Teachers' voter list revision: Opportunity to add names to voter list

ಶಿಕ್ಷಕರ ಮತದಾರರ ಪಟ್ಟಿ ಪರಿಷ್ಕರಣೆ: ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ

ಬೆಂ.ಗ್ರಾ.ಜಿಲ್ಲೆ: ಭಾರತ ಚುನಾವಣಾ ಆಯೋಗದ (Election Commission) ಮುಖ್ಯ ಚುನಾವಣಾಧಿಕಾರಿಗಳ ಆದೇಶದಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ (Teachers’ electoral roll) ಮಾಡಲು ನಮೂನೆ-19 ರಲ್ಲಿ ಮತದಾರರ ಪಟ್ಟಿಯ ಸೇರ್ಪಡೆಗೆ ಅರ್ಜಿ ಸಲ್ಲಿಸಲು ನವೆಂಬರ್ 06 ಕೊನೆಯ ದಿನವಾಗಿದೆ.

ಮತದಾರರು ತಮ್ಮ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 25 ರಿಂದ ಡಿಸೆಂಬರ್ 10 ವರೆಗೆ ಕಾಲಾವಕಾಶವಿದೆ. ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು.

ಜಿಲ್ಲೆಯಲ್ಲಿ ನಮೂನೆ-19ರ ಅರ್ಜಿಗಳನ್ನು ಸ್ವೀಕರಿಸುವವರು

ದೊಡ್ಡಬಳ್ಳಾಪುರ ತಾಲ್ಲೂಕು

ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಚೇರಿ, ಮುಕ್ತಾಂಬಿಕ ರಸ್ತೆ, ವಡ್ಡರಪೇಟೆ, ಕಚೇರಿ ದೂರವಾಣಿ ಸಂಖ್ಯೆ 080-27622208, ಮೊಬೈಲ್ ನಂ: 9480695013.
ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ತಾಲ್ಲೂಕು ಕಚೇರಿ ರಸ್ತೆ ದೊಡ್ಡಬಳ್ಳಾಪುರ ಕಚೇರಿ ದೂರವಾಣಿ ಸಂಖ್ಯೆ 080-27622002, ಮೊಬೈಲ್ ನಂ: 9448346792

ದೇವನಹಳ್ಳಿ ತಾಲ್ಲೂಕು

ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಚೇರಿ, ಬಿ.ಬಿ ರಸ್ತೆ ಗುರು ಭವನ, ದೇವನಹಳ್ಳಿ ಕಚೇರಿ ದೂರವಾಣಿ ಸಂಖ್ಯೆ 080-27682384, ಮೊಬೈಲ್ ನಂ: 9480695012
ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ. ಬಿ.ಬಿ. ರಸ್ತೆ, ದೇವನಹಳ್ಳಿ ಕಚೇರಿ ದೂರವಾಣಿ ಸಂಖ್ಯೆ 080-22122999, ಮೊಬೈಲ್ ನಂ:6363263117

ಹೊಸಕೋಟೆ ತಾಲ್ಲೂಕು

ಕ್ಷೇತ್ರ ಶಿಕ್ಷಣಾಧಿಕಾರಿ, ಬಿ.ಇ.ಓ ಕಛೇರಿ. ಮಿಷನ್ ಆಸ್ಪತ್ರೆ ರಸ್ತೆ, ಬೈರೇಗೌಡ ಪೆಟ್ರೋಲ್ ಬಂಕ್ ಹತ್ತಿರ ಹೊಸಕೋಟೆ ತಾಲ್ಲೂಕು ಕಚೇರಿ ದೂರವಾಣಿ ಸಂಖ್ಯೆ: 080-27931311 ಮೊಬೈಲ್ ನಂ: 9480695014
ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ಹಳೆ ಬಸ್ ನಿಲ್ದಾಣ ಹತ್ತಿರ ಹೊಸಕೋಟೆ ತಾಲ್ಲೂಕು ಕಚೇರಿ ದೂರವಾಣಿ ಸಂಖ್ಯೆ: 080-27931237,ಮೊಬೈಲ್ ನಂ:9845637542

ನೆಲಮಂಗಲ ತಾಲ್ಲೂಕು

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಇ.ಓ ಕಛೇರಿ, ಗುರು ಭವನ, ನೆಲಮಂಗಲ ಬಸ್ ನಿಲ್ದಾಣ ಹತ್ತಿರ, ನೆಲಮಂಗಲ ಮೊಬೈಲ್ ನಂ: 9480695015
ತಹಶೀಲ್ದಾರ್ (ಗ್ರೇಡ್-2), ತಾಲ್ಲೂಕು ಆಡಳಿತ ಸೌಧ, ಬಿ ಹೆಚ್ ರಸ್ತೆ, ನೆಲಮಂಗಲ ಕಚೇರಿ ದೂರವಾಣಿ ಸಂಖ್ಯೆ:080-27722126, ಮೊಬೈಲ್ ನಂ: 8147397189

ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ನೋಂದಾಯಿಸಲು ಮಾನದಂಡಗಳು

ಬೆಂಗಳೂರು ಶಿಕ್ಷಕರ ಕ್ಷೇತ್ರದ (Teachers’ electoral roll) ವ್ಯಾಪ್ತಿಯ ಸಾಮಾನ್ಯ ನಿವಾಸಿ ಆಗಿರಬೇಕು (ಈ ಕ್ಷೇತ್ರದ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಗಳು ಒಳಗೊಂಡಿರುತ್ತದೆ)
ಅರ್ಹತಾ ದಿನಾಂಕ ಹಿಂದಿನ 6 ವರ್ಷಗಳ ಅವಧಿಯ ಪೈಕಿ ಕನಿಷ್ಟ 3 ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಮಾನ್ಯತೆ ಹೊಂದಿರುವ/ಮಾನ್ಯತೆ ಹೊಂದಿರುವುದಾಗಿ ಘೋಷಿಸಲ್ಪಟ್ಟಿರುವ ಸೆಕೆಂಡರಿ ಶಾಲೆಗಿಂತ ಕಡಿಮೆ ಇಲ್ಲದ ಯಾವುದೇ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ವೃತ್ತಿಯಲ್ಲಿ ಕಾರ್ಯ ನಿರ್ವಹಿಸಿರಬೇಕು.

ಸೆಕೆಂಡರಿ ಶಾಲೆ ಅಂದರೆ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಪ್ರೌಢಶಾಲೆ ವಿಭಾಗದಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿರಬೇಕು.

ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಖಾಯಂ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಹಾಗೂ ಪಾರ್ಟ್ ಟೈಂ’ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಲ್ಲಿ ನೋಂದಣಿಗೆ ಅವಕಾಶವಿರುವುದಿಲ್ಲ.

ಅರ್ಜಿದಾರರು ಮೇಲೆ ತಿಳಿಸಿರುವ ಅವಧಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ತೊಡಗಿರುವ ಬಗ್ಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಂದ ದೃಢೀಕೃತ ದಾಖಲೆ/ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಮತದಾರರ ಪಟ್ಟಿ ನೋಂದಣಿಗೆ ಅರ್ಜಿದಾರರ ವಾಸಸ್ಥಳವು ಅರ್ಹತೆಯಾಗಿದ್ದು, ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಯ ಸ್ಥಳವು ಪರಿಗಣಿಸಲ್ಪಡುವುದಿಲ್ಲ.

ಮತದಾರರ ಪಟ್ಟಿ ಸೇರ್ಪಡೆಗೆ ಕನ್ನಡ ಅಥವಾ ಅಂಗ್ಲ ಭಾಷೆಯ ನಮೂನೆ-19 ರಲ್ಲಿ ಅರ್ಜಿ ಸಲ್ಲಿಸಬಹುದು
ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುವುದರಿಂದ ಅರ್ಜಿದಾರರು 2 ಇತ್ತೀಚಿನ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಇಲಾಖಾ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಮಾನದಂಡಗಳಡಿಯಲ್ಲಿ ಅರ್ಹತೆ ಹೊಂದಿರುವ ಶಿಕ್ಷಕರಿಂದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!