Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರು ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ

Astrology: ಮಂಗಳವಾರ, ಸೆಪ್ಟೆಂಬರ್ 30, 2025, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಇಂದು ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ವಿಶೇಷವಾಗಿ ಪ್ರಮುಖ ಹಣಕಾಸಿನ ವ್ಯವಹಾರಗಳನ್ನು ಮಾತುಕತೆ ಮಾಡುವಾಗ ದುಡಿಕಿನ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ನಿಮ್ಮ ಉದಾರ ವರ್ತನೆಯ ಲಾಭವನ್ನು ನಿಮ್ಮ ಸ್ನೇಹಿತರು ಪಡೆಯಲು ಬಿಡಬೇಡಿ. (ಭಕ್ತಿಯಿಂದ ಶ್ರೀ ಗ್ರಾಮ ದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ನಿಮ್ಮ ಮಗುವಿನಂತಹ ಸ್ವಭಾವ ಬೇರೆಯವರಿಗೆ ಅರ್ಥವಾಗುವುದಿಲ್ಲ. ಜ್ಞಾನ ಮತ್ತು ಅನುಭವವನ್ನು ಇತರರೊಂದಿಗೆ ಹಂಚಿಕೊಂಡರೆ ನಿಮ್ಮ ಜ್ಞಾನ ಮತ್ತಷ್ಟು ವೃದ್ಧಿಯಾಗುತ್ತದೆ. ಕಷ್ಟಪಟ್ಟು ಮಾಡುವ ಕೆಲಸ ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. (ಭಕ್ತಿಯಿಂದ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಗಣ್ಯ ವ್ಯಕ್ತಿಗಳೊಂದಿಗೆ ಸಂವಹನ ನಡೆಸುವುದು ಉತ್ತಮ ಆಲೋಚನೆಗಳು ಮತ್ತು ಯೋಜನೆಗಳನ್ನು ತರುತ್ತದೆ. ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಯನ್ನು ಅನುಸರಿಸಲು ಇಂದು ಉತ್ತಮ ದಿನವಾಗಿದೆ. ಆರ್ಥಿಕ ಹಣಕಾಸಿನ ವ್ಯವಹಾರಗಳಲ್ಲಿ ಜಾಗರೂಕರಾಗಿರಿ.
(ಭಕ್ತಿಯಿಂದ ಶ್ರೀ ಮಾತಾ ಅನ್ನಪೂರ್ಣೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಈ ದಿನ ನಿಮಗೆ ಪ್ರಮುಖವಾಗಿರುತ್ತದೆ. ಜವಳಿ ವ್ಯಾಪಾರದಲ್ಲಿ ಉತ್ತಮ ಲಾಭ ದೊರೆಯಲಿದ್ದು, ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹೂಡಿಕೆ ಮಾಡಬಹುದು. ಉದ್ಯೋಗದಲ್ಲೂ ಯಶಸ್ಸು ಕಾಣುವಿರಿ. (ಭಕ್ತಿಯಿಂದ ಶ್ರೀ ಲಲಿತಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ವ್ಯಾಪಾರಸ್ಥರಿಗೆ ಉತ್ತಮ ದಿನ. ವ್ಯಾಪಾರ ಉದ್ದೇಶಕ್ಕಾಗಿ ಕೈಗೊಂಡ ಹಠಾತ್ ಪ್ರವಾಸವು ಧನಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ವಿದೇಶಗಳೊಂದಿಗೆ ಸಂಬಂಧ ಹೊಂದಿರುವ ವ್ಯಾಪಾರಿಗಳು ಮತ್ತು ಉದ್ಯಮಿಗಳು ಇಂದು ಹಣಕಾಸಿನ ವ್ಯವಹಾರಕ್ಕೆ ಅನುಗುಣವಾಗಿ ಯಾವುದೇ ಹೆಜ್ಜೆ ಮುಂದಿಡುವ ಮೊದಲು ಎಚ್ಚರಿಕೆಯಿಂದ ಯೋಚಿಸಿ.ಮತ್ತು ವ್ಯವಹಾರದಲ್ಲಿ ಜಾಗರೂಕರಾಗಿರಿ. (ಭಕ್ತಿಯಿಂದ ಶ್ರೀ ಕನ್ನಿಕಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ವ್ಯಾಪಾರ ಅಥವಾ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆಯಿದೆ. ಸ್ವತಂತ್ರವಾಗಿ ಯೋಚಿಸಿ ಮತ್ತು ಹೊಸ ಹೂಡಿಕೆಗಳನ್ನು ಮಾಡಲು ನಿಮ್ಮ ಸ್ವಂತ ನಿರ್ಧಾರಗಳನ್ನು ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಚೌಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಗ್ರಹಗಳು ಮತ್ತು ನಕ್ಷತ್ರಗಳ ಲಾಭದಾಯಕ ಸ್ಥಾನದಿಂದಾಗಿ ಇಂದು ಹಣವನ್ನುಗಳಿಸಲು ಸಹಾಯವಾಗುತ್ತದೆ. ಜೊತೆಗೆ ಹಲವಾರು ಅವಕಾಶಗಳನ್ನು ಪಡೆಯುತ್ತೀರಿ.ಪ್ರಭಾವಿ ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ನಿಮ್ಮ ಬಾಂಧವ್ಯವನ್ನು ಸುಧಾರಿಸಲು ಅವಕಾಶ ಸಿಗುತ್ತದೆ. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ವೈಯಕ್ತಿಕ ವಿಷಯ ಗಳನ್ನು ಅರ್ಥ ಮಾಡಿಕೊಳ್ಳಲು ನೀವು ಉದಾರ ವಾಗಿರಿ.ವೃತ್ತಿ ಕ್ಷೇತ್ರದಲ್ಲಿ ಉತ್ತಮ ಫಲಿತಾಂಶಗಳನ್ನು ಪಡೆಯಲು ಏಕಾಗ್ರತೆ ಯಿಂದ ಕೆಲಸ ಕಾರ್ಯ ಗಳನ್ನು ಮಾಡಿ.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ಕಠಿಣ ಪರಿಶ್ರಮ ಕೈ ಹಿಡಿಯಲಿದೆ. ಇಂದು ನಿಮಗೆ ಕೆಲವು ಆರ್ಥಿಕ ಪ್ರತಿಫಲಗಳು ಸಿಗಲಿವೆ. ಇಂದು ಲಾಭದಾಯಕ ದಿನ ವಾಗಿರುತ್ತದೆ.ಸೆಮಿನಾರ್‌ಗಳು ಮತ್ತು ಪ್ರದರ್ಶನಗಳು ನಿಮಗೆ ಹೊಸ ಜ್ಞಾನ ಮತ್ತು ಸಂಪರ್ಕಗಳನ್ನು ಒದಗಿಸುತ್ತವೆ. (ಭಕ್ತಿಯಿಂದ ಶ್ರೀ ಚಾಮುಂಡೇಶ್ವರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಯಾವುದೇ ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವ ಮುನ್ನ ಎರಡು ಬಾರಿ ಯೋಚಿಸಿ. ನಿಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಳ್ಳುವುದರಿಂದ ನೀವು ಪ್ರಯೋಜನ ಪಡೆಯುತ್ತೀರಿ. ಖರ್ಚುವೆಚ್ಚಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಶಾರದಾ ಪರಮೇಶ್ವರಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಈ ದಿನ ನಿರ್ದಿಷ್ಟ ವಿಷಯದ ಬಗ್ಗೆ ನಿಮ್ಮ ಆಲೋಚನೆ ಬದಲಾಗಬಹುದು. ಇದರೊಂದಿಗೆ, ಆದಾಯವನ್ನು ಹೆಚ್ಚಿಸಲು ಕೆಲವು ಉತ್ತಮ ಅವಕಾಶಗಳನ್ನು ಸಹ ಪಡೆಯಬಹುದು. ಆನ್‌ಲೈನ್ ವಹಿವಾಟಿನಲ್ಲಿ ಜಾಗರೂಕರಾಗಿರಿ. ವಿದ್ಯಾರ್ಥಿಗಳು ವೃತ್ತಿ ಜೀವನದಲ್ಲಿ ಯಶಸ್ಸು ಕಾಣುವರು. (ಭಕ್ತಿಯಿಂದ ಶ್ರೀ ಕುಲದೇವತೆ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಕೆಲಸದ ಕಡೆಗೆ ಒಲವು ತೋರುತ್ತೀರಿ. ನಿಮ್ಮ ಶಕ್ತಿ ಮತ್ತು ಧೈರ್ಯದ ಬಲದಿಂದ ಯಶಸ್ಸು ಕಾಣುವಿರಿ, ಯುವಕರು ವೃತ್ತಿಗೆ ಸಂಬಂಧಿ ಸಿದ ಹೊಸ ಮಾಹಿತಿಯನ್ನು ಪಡೆಯುತ್ತಾರೆ. ಕೆಲಸ ಕಾರ್ಯಗಳಲ್ಲಿ ವಿಸ್ತರಣೆಗೆ ಹಣದ ಅವಶ್ಯಕತೆ ಬರಬಹುದು, ವಿಸ್ತರಣೆಯ ಯೋಚನೆಯನ್ನು ಸದ್ಯಕ್ಕೆ ಬಿಡುವುದು ಉತ್ತಮ.ಬ(ಭಕ್ತಿಯಿಂದ ಶ್ರೀ ಅಷ್ಟ ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ದುರ್ಗಾಷ್ಠಮಿ
ನಕ್ಷತ್ರ: ಪೂರ್ವಾಷಾಡ ನಕ್ಷತ್ರ

ಈ ದಿನದ ವಿಶೇಷ: ದುರ್ಗಾಷ್ಠಮಿ, ದೇವಿ ಮಹಾಗೌರಿ, ನೇರಳೆ ಬಣ್ಣ, ನೈವೇದ್ಯ ಕೋಸಂಬರಿ, ಪಾಯಸ, ಹೋಳಿಗೆ

ರಾಹುಕಾಲ: 03:00PM ರಿಂದ 04:30PM
ಗುಳಿಕಕಾಲ: 12:00PM ರಿಂದ 01:30PM
ಯಮಗಂಡಕಾಲ: 09:00AM ರಿಂದ 10:30AM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122‌.

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!