆಂಗಳೂರು ಸುತ್ತಮುತ್ತ ನೈಸ್ ರಸ್ತೆ ಇದೆ. ಹೊಸಕೆರೆಹಳ್ಳಿ ಸುತ್ತಮುತ್ತ ಸಾರ್ವಜನಿಕರಿಂದ ಸ್ವಾಧೀನ ಮಾಡಿಕೊಂಡಿರುವ ಭೂಮಿಯನ್ನೂ ಡಿಕೆಶಿ ಕಬಳಿಸಿದ್ದಾರೆ. ಜತೆಗೆ, ಹಿಂದೆ ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ ಇದೇ ಶಿವಕುಮಾರ್ ಸಚಿವರಾಗಿದ್ದರು. ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ರಸ್ತೆ ಮಾಡುತ್ತೇವೆ ಭಾರೀ ಪ್ರಮಾಣದಲ್ಲಿ ಭೂಮಿಯನ್ನು ಸ್ವಾಧೀನ ಮಾಡಿಕೊಂಡರು. ಅದಕ್ಕೊಂದು ಪ್ರಾಧಿಕಾರ ಮಾಡಿ ಅದಕ್ಕೆ ಇವರೇ ಅಧ್ಯಕ್ಷರಾದರು. ಇಪ್ಪತ್ತು ವರ್ಷದ ಮೇಲೆ ಆಯಿತು. ರಸ್ತೆ ನಿರ್ಮಾಣ ಮಾಡಿದರಾ? ಇಲ್ಲ.. ಆ ಭೂಮಿಯನ್ನು ನುಂಗಲು ಹೊರಟಿದ್ದಾರೆ. ಆದರೆ ಕೇವಲ ಎರಡು ಮೂರು ವರ್ಷದಲ್ಲಿ ಬೆಂಗಳೂರು-ಮೈಸೂರು ನೂತನ ಹೆದ್ದಾರಿ ನಿರ್ಮಾಣವಾಯಿತು. ನಾನು ಸಿಎಂ ಆಗಿದ್ದಾಗ ಅತ್ಯಂತ ಕ್ಷಿಪ್ರಗತಿಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಲಾಯಿತು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಬಡವರ ಭೂಮಿಗೆ ಕನ್ನ ಹಾಕುವ ಇಂಥ ವ್ಯಕ್ತಿಗಳು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇವರಿಗೆ ಹೋರಾಟದ ಮೂಲಕವೇ ಉತ್ತರ ಕೊಡುತ್ತೇವೆ. ಯಾರೂ ಹೆದರಬೇಕಿಲ್ಲ. ಟೌನ್ ಶಿಪ್ ಹೆಸರಿನಲ್ಲಿ ಆ ಭಾಗದ ಫಲವತ್ತಾದ ಭೂಮಿಯನ್ನು ಲೂಟಿ ಮಾಡಲು ಹೊರಟಿದ್ದಾರೆ. ಅದಕ್ಕೆ ಅವಕಾಶ ನೀಡುವುದಿಲ್ಲ. ಒಂದು ಇಂಚು ಜಮೀನನ್ನು ಬಿಟ್ಟುಕೊಡುವುದಿಲ್ಲ ಎಂದು ಎಂದು ರೈತರಿಗೆ ಧೈರ್ಯ ತುಂಬಿದರು ಕೇಂದ್ರ ಸಚಿವರು.

ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ನಾನೂ ನಿಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತೇನೆ. ಖುದ್ದಾಗಿ ನಾನೇ ಬಂದು ಹೋರಾಟದಲ್ಲಿ ಭಾಗವಹಿಸುತ್ತೇನೆ. ರೈತರಿಗಾಗಿ ನನ್ನ ಆರೋಗ್ಯದ ಹಂಗು ತೊರೆದು ಹೋರಾಡುತ್ತೇನೆ. ಯಾರು ಬಂದು ಸ್ವಾಧೀನ ಮಾಡಿಕೊಳ್ಳುತ್ತಾರೋ ನೋಡೋಣ ಎಂದು ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಸವಾಲು ಹಾಕಿದರು.

ಈ ದೇಶದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ ರಾಜಕಾರಣಿ ಎಂದರೇ ಅದು ದೇವೇಗೌಡರು. ನಾನು ಎಂದೂ ಹೀಗೆ ಭೂಮಿಯನ್ನು ಕಿತ್ತುಕೊಂಡು ಅಭಿವೃದ್ಧಿ ಮಾಡುತ್ತೇನೆ ಎಂದು ಸುಳ್ಳು ಹೇಳಲಿಲ್ಲ. ನಾನು ಅಂದು ಯೋಜನೆಗಾಗಿ ಭೂಮಿ ಸ್ವಾಧೀನ ಮಾಡಿಕೊಂಡಿರಲಿಲ್ಲ. 40% ಭೂಮಿಯನ್ನು ರೈತರಿಗೇ ಉಳಿಸಿಕೊಳ್ಳಲು ಅವಕಾಶ ನೀಡದ್ದೆ. ನನ್ನ ಜೀವನದ ಕೊನೆಯವರೆಗೂ ರೈತರಿಗೆ ಅನ್ಯಾಯ ಮಾಡಲ್ಲ ಎಂದು ಅವರು ಹೇಳಿದರು

ಬಿಡದಿ ಟೌನ್‌ ಶಿಪ್‌ ನೆಪದಲ್ಲಿ ಜನರಿಗೆ ಸುಳ್ಳು ಅಂಕಿಅಂಶ ಹೇಳುತ್ತಿದ್ದಾರೆ. ಡಿಕೆಶಿ ಜತೆ ಅಧಿಕಾರಿಗಳು ಕುಮ್ಮಕ್ಕಾಗಿ ಭೂಮಿಯನ್ನು ಲೂಟಿ ಮಾಡಲು ಹೊರಟಿದ್ದಾರೆ. 9000 ಎಕರೆಯಲ್ಲಿ 3000-4000 ಎಕರೆಯಷ್ಟು ಸರಕಾರಿ ಭೂಮಿ ಇದೆ ಎಂದು ಸುಳ್ಳು ಹೇಳಿದ್ದರು. ಆದರೆ ಅಸಲಿಗೆ ಅಲ್ಲಿರುವ ಸರಕಾರಿ ಭೂಮಿ 700 ಎಕರೆ ಮಾತ್ರ ಎಂದು ತೋರಿಸುತ್ತಿದ್ದಾರೆ. ಟೌನ್ ಶಿಪ್ ಹೆಸರಲ್ಲಿ ಭೂಮಿ ಲೂಟಿ ಹೊಡೆಯಲು ಹೊರಟಿದ್ದಾರೆ ಅವರು ಆರೋಪಿಸಿದರು.

ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಹೆಚ್ದಿಕೆ

ಭೂಮಿ ಕೊಡಲು ನಿರಾಕರಿಸುತ್ತಿರುವ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಅಧಿಕಾರಿಗಳು, ಅದರಲ್ಲಿಯೂ ಪೊಲೀಸ್‌ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು; ನೀವು ತಪ್ಪು ಮಾಡುತ್ತಿದ್ದೀರಿ. ಮುಂದೆ ಅದರ ಫಲ ಅನುಭವಿಸಬೇಕಾಗುತ್ತದೆ. ನೀವು ಮಾಡಿರುವ ತಪ್ಪಿಗೆ ಜೈಲಿಗೂ ಹೋಗಬೇಕಾಗುತ್ತದೆ. ಈ ಸರಕಾರ ಇನ್ನು ಎರಡು ವರ್ಷ ಇರುತ್ತದೆ. ಆಮೇಲೆ ಏನಾಗುತ್ತದೆ ಎನ್ನುವುದು ನನಗೆ ಗೊತ್ತಿದೆ. ಯಾರೋ ಹೇಳುತ್ತಾರೆ ಎಂದು ಸುಖಾಸುಮ್ಮನೆ ರೈತರ ತಂಟೆಗೆ ಹೋಗಬೇಡಿ ಎಂದು ಎಚ್ಚರಿಕೆ ನೀಡಿದರು.

ರೈತರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ಮಾಡುವುದನ್ನು ನಿಲ್ಲಿಸಬೇಕು. ನಾನು ಕಾಣದ ಅಧಿಕಾರಿಗಳ ನೀವು? ನಿಮ್ಮ ನಡವಳಿಕೆಗಳು ನನಗೆ ಗೊತ್ತಿದೆ. ರೈತರಿಗೆ, ಸ್ಥಳಿಯರಿಗೆ ರಕ್ಷಣೆ ನೀಡುವಲ್ಲಿ ಸಣ್ಣ ಲೋಪವಾದರೂ ನಾನೇ ಅಲ್ಲಿಗೆ ಬರುತ್ತೇನೆ. ಪೋಲಿಸ್ ಅಧಿಕಾರಿಗಳಿಗೆ ಅವರು ಎಚ್ಚರಿಕೆ ನೀಡಿದರು .

ಒಂದು ವೇಳೆ ಅಧಿಕಾರ ದರ್ಪದಿಂದ ನೀವೇನಾದರೂ ರೈತರಿಗೆ ತೊಂದರೆ ಕೊಟ್ಟರೇ ನಾನೇ ಖುದ್ದು ಬರುತ್ತೇನೆ. ನಿಮಗೆ ಮತ್ತೆ ಮತ್ತೆ ಎಚ್ಚರಿಕೆ ನೀಡುತ್ತೇನೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಜೆಡಿಎಸ್ ಮುಗಿದು ಹೋಗುತ್ತದೆ ಎಂದು ನೀವು ಭಾವಿಸಿದ್ದರೆ ಅದು ಮೂರ್ಖತನ ಅಷ್ಟೇ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಹೇಳಿದರು.

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!