ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅನಾರೋಗ್ಯದ ಹಿನ್ನಲೆ ಮಲ್ಲಿಕಾರ್ಜುನ ಖರ್ಗೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು, ತೀವ್ರ ನಿಗಾ ವಹಿಸಲಾಗಿದೆ.
ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಬೆಂಗಳೂರಿನಲ್ಲಿ ಅವರು ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು. ಅಲ್ಲದೆ, ಕಲ್ಯಾಣ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಮತ್ತು ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ವಿವರವಾದ ಪತ್ರ ಬರೆದು ಮನವಿ ಮಾಡುವುದಾಗಿ ಹೇಳಿದ್ದಾರೆ.
 
				 
															 
						 
						 
						 
						 
						 
						 
						 
						 
						 
						 
						 
						 
						 
						 
						 
						 
						 
					 
						 
						 
						 
						 
					 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
					 
						 
						 
						 
						 
						 
						 
						 
						 
						 
						 
						 
						 
					 
					 
					 
					 
					 
					 
					 
					 
					 
						 
						 
						 
						