ಬೆಂ.ಗ್ರಾ.ಜಿಲ್ಲೆ: ಸ್ವಾಮಿ ವಿವೇಕಾನಂದ ರವರ ಜನ್ಮ ದಿನಾಚರಣೆ ಅಂಗವಾಗಿ ಪ್ರತಿ ವರ್ಷ ಜನವರಿ 12 ರಂದು ರಾಷ್ಟ್ರೀಯ ಯುವ ದಿನಾಚಾರಣೆಯನ್ನು (Youth festival) ಸಂಘಟಿಸಲಾಗುತ್ತದೆ.
ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಯುವಜನೋತ್ಸವ ಕಾರ್ಯಕ್ರಮವನ್ನು ಅಯೋಜಿಸಲಾಗುತ್ತಿದ್ದು ಇದರ ಅಂಗವಾಗಿ ವಿಜ್ಞಾನ ಮೇಳ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 18 ಶನಿವಾರ ಬೆಳಿಗ್ಗೆ 9.30 ಕ್ಕೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಾದಗೊಂಡನಹಳ್ಳಿ ರಸ್ತೆ, ದೊಡ್ಡಬಳ್ಳಾಪುರ ತಾಲ್ಲೂಕು ಇಲ್ಲಿ ಆಯೋಜಿಸಲಾಗಿದೆ.
ವಿವಿಧ ಸ್ಪರ್ಧೆಗಳಲ್ಲಿ 15 ರಿಂದ 29ರ ವಯೋಮಿತಿಯಲ್ಲಿರುವ ಜಿಲ್ಲೆಯ ಎಲ್ಲಾ ಯುವಕ-ಯುವತಿಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ, ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಬಹುದು.ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ನಗದು ಬಹುಮಾನ, ಪ್ರಮಾಣ ಪತ್ರ ನೀಡಲಾಗುವುದು.
ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕಥೆ ಬರೆಯುವ ಸ್ಪರ್ಧೆ, ಕವಿತೆ ಬರೆಯುವ ಸ್ಪರ್ಧೆ,ಭಾಷಣ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ ಜಾನಪದ ನೃತ್ಯ (ಗುಂಪು), ಜಾನಪದ ಗೀತೆ (ಗುಂಪು) ಹಾಗೂ ವಿಜ್ಞಾನ ಮೇಳ (ಗುಂಪು).
ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಚೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕಛೇರಿ ದೂರವಾಣಿ ಸಂಖ್ಯೆ :080-29787443 ಹಾಗೂ ಮೊಬೈಲ್ ಸಂ:9632778567 ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.