Increasing confusion in the census issue: B.Y. Vijayendra

B.Y. Vijayendra; ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಅಲ್ಲೋಲಕಲ್ಲೋಲ: ಬಿ.ವೈ. ವಿಜಯೇಂದ್ರ

ಮೈಸೂರು: ಆರ್ಥಿಕ- ಸಾಮಾಜಿಕ- ಶೈಕ್ಷಣಿಕ ಸಮೀಕ್ಷೆ ಹೆಸರಿನಲ್ಲಿ ರಾಜ್ಯ ಸರಕಾರವು ಜಾತಿ ಜನಗಣತಿ ಮಾಡುತ್ತಿದ್ದು, ದಿನೇದಿನೇ ಇದರಿಂದ ಗೊಂದಲಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ( B.Y. Vijayendra ) ಅವರು ಆಕ್ಷೇಪಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರತಿಕ್ರಿಯೆಯನ್ನು ನೋಡಿದಾಗಲೇ ಇದು ಗೊತ್ತಾಗುತ್ತದೆ.

60 ಪ್ರಶ್ನೆಗಳನ್ನು ಜನಸಾಮಾನ್ಯರ ಮುಂದೆ ಇಟ್ಟಿದ್ದಾರೆ. ಎಲ್ಲ ಸಮಾಜಗಳಲ್ಲೂ ಗೊಂದಲ ಸೃಷ್ಟಿಯಾಗಿದೆ. ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ರಾಜ್ಯ ಸರಕಾರ ಈ ನಿರ್ಣಯ ಮಾಡಿದ್ದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ನುಡಿದರು.

ವಿಕಲಚೇತನರನ್ನೂ ಇದಕ್ಕೆ ಜೋಡಿಸಿದ್ದಾರೆ. ಇದರ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿದೆ. ರಾಜ್ಯ ಸರಕಾರ ಅಥವಾ ಮುಖ್ಯಮಂತ್ರಿಗಳಿಗೆ ಇಷ್ಟೊಂದು ಆತುರ ಯಾಕೆ ಎಂದು ಕೇಳಿದರು.

ನವೆಂಬರ್ ಕ್ರಾಂತಿ- ಅಕ್ಟೋಬರ್ ಕ್ರಾಂತಿ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ನಡೆದಿದೆ. ರಾಜ್ಯದ ರಾಜಕಾರಣದಲ್ಲಿ ಆಗುವ ಕ್ರಾಂತಿಗೂ, ಈ ಜಾತಿ ಜನಗಣತಿಗೂ ಎಲ್ಲೋ ಒಂದು ಕಡೆ ಸಂಬಂಧ ಇದೆಯೇ ಎಂಬುದೂ ರಾಜ್ಯದಲ್ಲಿ ಚರ್ಚೆ ಆಗುತ್ತಿದೆ ಎಂದು ವಿಶ್ಲೇಷಿಸಿದರು.

ಸರಕಾರ ಆರ್ಥಿಕ- ಸಾಮಾಜಿಕ- ಶೈಕ್ಷಣಿಕ ನ್ಯಾಯ ನೀಡಲಿ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕೆಂಬ ವಿಚಾರದಲ್ಲಿ ಬಿಜೆಪಿಯಲ್ಲಿ ಗೊಂದಲ ಇಲ್ಲ. ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಜೀ ಅವರು ಒಂದು ಐತಿಹಾಸಿಕ ನಿರ್ಧಾರವನ್ನು ಘೋಷಿಸಿದ್ದಾರೆ.

ಸ್ವಾತಂತ್ರ್ಯ ಬಂದ ನಂತರದಲ್ಲಿ ಯಾವುದೇ ಪ್ರಧಾನಮಂತ್ರಿಗಳು ನಿರ್ಧಾರ ಮಾಡದೇ ಇರುವಂಥ ನಿರ್ಧಾರ ಇದಾಗಿದೆ. ಇಡೀ ದೇಶದಲ್ಲಿ ಜಾತಿ ಜನಗಣತಿ ಪ್ರಾರಂಭಿಸುವುದಾಗಿ ಪ್ರಕಟಿಸಿದ್ದಾರೆ. ಇದರ ನಡುವೆ ಕರ್ನಾಟಕದಲ್ಲಿ ಈ ರೀತಿ ಗೊಂದಲವನ್ನು ಸೃಷ್ಟಿ ಮಾಡುವ ಅವಶ್ಯಕತೆ ಇರಲಿಲ್ಲ ಎಂದರು.

ಕ್ರಾಂತಿ ಕುರಿತು ಸಚಿವರ ಬಹಿರಂಗ ಹೇಳಿಕೆ
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ (B.Y. Vijayendra) ಅವರು, ಸಿದ್ದರಾಮಯ್ಯನವರು (Siddaramaiah) ಬಹಳ ಆತುರದಲ್ಲಿದ್ದಾರೆ.

ಎರಡು ತಿಂಗಳ ಹಿಂದೆ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ಮಾಡಿದ್ದರು. ಸಿದ್ದರಾಮಯ್ಯನವರು ರ್ಯಾಂಪ್ ವಾಕ್ ಮಾಡುತ್ತಿದ್ದರು. ಮಲ್ಲಿಕಾರ್ಜುನ ಖರ್ಗೆ (Mallikarjuna Karghe), ಡಿ.ಕೆ.ಶಿವಕುಮಾರ್ (D.K. Shivakumar) ಅಡ್ರೆಸ್ ಇರಲಿಲ್ಲ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ಸಿನ ಹಿರಿಯ ಸಚಿವರೇ ನವೆಂಬರ್ ಕ್ರಾಂತಿ- ಅಕ್ಟೋಬರ್ ಕ್ರಾಂತಿ ಕುರಿತು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಬಿಹಾರ ಚುನಾವಣೆ ಬಳಿಕ ಸಾಕಷ್ಟು ರಾಜಕೀಯ ಬದಲಾವಣೆ.

ಎಐಸಿಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಅವರು ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಬೇಡಿ ಎನ್ನುತ್ತಾರೆ. ನಾಯಕತ್ವ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್ ವರಿಷ್ಠರೂ ಹೇಳಿಲ್ಲ.

ಬಿಹಾರ ಚುನಾವಣೆ ಬಳಿಕ ಸಾಕಷ್ಟು ರಾಜಕೀಯ ಬದಲಾವಣೆಗಳು ರಾಜ್ಯದಲ್ಲಿ ಆಗಲಿದೆ. ರಾಜ್ಯದಲ್ಲಿ ಅಲ್ಲೋಲಕಲ್ಲೋಲ ಆಗುವುದು ಸ್ಪಷ್ಟ ಎಂದು ತಿಳಿಸಿದರು.

ಉತ್ತರ ಕರ್ನಾಟಕ, ಅದರಲ್ಲೂ ಪ್ರಮುಖವಾಗಿ ಕಲ್ಯಾಣ ಕರ್ನಾಟಕದಲ್ಲಿ ಭೀಕರ ಮಳೆಯಿಂದ ರೈತರು ಬೀದಿಗೆ ಬಂದಿದ್ದಾರೆ. ತೊಗರಿ, ಸೋಯಾಬೀನ್, ಬೇಳೆ ಕಾಳುಗಳು ಸಂಪೂರ್ಣ ನಾಶವಾಗಿವೆ. ರೈತರು ಕಂಗಾಲಾಗಿದ್ದಾರೆ. ಬಡವರು ಮನೆ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಜಾತಿಗಳ ನಡುವೆ ಕಂದಕ ತರಲು ಜಾತಿ ಸಮೀಕ್ಷೆ: ಆರ್.ಅಶೋಕ

ಕೃಷಿ ಸಚಿವರು, ಕಂದಾಯ ಸಚಿವರು, ಉಸ್ತುವಾರಿ ಸಚಿವರು ಇದರ ಬಗ್ಗೆ ಗಮನಿಸುತ್ತಿಲ್ಲ ಎಂದು ಟೀಕಿಸಿದರು. ರಾಜ್ಯ ಸರಕಾರ ಹೇಳಿಕೆಗಳಿಗೆ ಸೀಮಿತವಾಗದೇ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಆಗ್ರಹಿಸಿದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!