ದೊಡ್ಡಬಳ್ಳಾಪುರ: ಸತತ ಮೂರನೇ ಬಾರಿಗೆ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ನಡೆಸಲಾಗಿದೆ.
ಮಂಗಳವಾರ ರಾತ್ರಿ ಸಾಸಲು ಹೋಬಳಿಯ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ ದೇವಾಲಯದ ಬಾಗಿಲಿಗೆ ಅಳವಡಿಸಿದ್ದ ಬೀಗ ಮುರಿದಿರುವ ಕಳ್ಳರು, ದೇವಾಲಯದ ಹುಂಡಿಯ ಬೀಗವನ್ನು ಹೊಡೆದು ಸುಮಾರು 10 ಸಾವಿರ ರೂ.ಗಳಿಗೂ ಹೆಚ್ಚು ನಗದು ಕಾಣಿಕೆ ಕದ್ದೊಯ್ದಿದ್ದಾರೆ.
ವಿಷಯ ತಿಳಿದ ಹೊಸಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಧಿಕಾರಿಗಳ ವಿರುದ್ಧ ಆಕ್ರೋಶ
ದೊಡ್ಡಬಳ್ಳಾಪುರ ತಾಲ್ಲೂಕಿನ ಸತತ ಮೂರನೇ ಬಾರಿಗೆ ತಾಲೂಕಿನ ಸಾಸಲು ಹೋಬಳಿಯ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಕಾಮೇನಹಳ್ಳಿ, ಪಚ್ಚಾರಲಹಳ್ಳಿ ಗ್ರಾಮಗಳಿಂದ ಹೊರ ವಲಯದ ಗುಟ್ಟೆಯಲ್ಲಿರುವ ಈ ದೇವಾಲಯ ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಟ್ಟಿದೆ.
ಈ ದೇವಾಲಯದಲ್ಲಿ ಶ್ರಾವಣ ಮಾಸ ಸೇರಿದಂತೆ ವಿಶೇಷ ದಿನಗಳಲ್ಲಿ ಪೂಜಾ ಕಾರ್ಯದಲ್ಲಿ ಸಾವಿರಾರು ಭಕ್ತರು ಭಾಗಿಯಾಗುತ್ತಾರೆ. ಆದರೆ ಈ ದೇವಾಲಯದಲ್ಲಿ ಪದೇ ಪದೇ ಕಳ್ಳತನ ಪ್ರಕರಣ ನಡೆಯುತ್ತಿದ್ದರು, ತಾಲೂಕು ಆಡಳಿತದ ಅಧಿಕಾರಿಗಳು ಹುಂಡಿ ಕಾಣಿಕೆ ಸಂಗ್ರಹ, ಕಳ್ಳತನ ನಡೆದ ಪೊಲೀಸ್ ಠಾಣೆಗೆ ದೂರು ನೀಡಲು ಮಾತ್ರ ಸೀಮಿತರಾಗಿದ್ದಾರೆಯೇ ಹೊರತು, ಸೂಕ್ತ ಭದ್ರತೆ ಒದಗಿಸುತ್ತಿಲ್ಲ ಎಂಬುದು ಭಕ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಹೆಚ್ಚೆತ್ತು ದೇವಾಲಯಕ್ಕೆ ಸಿಸಿ ಟಿವಿ ಕ್ಯಾಮೆರಾ ಅಳವಡಿಸಿ ಮತ್ತೆ ಕಳ್ಳತನ ಪ್ರಕರಣ ನಡೆಯದಂತೆ ಕ್ರಮಕೈಗೊಳ್ಳಬೇಕೆಂದು ಭಕ್ತರು ಒತ್ತಾಯಿಸಿದ್ದಾರೆ.