The lives and ideals of Mahatma Gandhi and Lal Bahadur Shastri are recognized worldwide.

ಮಹಾತ್ಮಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಬದುಕು, ಆದರ್ಶಗಳು ಜಗತ್ತಿನ ಮನ್ನಣೆ

ದೊಡ್ಡಬಳ್ಳಾಪುರ: ಭಾರತದ ಅಸ್ಮಿತೆಯಾಗಿರುವ ಮಹಾತ್ಮಗಾಂಧಿ (Mahatma Gandhi) ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ (Lal Bahadur Shastri) ಅವರ ಬದುಕು ಮತ್ತು ಆದರ್ಶಗಳು ಜಗತ್ತಿನ ಮನ್ನಣೆ ಪಡೆದಿವೆ ಎಂದು ನಿವೃತ್ತ ಮುಖ್ಯಶಿಕ್ಷಕ ಕೆ.ವಿ.ವೆಂಕಟೇಶರೆಡ್ಡಿ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ರಾಷ್ಟ್ರಪಿತ ಮಹಾತ್ಮಗಾಂಧಿ ಮತ್ತು  ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಹಾತ್ಮಗಾಂಧಿ ಅವರ ಶಾಂತಿ ಮತ್ತು ಅಹಿಂಸಾ ಅಸ್ತ್ರಗಳ ಎದುರು ಸುಸಜ್ಜಿತ ಸೇನೆ ಹೊಂದಿದ್ದ ಬ್ರಿಟನ್‌ ಸರ್ಕಾರ ತಲೆಬಾಗಿತ್ತು.  ಜಾಗತಿಕ ಮಟ್ಟದಲ್ಲಿ ಮಹಾತ್ಮಗಾಂಧಿ ಅವರ ಹೋರಾಟದ  ಹಾದಿಯನ್ನು ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಮೊದಲಾದವರು ಅನುಸರಿಸಿದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರಾಮಾಣಿಕತೆ, ಸರಳತೆ, ದೇಶಭಕ್ತಿ, ನಿಸ್ವಾರ್ಥ ಸೇವೆ ಸದಾ ಸ್ಮರಣೀಯವಾಗಿದೆ. ಜೈ ಜವಾನ್, ಜೈ ಕಿಸಾನ್” ಘೋಷವಾಕ್ಯದ ಮೂಲಕ ಭಾರತ ದೇಶದ ಶ್ರಮಜೀವಿಗಳನ್ನು ಪ್ರೋತ್ಸಾಹಿಸಿದರು ಎಂದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಮಹಾತ್ಮಗಾಂಧಿ ಅವರ ತತ್ತ್ವ ಚಿಂತನೆ ಮತ್ತು ಆದರ್ಶಗಳನ್ನು ದಮನ ಮಾಡುವ ಹುನ್ನಾರಗಳು ಖಂಡನೀಯವಾಗಿದೆ. ಇಂದಿನ ಯುವಜನತೆ ಮಹಾತ್ಮಗಾಂಧಿ ಅವರ ವಿಚಾರಧಾರೆಗಳನ್ನು ಸಮಗ್ರವಾಗಿ ಅರ್ಥ ಮಾಡಿಕೊಳ್ಳಬೇಕು.

ಮಹಾತ್ಮಗಾಂಧಿ ಅವರ ಆದರ್ಶಗಳು ಯುವಜನತೆಗೆ  ಮಾರ್ಗದರ್ಶಕ ಆಗಬೇಕು. ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜೀವನವು ಸರಳತೆ ಮತ್ತು ನೈತಿಕ ನಡವಳಿಕೆಗೆ ಸಾಕ್ಷಿಯಾಗಿದೆ. ಭಾರತ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಬದ್ಧತೆ ಎಲ್ಲಾ ಕಾಲಕ್ಕೂ  ಪ್ರೇರಣೆಯಾಗಿದೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ,  ದೊಡ್ಡಬಳ್ಳಾಪುರ ತಾಲ್ಲೂಕಿನ ಹಲವಾರು ಸ್ವಾತಂತ್ರ್ಯ ಹೋರಾಟಗಾರರಿಗೆ  ಮಹಾತ್ಮಗಾಂಧಿ ಅವರ ಪ್ರೇರಣಾಶಕ್ತಿಯಾಗಿದ್ದರು. ಜವಳಿ ಕ್ಷೇತ್ರದಲ್ಲಿ ಸುಸ್ಥಿರತೆ, ಪರಿಸರ ಸ್ನೇಹಪರತೆಯನ್ನು ಭಾರತೀಯ ಪ್ರಜೆಗಳಿಗೆ ಮಹಾತ್ಮಗಾಂಧಿ ಅರಿವು ಮೂಡಿಸಿದ್ದರು. ಭಾರತ ಕಂಡ ಅತ್ಯಂತ ಪ್ರಾಮಾಣಿಕ, ದಕ್ಷ ಪ್ರಧಾನಿ ಎಂದರೆ ಲಾಲ್ ಬಹಾದ್ದೂರ್ ಶಾಸ್ತ್ರಿ ಆಗಿದ್ದಾರೆ. ಅವರ ಸ್ವಾಭಿಮಾನ ಮತ್ತು ದೇಶಾಭಿಮಾನ ಭಾರತೀಯ ನಾಗರೀಕರಿಗೆ ಎಂದಿಗೂ ಮಾದರಿ ಎಂದರು.

ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು, ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಪಿ.ಡಿ.ದಾದಾಪೀರ್, ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿಗಳಾದ  ನಾಗರತ್ನಮ್ಮ, ಸಫೀರ್, ಇಸ್ತೂರು ಕೋದಂಡರಾಮ ಭಜನಾ ಮಂಡಲಿ ಕಾರ್ಯದರ್ಶಿ ರಂಗಸ್ವಾಮಯ್ಯ, ರಂಗಭೂಮಿ ಕಲಾವಿದ ಸಂಘದ ಜಿಲ್ಲಾ ಕಾರ್ಯದರ್ಶಿ ಪುಟ್ಟಸಿದ್ದಯ್ಯ, ಗೆಜ್ಜಗದಹಳ್ಳಿ ಮುನಿರಾಜು.

ಲಾವಣ್ಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್, ಕವಿಗಳಾದ ಮಹಾದೇವಪ್ಪ, ಅಂಜನಗೌಡ, ಶ್ರೀನಿವಾಸ್, ನಾಗದಳ ನಟರಾಜ್, ಕನ್ನಡ ಜಾಗೃತ ವೇದಿಕೆಯ ಜಿಲ್ಲಾಧ್ಯಕ್ಷ ನಾಗರಾಜ್, ತಾಲ್ಲೂಕು ಅಧ್ಯಕ್ಷ ಶಶಿಧರ್, ಮಂಜುನಾಥ್ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯಡಿ ಹುದ್ದೆ ಭರ್ತಿ: ಬಿ.ವೈ. ವಿಜಯೇಂದ್ರ ಆಗ್ರಹ

ಒಳ ಮೀಸಲಾತಿಯನ್ನೂ ಪರಿಗಣಿಸಿ ಯುವಜನತೆಗೆ ಉದ್ಯೋಗ ಸೃಷ್ಟಿ ಮಾಡಬೇಕು. ನ್ಯಾಯಾಲಯದ ಕುಂಟುನೆಪ ಕೊಡಬಾರದು. ಇಲ್ಲವಾದರೆ ಬಿಜೆಪಿ ಉಗ್ರ ಹೋರಾಟಕ್ಕೆ ಇಳಿಯುವುದು ಅನಿವಾರ್ಯವಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಎಚ್ಚರಿಕೆ

[ccc_my_favorite_select_button post_id="119931"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕಾರು-ಬೈಕ್ ನಡುವೆ ಅಪಘಾತ..!

ಮೊನ್ನೆಯಷ್ಟೇ ಉದ್ಘಾಟನೆಯಾಗಿದ್ದ ರೈಲ್ವೇ ನಿಲ್ದಾಣದ ಸಿಗ್ನಲ್ ಬಳಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident) ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="119943"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!