ಬೆಂ. ಗ್ರಾ. ಜಿಲ್ಲೆ; ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156 ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ಪ್ರತ್ಯೇಕ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು (Bapuji essay competition) ಆಯೋಜಿಸಲಾಗಿತ್ತು.
ಪ್ರೌಢ ಶಾಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಕೃತಿಕಾ.ಎನ್ ಹಾಗೂ ದ್ವಿತೀಯ ಸ್ಥಾನ ರಮ್ಯಶ್ರೀ.ಬಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ದೇವನಹಳ್ಳಿ. ತೃತೀಯ ಸ್ಥಾನ ನಿಸರ್ಗ ಸರ್ಕಾರಿ ಪ್ರೌಢ ಶಾಲೆ ಸೋಲದೇವನಹಳ್ಳಿ ನೆಲಮಂಗಲ.
ಪದವಿ ಪೂರ್ವ ವಿಭಾಗದಲ್ಲಿ ಪ್ರಥಮ ಸ್ಥಾನ ಬಿಂದುಶ್ರೀ.ಜೆ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸಕೋಟೆ ಟೌನ್. ದ್ವಿತೀಯ ಸ್ಥಾನ ತಾರಾ ಶ್ರೀ ಕೊಂಗಡಿಯಪ್ಪ ಪದವಿ ಪೂರ್ವ ಕಾಲೇಜು ದೊಡ್ಡಬಳ್ಳಾಪುರ.ತೃತೀಯ ಸ್ಥಾನ ಹರ್ಷಿತ.ವಿ ಸರ್ಕಾರಿ ಪದವಿ ಪೂರ್ವ ಕಾಲೇಜು ನೆಲಮಂಗಲ.
ಪದವಿ ಅಥವಾ ಸ್ನಾತಕೋತ್ತರ ವಿಭಾಗದಲ್ಲಿ ಪ್ರಥಮ ಸ್ಥಾನ ಮಿಥುನ್.ಕೆ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದೊಡ್ಡಬಳ್ಳಾಪುರ. ದ್ವಿತೀಯ ಸ್ಥಾನ ಹರ್ಷಿತ.ಎನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸಕೋಟೆ. ತೃತೀಯ ಸ್ಥಾನ ದೀಪಿಕ.ಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನೆಲಮಂಗಲ.
ಗಾಂಧೀಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಕ್ಟೋಬರ್ 02 ರ ಗಾಂಧಿ ಜಯಂತಿಯಂದು ಬಹುಮಾನ ವಿತರಣೆ ಮಾಡಲಾಗುವುದು.