ಬೆಂಗಳೂರು: ನಾಡಿನ ಅನ್ನದಾತರಿಗೆ ಇನ್ನಷ್ಟು ಶಕ್ತಿ ತುಂಬಲು ಐತಿಹಾಸಿಕ ನಿರ್ಧಾರ ಕೈಗೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA), 2026-27 ರ ಮಾರುಕಟ್ಟೆ ಹಂಗಾಮಿನ ಎಲ್ಲಾ ರಬಿ ಬೆಳೆಗಳ ಕನಿಷ್ಠ ಬೆಂಬಲ ಬೆಲೆ (MSP) ಯನ್ನು ಗಣನೀಯವಾಗಿ ಹೆಚ್ಚಿಸಲು ಅನುಮೋದನೆ ನೀಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ಚೀಟ್ ಮಾಡಿರುವ ಅವರು, ಮೋದಿ ಅವರ ಈ ನಿರ್ಧಾರದಿಂದ ರೈತರಿಗೆ ಅವರ ಉತ್ಪಾದನಾ ವೆಚ್ಚಕ್ಕಿಂತ ಗಣನೀಯವಾಗಿ ಹೆಚ್ಚಿನ ಲಾಭ ಸಿಗುವುದು ಖಾತ್ರಿಯಾಗಲಿದೆ. ಗೋಧಿಗೆ 109%, ಸಾಸಿವೆಗೆ 93%, ಮಸೂರಕ್ಕೆ 89%, ಕಡಲೆಗೆ 59%, ಬಾರ್ಲಿಗೆ 58% ಮತ್ತು ಕುಸುಬೆಗೆ 50% ರಷ್ಟು ಲಾಭಾಂಶ ಲಭ್ಯವಾಗಲಿದೆ.
ಈ ದಿಟ್ಟ ಹೆಜ್ಜೆಯು ರೈತರ ಆದಾಯವನ್ನು ದ್ವಿಗುಣಗೊಳಿಸುವ, ಬೆಳೆ ವೈವಿಧ್ಯೀಕರಣವನ್ನು ಖಚಿತಪಡಿಸುವ ಮತ್ತು ಭಾರತದ ಕೃಷಿ-ಆರ್ಥಿಕತೆಯನ್ನು ಬಲಪಡಿಸುವ ಮೋದಿ ಸರ್ಕಾರದ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.