Flood: Cmsiddaramaiah announces additional package along with NDRF relief

ಪ್ರವಾಹ: NDRF ಪರಿಹಾರದ ಜೊತೆಗೆ ಹೆಚ್ಚುವರಿ ಪ್ಯಾಕೇಜ್ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭೀಮಾ ಹಾಗೂ ಕೃಷ್ಣಾ ನದಿಗಳಲ್ಲಿ ಪ್ರವಾಹ (Flood) ಉಂಟಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಮಂಗಳವಾರ ಹೆಲಿಕಾಪ್ಟರ್ ಮೂಲಕ ಸಂಚರಿಸಿ ವಿವಿಧ ಭಾಗಗಳಲ್ಲಿ ಪರಿಸ್ಥಿತಿ ಅವಲೋಕನ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಬುರ್ಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ‌ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.

ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ‌ ವೈಮಾನಿಕ ಸಮೀಕ್ಷೆಗೆ ತೆರಳಿದರು. ಇದಾದ ಬಳಿಕ ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ಮಧ್ಯಾಹ್ನ 2:30 ರ ಸುಮಾರಿಗೆ ಕೈಗೊಂಡರು.

ಬಳಿಕ ಸುದ್ದಿಗೋಷ್ಠಿಯ NDRF ಹಣದ ಜೊತೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತೀ ಹೆಕ್ಟೇರ್ ಗೆ 8500 ರೂ ಪರಿಹಾರ ಕೊಡಲಿದೆ. ಇದರಿಂದಾಗಿ ಕುಷ್ಕಿ ಜಮೀನಿಗೆ ಹೆಕ್ಟೇರ್ ಗೆ 8500ರೂ+8500 ರೂ ಸೇರಿ ಒಟ್ಟು 17000 ಆಗ್ತದೆ.

ನೀರಾವರಿ ಜಮೀನಿಗೆ 17000+8500 ಸೇರಿ ಒಟ್ಟು 25500 ರೂ ಆಗ್ತದೆ, ಬಹುವಾರ್ಷಿಕ ಬೆಳೆಗೆ ಹೆಕ್ಟೇರ್ ಗೆ 22500+8500 ಸೇರಿ ಒಟ್ಟು 31000 ಸಾವಿರ ರೂಪಾಯಿ ಆಗ್ತದೆ ಎಂದು ಸಿ.ಎಂ ಘೋಷಿಸಿದರು.

ಪ್ರವಾಹದಿಂದ ಬೆಳೆ ಜೊತೆಗೆ ಮೂಲಭೂತ ಸೌಕರ್ಯಗಳು ಅಪಾರ ಪ್ರಮಾಣದಲ್ಲಿ ಹಾನಿ ಆಗಿರುವುದರಿಂದ ರಾಜ್ಯಕ್ಕೆ ಪರಿಹಾರ ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದರು.

ಸಿಎಂ ಸುದ್ದಿಗೋಷ್ಠಿಯ ಮುಖ್ಯಾಂಶಗಳು

ವೈಮಾನಿಕ ಸಮೀಕ್ಷೆ ಬಳಿಕ ಶಾಸಕರು, ಅಧಿಕಾರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಿ ನಾಲ್ಕು ಜಿಲ್ಲೆಗಳ ಪರಿಸ್ಥಿತಿ ಅವಲೋಕಿಸಿದ್ದೇನೆ.

ನಾಲ್ಕು ಜಿಲ್ಲೆಗಳಲ್ಲಿ 117 ಗ್ರಾಮಗಳು ಸಂಕಷ್ಟಕ್ಕೆ ಸಿಲುಕಿವೆ. 80 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ

ಕೃಷ್ಣ ನದಿಯಿಂದ ಅಪಾರ ಪ್ರಮಾಣದ ನೀರು ಬಿಟ್ಟಿರುವುದು ಹಾಗೂ ನಾಲ್ಕೂ ಜಿಲ್ಲೆಗಳಲ್ಲಿ ಆಗಸ್ಟ್-ಸೆಪ್ಟೆಂಬರ್ ನಲ್ಲಿ ವಿಪರೀತ ಮಳೆ ಆಗಿರುವುದೂ ಸೇರಿ ಅನಾಹುತ ಮತ್ತು ಸಂಕಷ್ಟದ ಪ್ರಮಾಣದ ಹೆಚ್ಚಾಗಿದೆ.

ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಆಗಿರುವ ಅಂದಾಜಿದೆ. ಈ ಪ್ರಮಾಣ ಇನ್ನೂ ಹೆಚ್ಚು ಆಗಬಹುದು. ಜಂಟಿ ಸಮೀಕ್ಷೆ ಪೂರ್ಣ ಆದ ಬಳಿಕ ಸ್ಪಷ್ಟವಾಗಿ ಗೊತ್ತಾಗುತ್ತದೆ. ಸದ್ಯ 5 ಲಕ್ಷ ಹೆಕ್ಟೇರ್ ನಲ್ಲಿ ಮಾತ್ರ ಜಂಟಿ ಸಮೀಕ್ಷೆ ಮುಗಿದಿದೆ. ಸಮೀಕ್ಷೆ ಪೂರ್ಣಗೊಂಡ ತಕ್ಷಣ ಹಣ ಅವರ ಖಾತೆಗಳಿಗೆ ಹಣ ಹೋಗುತ್ತದೆ.

ವಿಜಯಪುರ, ಬಾಗಲಕೋಟೆ, ಯಾದಗಿರಿ, ಬೀದರ್, ರಾಯಚೂರು, ಗದಗ್, ಕಲಬುರಗಿ, ಧಾರವಾಡ ಸೇರಿ 8 ಜಿಲ್ಲೆಗಳಲ್ಲಿ ಶೇ95 ರಷ್ಟು ಬೆಳೆ ಹಾನಿ ಆಗಿದೆ.

ಕಳೆದ ವರ್ಷ ಶೇ22 ರಷ್ಟು ಮಳೆ ಹೆಚ್ಚಾಗಿದೆ. ಈ ವರ್ಷ ಶೇ26 ರಷ್ಟು ಹೆಚ್ವು ಮಳೆ ಬಿದ್ದು ವಾಡಿಕೆಗಿಂತ ವಿಪರೀತ ಹೆಚ್ಚಿನ ಮಳೆ ಬಿದ್ದಿದೆ

ಅಗತ್ಯ ಇರುವ ಕಡೆ ತಾತ್ಕಾಲಿಕ, ಶಾಶ್ವತ ತಡೆಗೋಡೆ ಕಟ್ಟಿಸಿ ಅನಾಹುತದ ಪ್ರಮಾಣ ತಪ್ಪಿಸಲು ಸೂಚಿಸಲಾಗಿದೆ

ಪ್ರವಾಹ ಪೀಡಿತ ಗ್ರಾಮಗಳ ಶಾಲೆಗಳ fitness ಪರೀಕ್ಷಿಸುವುದನ್ನು ಕಡ್ಡಾಯವಾಗಿ ಜಿಲ್ಲಾಧಿಕಾರಿಗಳು ಗಮನಿಸಬೇಕು‌. Fitness ಇಲ್ಲದಿದ್ದರೆ ಶಾಲೆಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾಯಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸುವುದನ್ನು ಕಡ್ಡಾಯವಾಗಿ ಮಾಡಬೇಕು. ಇದರಲ್ಲಿ ನಿರ್ಲಕ್ಷ್ಯ ಸಹಿಸಲ್ಲ

ರಕ್ಷಣೆ ಮತ್ತು ಪರಿಹಾರದ ಹಣಕ್ಕೆ ಕೊರತೆ ಇಲ್ಲ. PD ಖಾತೆಯಲ್ಲಿ ಹಣ ಸಂಗ್ರಹ ಇದೆ. ತುರ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಗಳು ನಿರಂತರವಾಗಿ ನಡೆಸಲಾಗುತ್ತಿದೆ.

ಪ್ರವಾಹದಿಂದ ಕೃಷಿ ಭೂಮಿಯ ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿರುತ್ತದೆ. ಇದರಿಂದ ಪರಿಹಾರ ಕೊಟ್ಟರೂ ಬೆಳೆ ಬೆಳೆಯುವುದು ಕಷ್ಟ. ಹೀಗಾಗಿ ಕೆರೆಗಳಲ್ಲಿರುವ ಫಲವತ್ತಾದ ಹೂಳನ್ನು ತೆಗೆದು ಫಲವತ್ತತೆ ಕಳೆದುಕೊಂಡ ಕೃಷಿ ಭೂಮಿಗೆ ಹಾಕಲು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡುವ ಬಗ್ಗೆ ಚರ್ಚಿಸಲಾಯಿತು.

ಪ್ರವಾಹ ಪೀಡಿಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಧ್ಯಂತರ ಅವಧಿಗೆ “ಪ್ರಕೃತಿ ವಿಕೋಪದಿಂದ ಆದ ಹಾನಿ” ಎಂದು ಅಧಿಸೂಚನೆ ಹೊರಡಿಸುವಂತೆ ಸೂಚಿಸಲಾಯಿತು. ಕೆಲವು ಜಿಲ್ಲಾಧಿಕಾರಿಗಳು ಮಾತ್ರ ಹೊರಡಿಸಿದ್ದು ಉಳಿದವರೂ ಹೊರಡಿಸಿ ಎಂದು ಸೂಚಿಸಿದರು.

ಕೃಷಿ ವಿಮೆ ಸಮರ್ಪಕವಾಗಿ ಒದಗಿಸುವಂತೆ ವಿಮಾ ಕಂಪನಿಗಳಿಗೆ ಖಡಕ್ ಸೂಚನೆ ನೀಡಿದ ಅವರು, ಜಿಲ್ಲಾಧಿಕಾರಿಗಳು ಬ್ಯಾಂಕರ್ ಗಳ ಜೊತೆಗೆ ಚರ್ಚಿಸಬೇಕು. ಸಂತ್ರಸ್ಥ ರೈತರ ನೆರವಿಗೆ ಧಾವಿಸುವಂತೆ ಸೂಚಿಸಲಾಗಿದೆ ಎಂದರು.

ಗ್ರಾಮೀಣ ನೀರು ಸರಬರಾಜು ವ್ಯವಸ್ಥೆ ಪರೀಕ್ಷಿಸಬೇಕು. ಅಂತರ್ಜಲ ಕಲುಷಿತಗೊಳ್ಳುವ ಅಪಾಯ ಇರುವುದರಿಂದ ನೀರಿನ ಸ್ಯಾಂಪಲ್ ಗಳನ್ನು ಪರೀಕ್ಷಿಸುವುದನ್ನು ಅಭಿಯಾನದ ರೂಪದಲ್ಲಿ ನಡೆಸಲು ಸೂಚಿಸಲಾಗಿದೆ.

ಸಾಂಕ್ರಾಮಿಕ ರೋಗಗಳು ಹೆಚ್ಚುವ ಅಪಾಯವಿದ್ದು ಆರೋಗ್ಯ ರಕ್ಷಣೆಗೆ ಗಮನ ಹರಿಸಿ. ಶಾಲಾ ಮಕ್ಕಳ ಹಾಸ್ಟೆಲ್ ಗಳಲ್ಲಿ ಆರೋಗ್ಯ ತಪಾಸಣೆ ಕಡ್ಡಾಯವಾಗಿ ನಡೆಸಿ

ಮಳೆಯಲ್ಲಿ ದಾಖಲೆಗಳು, ಗುರುತಿನ ಚೀಟಿ ಕೊಚ್ಚಿ ಹೋಗಿರುವ , ಹಾಳಾಗಿರುವುದು ವರದಿಯಾಗಿದೆ. ಆ ಜನರು ಆತಂಕ ಪಡುವ ಅಗತ್ಯ ಇಲ್ಲದಂತೆ ಅಭಿಯಾನದ ರೂಪದಲ್ಲಿ ಹೊಸ ಗುರುತಿನ ಚೀಟಿ, ದಾಖಲೆಗಳು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಂಟಿ ಸಮೀಕ್ಷೆ ಅತ್ಯಂತ ಸಮರ್ಪಕ ಮತ್ತು ವೈಜ್ಞಾನಿಕವಾಗಿರುವಂತೆ ಎಚ್ಚರ ವಹಿಸಿ.

ಹವಾಮಾನ ಬದಲಾವಣೆಯ ತೀವ್ರ ಪರಿಣಾಮವನ್ನು ರಾಜ್ಯ ಎದುರಿಸುತ್ತಿದೆ. ಒಟ್ಟು ಎಂಟು ಜಿಲ್ಲೆಗಳಲ್ಲಿ ಇದರ ಪರಿಣಾಮ ಮತ್ತು ಅನಾಹುತಗಳು ಆಗಿವೆ

ರಾಜ್ಯದಲ್ಲಿ ಜೂನ್ 1 ರಿಂದ ಸೆಪ್ಟೆಂಬರ್ 29ರ ವರೆಗೆ ಸರಾಸರಿಯಂತೆ 845 ಮಿಮೀ ಮಳೆಯಾಗಬೇಕಾಗಿತ್ತು. ಆದರೆ 879 ಮಿಮೀ ಮಳೆಯಾಗಿದೆ. ವಾಡಿಕೆಗಿಂತ ಶೇ.4 ರಷ್ಟು ಹೆಚ್ಚಿನ ಮಳೆಯಾಗಿದೆ. ಕಳೆದ ವರ್ಷ ಇದೇ ಅವಧಿಯವರೆಗೆ 972 ಮಿಮೀ ಮಳೆಯಾಗಿತ್ತು. ಶೇ. 22 ರಷ್ಟು ಹೆಚ್ಚಿನ ಮಳೆಯಾಗಿತ್ತು. ಆದರೆ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಈ ವರ್ಷ ಹಿಂದೆಂದೂ ಕಾಣದ ಪ್ರಮಾಣದಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಸರಾಸರಿ ಮಳೆಯಾಗಬೇಕಾಗಿದ್ದದ್ದು 472 ಮಿಮೀಗಳು. ಆದರೆ ಈ ವರ್ಷ 576 ಮಿಮೀಗಳಷ್ಟು ಅಂದರೆ ಶೇ. 22 ರಷ್ಟು ಹೆಚ್ಚಿನ ಮಳೆಯಾಗಿದೆ.

ಬೆಳೆ ಹಾನಿ

ರಾಜ್ಯದಲ್ಲಿ ಪ್ರಾಥಮಿಕ ಅಂದಾಜಿನ ಪ್ರಕಾರ ಇದುವರೆಗೆ ಸುಮಾರು 960578 ಹೆಕ್ಟೇರುಗಳಷ್ಟು ಬೆಳೆ ಹಾನಿಯಾಗಿದೆ. ಇದರಲ್ಲಿ 888953 ಹೆಕ್ಟೇರುಗಳಷ್ಟು ಕೃಷಿ ಬೆಳೆಗಳು ಮತ್ತು 71624 ಹೆಕ್ಟೇರುಗಳಷ್ಟು ತೋಟಗಾರಿಕಾ ಬೆಳೆಗಳು ನಷ್ಟವಾಗಿದೆಯೆಂಬುದು ಪ್ರಾಥಮಿಕ ಅಂದಾಜು.

ಪೂರ್ಣ ಪ್ರಮಾಣದ ಸಮೀಕ್ಷೆಯ ನಂತರ ಈ ಪ್ರಮಾಣ ಹೆಚ್ಚೂ ಆಗಬಹುದು.

ಇದುವರೆಗಿನ ಮಾಹಿತಿಯ ಪ್ರಕಾರ ರಾಜ್ಯದಲ್ಲಿ 960578 ಹೆಕ್ಟೇರುಗಳಷ್ಟು ಬೆಳೆ ಹಾನಿಯಾಗಿದ್ದರೆ, ಉತ್ತರ ಕರ್ನಾಟಕದ ಈ 8 ಜಿಲ್ಲೆಗಳಲ್ಲಿಯೇ 903966 ಹೆಕ್ಟೇರುಗಳಷ್ಟು ಬೆಳೆಹಾನಿ ಸಂಭವಿಸಿದೆ. ಶೇ. 95 ರಷ್ಟು ಹಾನಿ ಈ ಜಿಲ್ಲೆಗಳಲ್ಲಿಯೇ ಸಂಭವಿಸಿದೆ. ಕಳೆದ ಎರಡು ತಿಂಗಳಿಂದ ನೆಲ ಒಣಗದಂತೆ ಮಳೆಯಾಗುತ್ತಿದೆ.

ಉತ್ತರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಣ ಹವೆಯ ಮೂಲಕ ಬೆಳೆಯುವ ಬೆಳೆಗಳಾದ ತೊಗರಿ, ಹತ್ತಿ, ಈರುಳ್ಳಿ ಮುಂತಾದ ಬೆಳೆಗಳನ್ನು ನಂಬಿ ರೈತರು ಬದುಕುತ್ತಾರೆ. ನಿರಂತರವಾಗಿ ಮಳೆ ಹಿಡಿದರೆ ಬೆಳೆಗಳು ಕೊಳೆಯಲಾರಂಭಿಸುತ್ತವೆ. ಈಗೀಗ ಮುಸುಕಿನ ಜೋಳ ಮುಂತಾದ ಬೆಳೆಗಳನ್ನು ಬೆಳೆಯುತ್ತಾರೆ. ಅವುಗಳೂ ಹಾನಿಯಾಗಿವೆ. ಅಧಿಕಾರಿಗಳು ರೈತರ ಭೂಮಿಗಳಿಗೆ ಹೋಗಿ ಸಮೀಕ್ಷೆ ಮಾಡಲಾಗದಷ್ಟು ತೇವಾಂಶ ಹೊಲಗಳಲ್ಲಿದೆ.

ಪ್ರವಾಹದಿಂದಾಗಿ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಟ್ಟಾರೆ 117 ಗ್ರಾಮಗಳು ತೊಂದರೆಗೊಳಗಾಗಿವೆ. ಈ ಜಿಲ್ಲೆಗಳ ವ್ಯಾಪ್ತಿಯಲ್ಲಿ 80 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.

(ಕಲ್ಬುರ್ಗಿಯಲ್ಲಿ 56, ವಿಜಯಪುರದಲ್ಲಿ 17, ಯಾದಗಿರಿಯಲ್ಲಿ 7 ). ಕಾಳಜಿ ಕೇಂದ್ರಗಳಲ್ಲಿ 10576 ಜನರಿದ್ದಾರೆ

ಮಾನವ ಪ್ರಾಣ ಹಾನಿ

ರಾಜ್ಯದಲ್ಲಿ ಜೂನ್ ಒಂದರಿಂದ ಈ ವರೆಗೆ ಮಳೆ ಹಾನಿಯಿಂದಾಗಿ 52 ಮಂದಿ ಮರಣ ಹೊಂದಿದ್ದಾರೆ. ಸೆಪ್ಟೆಂಬರ್ 28 ರವರೆಗಿನ‌ ಎಲ್ಲಾ ಸಾವುಗಳಿಗೂ ವಾರಸುದಾರರಿಗೆ ಪರಿಹಾರ ನೀಡಲಾಗಿದೆ.(ಗೋಡೆ ಕುಸಿದು 15 ಮಂದಿ, ನೀರಿನಲ್ಲಿ ಮುಳಗಿ ಅಥವಾ ಕೊಚ್ಚಿ ಹೋಗಿ 23 ಮಂದಿ ಮರಣ ಹೊಂದಿದ್ದಾರೆ)‌.

ಜಾನುವಾರು ಪ್ರಾಣ ಹಾನಿ

ರಾಜ್ಯದಲ್ಲಿ ಒಟ್ಟು 422 ಜಾನುವಾರುಗಳು ಮರಣ ಹೊಂದಿವೆ. ಇದರಲ್ಲಿ ಯಾದಗಿರಿ ಜಿಲ್ಲೆ ಒಂದರಲ್ಲೇ 245 ಜಾನುವಾರುಗಳು ಮರಣ ಹೊಂದಿವೆ. ಕಲಬುರಗಿ ಜಿಲ್ಲೆಯಲ್ಲಿ 27, ವಿಜಯಪುರದಲ್ಲಿ 3, ಬೀದರ್ ಜಿಲ್ಲೆಯಲ್ಲಿ 38 ಜಾನುವಾರುಗಳು ಮರಣ ಹೊಂದಿವೆ. ಈ ಪೈಕಿ 407 ಜಾನುವಾರುಗಳ ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ.

ಮನೆ ಹಾನಿ

547 ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಇವುಗಳಿಗೆ ತಲಾ 1.20 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅನಧಿಕೃತವಾಗಿ ನಿರ್ಮಿಸಿದ್ದ 62 ಮನೆಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲಾಗಿದೆ

ಭಾಗಶಃ ಹಾನಿಯಾದ ಮನೆಗಳು (ಶೇ.50 ರಿಂದ 75). ಇವುಗಳಿಗೆ ತಲಾ 50 ಸಾವಿರ ರೂ.ಗಳ ಪರಿಹಾರ ವಿತರಿಸಲಾಗಿದೆ.

ಶೇ.20ರಿಂದ 50ರಷ್ಟು ಹಾನಿಯಾದ ಮನೆಗಳ ಸಂಖ್ಯೆ 3166. ಶೇ.15ರಿಂದ 20ರಷ್ಟು ಹಾನಿಯಾಗಿದ್ದ 3881 ಮನೆಗಳಿಗೆ 6500 ರೂ. ಪ್ರಕಾರ ಪರಿಹಾರ ನೀಡಲಾಗಿದೆ.

ಒಟ್ಟಾರೆ ಇದುವರೆಗೆ 23.12 ಕೋಟಿ ರೂ.ಗಳನ್ನು ಪರಿಹಾರವಾಗಿ ಮನೆಗಳನ್ನು ಕಳೆದುಕೊಂಡವರಿಗೆ ನೀಡಲಾಗಿದೆ.

ಬಟ್ಟೆ ಮತ್ತು ಗೃಹ ಬಳಕೆ ವಸ್ತುಗಳನ್ನು ಕಳೆದುಕೊಂಡ 4858 ಕುಟುಂಬಗಳಿಗೆ ಈ ವರೆಗೆ 2.42 ಕೋಟಿ ರೂ.ಗಳ ಪರಿಹಾರ ನೀಡಲಾಗಿದೆ.

ರಸ್ತೆ, ಸೇತುವೆ ಮುಂತಾದವುಗಳ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಸಮೀಕ್ಷೆ ಪೂರ್ಣಗೊಂಡು ವರದಿ ಬಂದ ಕೂಡಲೇ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪ್ರತಿ ಕ್ಷೇತ್ರಕ್ಕೆ ವಿಶೇಷ ಅನುದಾನದ ರೂಪದಲ್ಲಿ 25 ರಿಂದ 50 ಕೋಟಿ ರೂ. ನೀಡಲಾಗಿದೆ ಎಂದರು.

ರಾಜಕೀಯ

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ TAPMCS ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ..!

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಡಿ.ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಎನ್.ಜಗನ್ನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="116459"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!