Tribute to Inspector Rao Ganesh Janardhan who was awarded the President Medal

ದೊಡ್ಡಬಳ್ಳಾಪುರ: ರಾಷ್ಟ್ರಪತಿ ಪದಕ ಪುರಸ್ಕೃತ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರಿಗೆ ಸನ್ಮಾನ

ಬೆಂಗಳೂರು: ರಾಷ್ಟ್ರಪತಿ ಪದಕ ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ (Rao Ganesh Janardhan) ಅವರನ್ನು ನಗರಸಭೆ ಸದಸ್ಯ ಅಲ್ತಾಫ್ ಸನ್ಮಾನಿಸಿದರು.

ದೊಡ್ಡಬಳ್ಳಾಪುರ ನಗರಸಭೆಯ ಚಿಕ್ಕಪೇಟೆ ವಾರ್ಡ್ ಸದಸ್ಯ ಅಲ್ತಾಫ್ ಅವರು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರನ್ನು ಸನ್ಮಾನಿಸಿ, ಸೇವಾ ಕಾರ್ಯವನ್ನು ಪ್ರಶಂಸೆ ವ್ಯಕ್ತಪಡಿಸಿದರು.

ಈ ವೇಳೆ ಮುಖಂಡರಾದ ಶ್ರೀನಗರ ಬಶೀರ್, ಮೂರ್ತಿ, ಮತಿನ್, ಮನ್ನಾನ್, ಹಸೀಬ್ ಮತ್ತಿತರರಿದ್ದರು.

ಹೊಸಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ಅವರ ಸೇವಾ ಕಾರ್ಯವನ್ನು ಮೆಚ್ಚಿ ಆಗಸ್ಟ್ 30 ರಂದು ಬೆಂಗಳೂರಿನ ರಾಜಭವನದಲ್ಲಿ ನಡೆದ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ 2025 ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪದಕವನ್ನು ವಿತರಣೆ ಮಾಡಿದ್ದರು.

ಆ ವೇಳೆ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಡಾ.ಜಿ.ಪರಮೇಶ್ವರ್ ಮತ್ತಿತರರಿದ್ದರು.

ಇನ್ಸ್ಪೆಕ್ಟರ್ ರಾವ್ ಗಣೇಶ್ ಜನಾರ್ಧನ್

ರಾವ್ ಗಣೇಶ್ ಜನಾರ್ಧನ್ ಅವರು 2003 ರಲ್ಲಿ ಪೊಲೀಸ್ ಸಬ್ಇನ್ಸ್ ಪೆಕ್ಟರ್ ಆಗಿ ಪೊಲೀಸ್ ಇಲಾಖೆಗೆ ಸೇರಿದ್ದು, ಸೇವೆಗೆ ಸೇರಿದಾಗಿನಿಂದಲೂ ಕಳಂಕವಿಲ್ಲದ ಶ್ರದ್ದೆ, ನಿಷ್ಟೆ ಮತ್ತು ಪ್ರಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ‌.

2005 ರಲ್ಲಿ ಬೆಂಗಳೂರು ನಗರದ ನಿಯಂತ್ರಣ ಕೋಣೆಗೆ ಸ್ಥಳ ನಿಯುಕ್ತಿಗೊಂಡಾಗ ನಿಯಂತ್ರಣ ಕೋಣೆಗೆ ಬರುವ ಪ್ರಮುಖ ಕರೆಗಳನ್ನು ಸಮಯ ಪ್ರಜ್ಞೆಯಿಂದ ಹಾಗೂ ಕಾಲವಿಳಂಬವಿಲ್ಲದೇ ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸುವ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅಪರಾಧಗಳನ್ನು ತಡೆಗಟ್ಟಲು ಶ್ರಮವಹಿಸಿದ್ದಾರೆ.

ಆನಂತರ 2005ನೇ ಡಿಸೆಂಬರ್ 28 ರಂದು ಭಾರತ ವಿಜ್ಞಾನ ಸಂಸ್ಥೆಯಲ್ಲಿ ನಡೆದ ಗುಂಡಿನ ದಾಳಿಯ ಪ್ರಕರಣವನ್ನು ತನಿಖೆ ನಡೆಸುವಲ್ಲಿ ತನಿಖಾ ತಂಡದ ಸದಸ್ಯರಾಗಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿರುತ್ತಾರೆ.

2006 ರಲ್ಲಿ ಶಿವಾಜಿನಗರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಸರಹದ್ದಿನಲ್ಲಿ ಸಾರ್ವಜನಿಕರಿಗೆ ಹಲವು ತರಬೇತಿ ಕಾರ್ಯಕ್ರಮಗಳನ್ನು ನಡೆಸಿರುತ್ತಾರೆ. ಇವರ ಪರಿಶ್ರಮದಿಂದ ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2012ನೇ ಸಾಲಿನಲ್ಲಿ ಅತ್ಯಂತ ಕಡಿಮೆ ಅಪಘಾತಗಳು ಮತ್ತು ಅಪಘಾತ ಸಾವುಗಳು ದಾಖಲಾಗಿರುತ್ತವೆ.

ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆ, ಚಾಲಹಳ್ಳಿ ಸಂಚಾರ ಪೊಲೀಸ್ ಠಾಣೆ, ಅಶೋಕನಗರ ಸಂಚಾರ ಪೊಲೀಸ್ ಠಾಣೆ, ಹೆಚ್.ಎಸ್.ಆರ್ ಲೇಔಟ್ ಸಂಚಾರ ಪೊಲೀಸ್ ಠಾಣೆಗಳಲ್ಲಿ ಅಪಾರ ಶ್ರಮವಹಿಸಿ, ಸುಗಮ ಸಂಚಾರಕ್ಕೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಚಾರ ಸುಗಮಗೊಳಿಸಿರುತ್ತಾರೆ ಹಾಗೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಅಪಘಾತಗಳನ್ನು ತಡೆಯುವಲ್ಲಿ ಮತ್ತು ಪ್ರಾಣಹಾನಿಗಳನ್ನು ತಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.

ಎಸ್.ಆರ್. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಗಳನ್ನು ಯಶಸ್ವಿಯಾಗಿ ಪತ್ತೆ ಮಾಡಿರುತ್ತಾರೆ ಹಾಗೂ ಅಪರಾಧಗಳನ್ನು ತಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ.

ಆನಂತರ ನಗರ ವಿಶೇಷ ಶಾಖೆಗೆ ವರ್ಗಾವಣೆಗೊಂಡ ಇವರು ಪೊಲೀಸ್ ಪರಿಶೀಲನಾ ಪತ್ರಗಳು, ಪೊಲೀಸ್ ನಿರಾಕ್ಷೇಪಣಾ ಪತ್ರಗಳ ಗಣಕೀಕರಣಕ್ಕೆ ಶ್ರಮಿಸಿರುತ್ತಾರೆ. ಇದರಿಂದಾಗಿ ಸಾರ್ವಜನಿಕರು ಪಿ.ಸಿ.ಸಿ, ಪಿ.ವಿ.ಸಿ ಪತ್ರಗಳನ್ನು ಪಡೆಯಲು ಪ್ರಕ್ರಿಯೆ ಸರಳೀಕರಣವಾಗಿರುತ್ತದೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರ್ಗಾವಣೆಗೊಂಡು ಅಲ್ಲಿಯೂ ಸಹ ಅತ್ಯುತ್ತಮ ಸೇವೆಯನ್ನು ಸಲ್ಲಿಸಿದ ಇವರು ಹಿರಿಯ ಅಧಿಕಾರಿಗಳ ಪ್ರಶಂಸೆಗೊಳಗಾಗಿರುತ್ತಾರೆ.

ಇವರ ಇಲ್ಲಿಯವರೆಗೆ ಪೊಲೀಸ್ ಇಲಾಖೆಯಲ್ಲಿ ಅತ್ಯಂತ ದಕ್ಷತೆ, ವೃತ್ತಿ ನಿಷ್ಠೆ, ಪ್ರಾಮಾಣಿಕತೆಯಿಂದ ಸಲ್ಲಿಸಿದ ಸೇವೆಯನ್ನು ಮೆಚ್ಚಿ ರಾಷ್ಟ್ರಪತಿಗಳು 2013ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ಶ್ಲಾಘನೀಯ ಸೇವಾ ಪದಕವನ್ನು ನೀಡಿ ಗೌರವಿಸಿದ್ದಾರೆ.

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!