Recommendation to the Center to name our metro as "Basava Metro"; CM

ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡಲು ಕೇಂದ್ರಕ್ಕೆ ಶಿಫಾರಸ್ಸು; CM

ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌
ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ನುಡಿದರು.

ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ.
ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು.

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ.

ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ ಎಂದರು‌.

ಜಾತಿಯಿಂದ ಯಾರೂ ಶ್ರೇಷ್ಠರಲ್ಲ. ಹಾಗೆಯೇ ಪ್ರತಿಭೆ, ಜ್ಞಾನ ಕೂಡ ಯಾವುದೇ ಒಂದು ಜಾತಿಯ ಸ್ವತ್ತು ಅಲ್ಲ. ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ನಾನು ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ ಎಂದರು.

ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ. ಜಾತಿ ವ್ಯವಸ್ಥೆ, ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ

ಜಾತಿ-ವರ್ಗ ರಹಿತ ಮಾನವ ಸಮಾಜದ ನಿರ್ಮಾಣ ಬಸವಣ್ಣನವರ ಕನಸಾಗಿತ್ತು. ನಾವೆಲ್ಲರೂ ಮೊದಲು ಮನುಷ್ಯರು, ಬಳಿಕ ಭಾರತೀಯರು. ಹೀಗಾಗಿ ನಾವು ಮನುಷ್ಯ ನಿರ್ಮಿತ ಜಾತಿ, ಧರ್ಮದ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬಾರದು, ಆಚರಿಸಬಾರದು ಎಂದು ಕರೆ ನೀಡಿದರು.

ನಾನು ಬಸವಣ್ಣನವರ ಅನುಯಾಯಿ: CM

ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ನಾನು ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ.

ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದ್ದೇವೆ ಎಂದರು.

ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ ಆದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ ಎಂದರು‌.

ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಗಳಾಗುತ್ತೇವೆ ಎಂದರು.

ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ನಾವೆಲ್ಲರೂ ಶೂದ್ರರು. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದರು.

ಈ ಅಸಮಾನತೆ ಹೋಗದಿದ್ದರೆ, ಅಸಮಾನತೆಗೆ ಒಳಗಾಗಿರುವ ಸಮುದಾಯಗಳು ಸ್ವಾತಂತ್ರ್ಯ ಸೌಧವನ್ನು ದ್ವಂಸ ಮಾಡುತ್ತಾರೆ ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಎಚ್ಚರಿಕೆಯ ಮಾತುಗಳನ್ನು ನಾವು ನೆನಪಿಡಬೇಕು ಎಂದರು.

ಮುಂದಿನ ವರ್ಷ ವಚನ ವಿಶ್ವ ವಿದ್ಯಾಲಯ ಸ್ಥಾಪನೆ: CM

ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಎಂದರು.

ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಕಾರ್ಯಕ್ರಮದಲ್ಲಿ ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶರಣ ಸಂಸ್ಕೃತಿ ಬಗೆಗಿನ ಬದ್ಧತೆಯನ್ನು ಶ್ಲಾಘಿಸಿ ಅಭಿನಂದಿಸಿದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!