Enough with the hit and run, put the documents against me before the people: DK Shivakumar challenges H.D. Kumaraswamy

ಹಿಟ್ ಅಂಡ್ ರನ್ ಸಾಕು, ನನ್ನ ವಿರುದ್ಧ ಇರುವ ದಾಖಲೆಗಳನ್ನು ಜನರ ಮುಂದಿಡಿ: ಹೆಚ್.ಡಿ.ಕುಮಾರಸ್ವಾಮಿಗೆ ಡಿ.ಕೆ.ಶಿವಕುಮಾರ್ ಸವಾಲು

ಬೆಂಗಳೂರು: “ಕುಮಾರಸ್ವಾಮಿ (Kumaraswamy) ಅವರು ನನ್ನ ವಿಚಾರದಲ್ಲಿ ಕೇವಲ ಹಿಟ್ ಅಂಡ್ ರನ್ ಮಾಡುತ್ತಿದ್ದಾರೆ. ಇದಕ್ಕೆ ಕೊನೇ ಹಾಡಬೇಕು. ಮಾಧ್ಯಮಗಳೇ ಒಂದು ಸೂಕ್ತ ವೇದಿಕೆ ಕಲ್ಪಿಸಲಿ. ನಾನು, ಕುಮಾರಸ್ವಾಮಿ ಅವರ ಜೊತೆ ಬಹಿರಂಗ ಚರ್ಚೆ ಮಾಡಲು ಸಿದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಸವಾಲೆಸೆದಿದ್ದಾರೆ.

ಕೆಪಿಸಿಸಿ ಕಚೇರಿ ಹಾಗೂ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.

ನೀವು ಜೈಲಿಗೆ ಹೋಗುವ ದಿನ ಹತ್ತಿರವಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರಲ್ಲಾ ಎಂದು ಕೇಳಿದಾಗ, “ಮೊದಲಿನಿಂದಲೂ ನನ್ನನ್ನು ಜೈಲಿಗೆ ಹಾಕಿಸಲೇಬೇಕು ಎಂದು ಕುಮಾರಸ್ವಾಮಿ ಅವರು ಸಂಕಲ್ಪ ಮಾಡಿ ಷಡ್ಯಂತ್ರ ಮಾಡುತ್ತಿದ್ದಾರೆ. ಈಗಲೂ ಅದನ್ನೇ ಮುಂದುವರಿಸುತ್ತಿರುವುದಾಗಿ ಅವರೇ ಹೇಳಿದ್ದು, ಜೈಲಿಗೆ ಹೋಗುವ ದಿನ ಹತ್ತಿರಬರುತ್ತಿದೆ ಎಂದಿದ್ದಾರೆ. ಹಬ್ಬ ಮುಗಿದ ಬಳಿಕ ಅವರಿಗೆ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು.

ನನ್ನ ವಿರುದ್ಧ ಇರುವ ದಾಖಲೆ ಜನರ ಮುಂದಿಡಲಿ

“ಕುಮಾರಸ್ವಾಮಿ ಅವರು ತಮ್ಮ ಆಸೆ ವ್ಯಕ್ತಪಡಿಸಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಅವರ ಕುಟುಂಬ ನನ್ನ ಕುಟುಂಬದ ಮೇಲೆ ನಡೆಸುವ ಷಡ್ಯಂತ್ರ ಹೊಸತಲ್ಲ. ಈ ಹಿಂದೆ ನನ್ನ ತಂಗಿ, ತಮ್ಮ ಸೇರಿದಂತೆ ಎಲ್ಲರ ಮೇಲೂ ಪ್ರಯತ್ನ ಮಾಡಿದ್ದರು. ಇದಕ್ಕೆ ಕೊನೆ ಹಾಡಬೇಕು. ಈಗಲೂ ಅದನ್ನೇ ಮುಂದುವರಿಸುತ್ತಿರುವುದಾಗಿ ಅವರೇ ಹೇಳಿದ್ದು, ಜೈಲಿಗೆ ಹೋಗುವ ದಿನ ಹತ್ತಿರ ಬರುತ್ತಿದೆ ಎಂದಿದ್ದಾರೆ. ಅವರಿಗೆ ಉತ್ತರ ನೀಡುತ್ತೇನೆ. ಯಾವುದಾದರೂ ಒಂದು ಪ್ರತಿಷ್ಠಿತ ಮಾಧ್ಯಮದಲ್ಲಿ ಅವರನ್ನು ಹಾಗೂ ನನ್ನನ್ನು ಕರೆಸಿ. ಈ ಹಿಂದೆ ಸಾತನೂರಿನಲ್ಲಿ ಟಿ- 20 ಪಂದ್ಯ ನಡೆದಂತೆ ನಡೆಯಲಿ. ನಾನು ವಿಧಾನಸಭೆಯಲ್ಲಿ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದೆ. ಅವರು ಸಂಸತ್ತಿಗೆ ಹೊರಟು ಹೋದರು. ಅವರ ಬದಲು ಬೇರೆ ನಾಯಕರ ಜೊತೆ ಚರ್ಚೆ ಮಾಡೋಣ ಎಂದರೆ ಅವರ ಪಕ್ಷದಲ್ಲಿ ನಮಗೆ ಸರಿಸಮನಾದ ನಾಯಕರಿಲ್ಲ. ಹೀಗಾಗಿ ಮಧ್ಯಮಗಳೇ ನಮ್ಮ ನಡುವಿನ ಚರ್ಚೆಗೆ ವೇದಿಕೆ ಸಿದ್ಧಪಡಿಸಲಿ. ಈ ಹಿಂದೆ ಬಹಳಷ್ಟು ಬಾರಿ ಚರ್ಚೆಗೆ ಆಹ್ವಾನ ನೀಡಿದ್ದೆ, ಈಗಲೂ ಹೇಳುತ್ತಿದ್ದೇನೆ. ಸುಮ್ಮನೇ ಹಿಟ್ ಅಂಡ್ ರನ್ ಮಾಡುವುದಲ್ಲ. ನನ್ನ ವಿರುದ್ಧ ಅವರು ಮಾಡಿರುವ ಆರೋಪಗಳ ಬಗ್ಗೆ ಬಹಿರಂಗ ಚರ್ಚೆ ನಡೆಯಲಿ. ಅವರ ಕುಟುಂಬದ ಬಗ್ಗೆ ನನ್ನ ಬಳಿ ಇರುವ ಭಂಡಾರದಿಂದ ನಾನು ದಾಖಲೆಗಳನ್ನು ತೆಗೆದು ಇಡುತ್ತೇನೆ, ಅವರು ತಮ್ಮ ಭಂಡಾರದಿಂದ ನನ್ನ ವಿರುದ್ಧ ಇರುವ ದಾಖಲೆಗಳನ್ನು ಜನರ ಮುಂದಿಡಲಿ” ಎಂದು ಕುಟುಕಿದರು.

“ಜೈಲಿಗೆ ಹಾಕುವ ಅಧಿಕಾರ ಇರುವುದು ನ್ಯಾಯಾಧೀಶರಿಗೆ ಮಾತ್ರ. ನನ್ನ ವಿಚಾರದಲ್ಲಿ ಅವರೇ ನ್ಯಾಯಾಧೀಶರಂತೆ ಮಾತನಾಡುತ್ತಿದ್ದಾರೆ. ನ್ಯಾಯದೀಶರಂತೆ ವರ್ತಿಸುತ್ತಿರುವ ಅವರೂ ಕೂಡ ನ್ಯಾಯಾಲಯಕ್ಕೆ ಹೋಗುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯದ ನಿಯೋಗ ಹೋಗಲು ಸಿದ್ಧ

ನೆರೆ ಪರಿಹಾರ ಸೇರಿದಂತೆ ರಾಜ್ಯಕ್ಕೆ ಹೆಚ್ಚಿನ ಪರಿಹಾರ ಪಡೆಯಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಜೊತೆ ವಿಶ್ವಾಸ ಬೆಳೆಸಿಕೊಳ್ಳಬೇಕು ಎಂಬ ಕುಮಾರಸ್ವಾಮಿ ಅವರ ಸಲಹೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ಕೇಂದ್ರದ ಸಚಿವರು. ಅವರ ನೇತೃತ್ವದಲ್ಲೇ, ನಾಯಕತ್ವದಲ್ಲೇ ರಾಜ್ಯದ ನಿಯೋಗ ಕೇಂದ್ರ ಸರ್ಕಾರ ಹಾಗೂ ಪ್ರಧಾನಮಂತ್ರಿಗಳ ಬಳಿ ಹೋಗಲು ಸಿದ್ಧ. ಅವರು ಮಂಡ್ಯ, ರಾಮನಗರ ಸೇರಿದಂತೆ ರಾಜ್ಯದಲ್ಲಿ ಕೈಗಾರಿಕೆ ಸ್ಥಾಪಿಸಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದಾರೆ. ನಮ್ಮ ಸಹಕಾರ ಕೇಳಿದ್ದಾರೆ. ಅವರು ಎಲ್ಲಿ ಕೈಗಾರಿಕೆ ಸ್ಥಾಪಿಸಲು ಮುಂದಾಗುತ್ತಾರೋ ಸಂಪೂರ್ಣ ಸಹಕಾರ ನೀಡಲು ನಮ್ಮ ಸರ್ಕಾರ ಸಿದ್ಧ. ಅಥವಾ ಅವರ ಮಗ ಹೇಳಿದಂತೆ ಅವರದೇ ಜಮೀನಿನಲ್ಲಿ ಕೈಗಾರಿಕೆ ಮಾಡಿದರೂ ಅನುಮತಿ ನೀಡುತ್ತೇವೆ” ಎಂದು ತಿಳಿಸಿದರು.

ನಾನು ಬೆಂಗಳೂರಿನವನು, ನನ್ನ ಆಸ್ತಿ ಬೆಂಗಳೂರಿನಲ್ಲೇ ಇದೆ

ಬಿಡದಿ ಟೌನ್ ಶಿಪ್ ಮಾಡುತ್ತಿರುವುದು ರಿಯಲ್ ಎಸ್ಟೇಟ್ ಗಾಗಿ ಎಂಬ ಆರೋಪ ಬಗ್ಗೆ ಕೇಳಿದಾಗ, “ರಿಯಲ್ ಎಸ್ಟೇಟ್ ಬಗ್ಗೆ ಅವರಿಂದ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ನಾನು ಬೆಂಗಳೂರಿನವನು ನನ್ನ ಆಸ್ತಿ ಬೆಂಗಳೂರು ಜಿಲ್ಲೆಯಲ್ಲೇ ಇದೆ. ನಾನು ಹೊರಗಿನಿಂದ ಬಂದು ಜಮೀನು ತೆಗೆದುಕೊಂಡಿಲ್ಲ” ಎಂದು ಹರಿಹಾಯ್ದರು.

ಕುಮಾರಸ್ವಾಮಿಯೇ ದೂರು ನೀಡಿ ತನಿಖೆ ಮಾಡಿಸಲಿ

ಬ್ರಾಹ್ಮಣರ ಜಮೀನು ಲೂಟಿ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ಈಗಲೂ ಅಧಿಕೃತವಾಗಿ ದೂರು ಕೊಡಿಸಿ, ತನಿಖೆ ಮಾಡಿಸಲಿ. ನನಗೆ ಅಂತಹ ದಾರಿದ್ರ್ಯ ಬಂದಿಲ್ಲ” ಎಂದು ತಿಳಿಸಿದರು.

ನೆರೆ ಪೀಡಿತ ಪ್ರದೇಶಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕೇಳಿದಾಗ, “ಸಂಬಂಧ ಪಟ್ಟ ಎಲ್ಲಾ ಸಚಿವರು ಹೋಗಿದ್ದಾರೆ, ಮುಖ್ಯಮಂತ್ರಿಗಳು ಕೂಡ ಹೋಗಿ ಪರಿಶೀಲನೆ ಮಾಡಿದ್ದಾರೆ” ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಕಂಜೆಕ್ಷನ್ ಶುಲ್ಕ ವಿಧಿಸಲು ತೀರ್ಮಾನಿಸಲಾಗಿದೆಯೇ ಎಂದು ಕೇಳಿದಾಗ, “ಅದೆಲ್ಲವೂ ಸುಳ್ಳು, ಕೆಲವು ಉದ್ಯಮಿಗಳು ಬೆಂಗಳೂರಿನ ನಾಗರೀಕರಿಗೆ ಒಳ್ಳೆಯದಾಗಲಿ ಎಂದು ಹೇಳಿದ್ದಾರೆ. ಬೆಂಗಳೂರಿನ ಬಗ್ಗೆ ಆಸಕ್ತಿ ಇರುವವರು ಕೆಲವು ಸಲಹೆ ನೀಡುತ್ತಾರೆ. ನಾವು ಆ ಸಲಹೆಗಳನ್ನು ಪರಿಶೀಲನೆ ಮಾಡುತ್ತೇವೆ. ಇದನ್ನು ಕೇಂದ್ರ ಬಿಜೆಪಿ ಸರ್ಕಾರದ ಮುಂದಿಟ್ಟಿರುವ ಪ್ರಸ್ತಾಪವಿರಬೇಕು, ನಮ್ಮ ಮುಂದೆ ಇಂತಹ ಯಾವುದೇ ಪ್ರಸ್ತಾಪಗಳಿಲ್ಲ” ಎಂದು ತಿಳಿಸಿದರು.

ನಿಮ್ಮ ಸರ್ಕಾರಿ ನಿವಾಸದ ಮನೆ ಮುಂದೆ ಕಳಪೆ ರಸ್ತೆ ಕಾಮಗಾರಿ ನಡೆಸಿದ್ದು, ಈಗ ಮತ್ತೆ ದುರಸ್ತಿ ಮಾಡಿದ್ದಾರೆ ಎಂದು ಕೇಳಿದಾಗ, “ಬಿಜೆಪಿ ಶಾಸಕರ ಕ್ಷೇತ್ರಗಳ ಎಲ್ಲ ಕಾಮಗಾರಿಗಳೂ ಕಳಪೆಯೇ” ಎಂದು ಹೇಳಿದರು.

ಸಂಪುಟ ಪುನಾರಚನೆಯ ವಿಚಾರವಾಗಿ ಕೆಲವು ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರವಾಗಿ ಮಾಹಿತಿ ಇಲ್ಲ. ಇದರ ಬಗ್ಗೆ ಮಾಹಿತಿ ಇರುವವರು ಮಾತನಾಡುತ್ತಾರೆ” ಎಂದರು.

ನಾಡಿನ ಜನತೆಗೆ ದಸರಾ ಹಬ್ಬದ ಶುಭಾಷಯಗಳು

“ಕರ್ನಾಟಕ ರಾಜ್ಯದ ಮಹಾಜನತೆಗೆ ದಸರಾ ಹಬ್ಬದ ಶುಭಾಶಯಗಳು. ರಾಜ್ಯದಲ್ಲಿ ಉತ್ತಮ ಮಳೆ ಬೆಳೆ ಆಗುತ್ತಿದೆ. ಸರ್ಕಾರ ಹಾಗೂ ಪಕ್ಷದ ಪರವಾಗಿ ಎಲ್ಲರಿಗೂ ಶುಭ ಕೋರುತ್ತೇನೆ. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ದಸರಾ ಹಬ್ಬ ಆಚರಣೆಗೆ ಚಾಲನೆ ನೀಡಿದ್ದೇವೆ. ಈ ಬಾರಿ 11 ದಿನಗಳ ದಸರಾ ಆಚರಿಸುತ್ತಿದ್ದೇವೆ. ದುಃಖವನ್ನು ದೂರ ಮಾಡುವ ದೇವಿ ದುರ್ಗಾದೇವಿ. ಆ ದೇವಿಗೆ ವಿವಿಧ ಅಲಂಕಾರ ಮಾಡಿ ಹಬ್ಬ ಆಚರಿಸುತ್ತೇವೆ. ಮಂಗಳವಾರದಂದು ಪಕ್ಷದ ಕಚೇರಿ ಹಾಗೂ ವಿಧಾನಸೌಧದಲ್ಲಿ ಆಯುಧ ಪೂಜೆ ನೆರವೇರಿಸಿದ್ದೇವೆ” ಎಂದು ತಿಳಿಸಿದರು.

ಗಾಯಕ ಜುಬಿನ ಶ್ರದ್ಧಾಂಜಲಿ ಸಭೆಯಲ್ಲಿ ಭಾಗಿ

“ದೇಶದ ಪ್ರಖ್ಯಾತ ಸಂಗೀತ ಸಂಯೋಜಕರು, 40 ಭಾಷೆಗಳಲ್ಲಿ ಹಾಡಿರುವ ಗಾಯಕರು, 12 ವಾದ್ಯಗಳನ್ನು ನುಡಿಸಬಲ್ಲ ಕಲಾವಿದರಾದ ಅಸ್ಸಾಂನ ಜುಬಿನ್ ಗಾರ್ಗ್ ಅವರ ಆಕಸ್ಮಿಕ ನಿಧನ ಹಿನ್ನೆಲೆಯಲ್ಲಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪಕ್ಷದ ಪರವಾಗಿ ಪ್ರಾರ್ಥಿಸುತ್ತೇನೆ. ಪಕ್ಷದ ಸೂಚನೆ ಮೇರೆಗೆ ನಾನು ಬುಧವಾರ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದೇನೆ. ಚಿಕ್ಕ ವಯಸ್ಸಿನಲ್ಲಿ ಅನೇಕ ಸಾಧನೆ ಮಾಡಿರುವ ಮಹಾನ್ ಕಲಾವಿದರು ನಮ್ಮನ್ನು ಅಗಲಿದ್ದಾರೆ. ಅವರಿಗೆ ಗೌರವ ನೀಡಲಾಗುವುದು” ಎಂದು ತಿಳಿಸಿದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಎನ್.ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="116459"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!