ಬಿಜೆಪಿಯಿಂದ ಹಾನಿ ಪರಿಶೀಲನೆ, ಸರ್ಕಾರದಿಂದ ಯಾರೂ ಬಂದಿಲ್ಲ: ಆರ್‌.ಅಶೋಕ ವಾಗ್ದಾಳಿ

BJP inspects damage, no one from government has come: R. Ashoka

ವಿಜಯಪುರ; ಬಿಜೆಪಿ (BJP) ವತಿಯಿಂದ ಉತ್ತರ ಕರ್ನಾಟಕದಲ್ಲಿ ಎರಡು ದಿನಗಳಿಂದ ಮಳೆ ಹಾನಿ (Rain damage) ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಕಾಂಗ್ರೆಸ್‌ (Congress) ಸರ್ಕಾರದಿಂದ ಯಾರೂ ಬಂದು ಪರಿಶೀಲನೆ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ದೂರಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ 10-12 ಲಕ್ಷ ಹೆಕ್ಟೇರ್‌ನಷ್ಟು ಜಮೀನಿನಲ್ಲಿ ಬೆಳೆ ನಾಶವಾಗಿದೆ. ವಿಜಯಪುರ ಜಿಲ್ಲೆಯಲ್ಲಿ 52,000 ಸಾವಿರ ಹೆಕ್ಟೇರ್‌ನಷ್ಟು ಜಮೀನಿನಲ್ಲಿ ಬೆಳೆ ಹಾನಿಯಾಗಿದೆ. ಪುನರ್ವಸತಿ ಕೇಂದ್ರಗಳಲ್ಲಿ ಸರಿಯಾದ ವ್ಯವಸ್ಥೆ ಇಲ್ಲ ಎಂದು ದೂರಿದರು.

ಸರ್ಕಾರದಿಂದ ಪರಿಹಾರ ಸಿಕ್ಕಿದ್ದರೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ, ನಾವ್ಯಾರೂ ಬಂದು ಪರಿಶೀಲನೆ ಮಾಡುತ್ತಿರಲಿಲ್ಲ. ಕಬ್ಬು, ತೊಗರಿ, ಹತ್ತಿ ಬೆಳೆಗಳಲ್ಲಿ ಮಳೆ ನೀರು ಹಾಗೆಯೇ ನಿಂತು ಹಾಳಾಗಿದೆ. ಬಿಜೆಪಿ ವತಿಯಿಂದ ಎರಡು ದಿನಗಳಿಂದ ಪರಿಶೀಲನೆ ಮಾಡಲಾಗುತ್ತಿದೆ. ಆದರೆ ಸರ್ಕಾರದಿಂದ ವೈಮಾನಿಕ ಸಮೀಕ್ಷೆ ಮಾಡಲಾಗುತ್ತಿದೆ. ಎಲ್ಲರೂ ಆಕಾಶದಲ್ಲೇ ಇದ್ದಾರೆ. ಯಾರೂ ರೈತರ ಬಳಿ ಬರುತ್ತಿಲ್ಲ ಎಂದರು.

ಇದು ಆಕಾಶವನ್ನು ತೋರಿಸುವ ಸರ್ಕಾರ. ಭೂಮಿತಾಯಿಯನ್ನು ನಂಬಿಕೊಂಡಿರುವ ರೈತರ ಬದುಕಿಗೆ ಈ ಸರ್ಕಾರ ಬೆಂಕಿ ಹಚ್ಚುತ್ತಿದೆ. ಸರ್ಕಾರಕ್ಕೆ ತಾಕತ್ತಿದ್ದರೆ, ಬಿಜೆಪಿ (BJP) ಅವಧಿಯಲ್ಲಿ ನೀಡಿದಂತೆಯೇ ಬೆಳೆ ಹಾನಿ ಪರಿಹಾರ ನೀಡಲಿ. ಆ ಬಗ್ಗೆ ಮಾಹಿತಿಯನ್ನು ಬಿಡುಗಡೆ ಮಾಡಲಿ.

ಸರ್ಕಾರಕ್ಕೆ ಮರ್ಯಾದೆ ಇದ್ದರೆ ಸಿಎಂ ಸಿದ್ದರಾಮಯ್ಯ ರೈತರ ಮನೆ ಬಾಗಿಲಿಗೆ ಬಂದು ಪರಿಹಾರ ವಿತರಿಸಲಿ. ಇಲ್ಲಿನ ಜನರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಆದರೆ ಮುಖ್ಯಮಂತ್ರಿಗಳು ಮೈಸೂರಿನಲ್ಲಿ ಆರಾಮಾಗಿ ಇದ್ದಾರೆ ಎಂದರು.

ಮುಖ್ಯಮಂತ್ರಿ ಹಾಗೂ ಸಚಿವರು ಸ್ಥಳಕ್ಕೆ ಭೇಟಿ ಮಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ. ಸಚಿವರು ಎಲ್ಲಿದ್ದಾರೆಂದು ಹುಡುಕಿಕೊಡಿ ಎಂದು ರೈತರು ದೂರಿದ್ದಾರೆ. ಜಿಲ್ಲಾಧಿಕಾರಿಗಳು ಬಂದು ಸರ್ವೆ ಮಾಡಿಲ್ಲ. ಕಾಂಗ್ರೆಸ್‌ ನಾಯಕರು ಈಗ ಯಾರ ಪರ ಎಂದು ಸವಾಲು ಹಾಕಲಿ. ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸಿಎಂ ಆಗಿದ್ದಾಗ ಕೊಟ್ಟಿದ್ದಕ್ಕಿಂತ ಹೆಚ್ಚಿನ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ನೀಡಲಿ ಎಂದರು.

25 ಸಾವಿರ ಹಾಗೂ 5 ಲಕ್ಷ ರೂ. ಪರಿಹಾರ ನೀಡಿ

ಸಿಎಂ ಸಿದ್ದರಾಮಯ್ಯ ಬೇಕಿದ್ದರೆ ಸರ್ವಪಕ್ಷ ಸಭೆ ಕರೆಯಲಿ. ಅದರಲ್ಲಿ ನಾವೆಲ್ಲರೂ ಭಾಗವಹಿಸುತ್ತೇವೆ. ದೆಹಲಿಗೆ ಹೋಗುವುದಾದರೆ ನಾವು ಕೂಡ ಬರುತ್ತೇವೆ. ಈರುಳ್ಳಿ ಬೆಳೆ ಹಾಳಾಗಿದೆ. ಹತ್ತಿ ನೀರಿನಲ್ಲಿ ನೆನೆದಿದೆ. ಬಿಜೆಪಿ ಅವಧಿಯಲ್ಲಿ ಮನೆ ಹಾನಿಗೆ 5 ಲಕ್ಷ ರೂ. ನೀಡಿದರೆ ಈಗಿನ ಸರ್ಕಾರ 1.20 ಲಕ್ಷ ರೂ. ನೀಡುತ್ತಿದೆ. ಉಳಿದ ಹಣ ಯಾರ ಜೇಬಿಗೆ ಹೋಗುತ್ತಿದೆ ಎಂದು ತಿಳಿದಿಲ್ಲ.

ಸರ್ಕಾರ ಐದಲ್ಲ, ಐವತ್ತು ಗ್ಯಾರಂಟಿಗಳನ್ನು ನೀಡಲಿ. ಆದರೆ ಆ ಹೆಸರಲ್ಲಿ ಪರಿಹಾರ ನೀಡದೇ ಇರುವುದರಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರತಿ ಎಕರೆಗೆ 25,000 ರೂ. ಪರಿಹಾರ ಹಾಗೂ ಮನೆ ಕಟ್ಟಿಸಲು 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಅತಿವೃಷ್ಟಿ: ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

ರಾಜಕೀಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಕ್ಷೇತ್ರ ಮರು ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ: ಸಿಎಂ ಸಿದ್ದರಾಮಯ್ಯ

ಜನಸಂಖ್ಯೆ ನಿಯಂತ್ರಣವನ್ನು ದಕ್ಷಿಣ ಭಾರತದ ರಾಜ್ಯಗಳು ಉತ್ತಮವಾಗಿ ಮಾಡಿದ್ದು, ಉತ್ತರ ಭಾರತದ ರಾಜ್ಯಗಳು ಮಾಡಿಲ್ಲ. ಸಹಜವಾಗಿಯೇ ಅವರಿಗೆ ಅನುಕೂಲ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಅನಾನುಕೂಲವಾಗಲಿದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121167"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!