ಮೈಸೂರು: ಮೈಸೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (Social and educational survey) ಕಾರ್ಯಕ್ಕೆ ಹಾಜರಾಗದೆ, ಅಧಿಕಾರಿಗಳ ದೂರವಾಣಿ ಕೆರೆಯನ್ನು ಸ್ವೀಕರಿಸದೆ ಬೇಜವಾಬ್ದಾರಿ ಹಾಗೂ ಅತೀವ ನಿರ್ಲಕ್ಷ್ಯ ತೋರಿದ ಆರೋಪದಡಿ 8 ಸಹ ಶಿಕ್ಷಕರನ್ನು ಅಮಾನತು (Suspended) ಮಾಡಲಾಗಿದೆ.
ಜಿಲ್ಲಾ ಪಂಚಾಯತಿ ಸಿಇಒ ಎಸ್. ಯುಕೇಶ್ ಕುಮಾರ್ ಆದೇಶದ ಮೇರೆಗೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಟಿ. ಜವರೇಗೌಡ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಮೈಸೂರಿನ ಕೆಸರೆ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ರಾಜೇಂದ್ರ ನಗರದ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆ, ಜಾಕಿ ಕ್ವಾರ್ಟಸ್ರನ ಆದರ್ಶ ವಿದ್ಯಾಲಯ, ಹುಣಸೂರಿನ ಕರಸಿಗೌಡ ಬೀದಿಯ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ, ಮೈಸೂರಿನ ಬಿಬಿ ಗಾರ್ಡನ್‌ನ ಶ್ರೀಶಾರದಾ ಪ್ರೌಢಶಾಲೆ, ಹುಣಸೂರಿನ ಮರುಳಯ್ಯನಕೊಪ್ಪಲು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹುಣಸೂರು ತಾಲ್ಲೂಕಿನ ಕರಿಮುದ್ದನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಗುರುಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.