ಬೆಂಗಳೂರು ಗ್ರಾಮಾಂತರ ಜಿಲ್ಲೆ: ದೇವನಹಳ್ಳಿ ಟೌನ್ ನ ಹಳೇ ಬಸ್ ನಿಲ್ದಾಣ ಸರೋವರ ಬೀದಿಯ 6ನೇ ವಾರ್ಡ್ ನಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು (socio-educational survey) ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ಎನ್ ಅನುರಾಧ (CEO Dr. K.N. Anuradha) ಖುದ್ದು ಮನೆಮನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿ, ನಮ್ಮ ಸಮೀಕ್ಷೆದಾರರು ಕೇಳುವ ಪ್ರಶ್ನೆಗಳಿಗೆ ಸ್ಪಷ್ಟವಾಗಿ ಉತ್ತರಿಸಿ, ಯಾವುದೇ ಕಾರಣಕ್ಕೂ ಮಾಹಿತಿಯನ್ನು ನೀಡಲು ಹಿಂಜರಿಯಬೇಡಿ. ಸಮೀಕ್ಷೆಗೆ ಬಗೆಗಿನ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದರು.
ಸಮೀಕ್ಷೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಇನ್ನೂ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಲಿಂಕ್ ಮಾಡಿಲ್ಲದವರು ಲಿಂಕ್ ಮಾಡಿಕೊಳ್ಳಬೇಕು. ಹಾಗೇ ಅಗತ್ಯ ದಾಖಲೆಗಳಿಗೆ ಕೆವೈಸಿ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು ಇ-ಕೈವೈಸಿ ಮಾಡಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಿದರು.
ಸಮೀಕ್ಷೆ ಮಾಡುವ ಸಂದರ್ಭದಲ್ಲಿ
ನೆಟ್ ವರ್ಕ್ ಸಮಸ್ಯೆ ಕೆಲವೊಂದು ಸಂದರ್ಭಗಳಲ್ಲಿ ಉಂಟಾಗುತ್ತದೆ, ಸಾರ್ವಜನಿಕರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸಮರ್ಪಕವಾದ ಮಾಹಿತಿ ನೀಡಿ ಗಣತಿದಾರರಿಗೆ ಸಹಕರಿಸಿ ಎಂದರು.
ಈ ಸಂದರ್ಭದಲ್ಲಿ ದೇವನಹಳ್ಳಿ ತಾಲ್ಲೂಕು ಪಂಚಾಯತಿ ಇಒ ಶ್ರೀನಾಥ್ ಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು, ಗಣತಿದಾರರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.