ಚಿಕ್ಕಬಳ್ಳಾಪುರ: ತೆಲಗು ಚಿತ್ರರಂಗದ ಖ್ಯಾತ ನಟ, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಅವರು ಇಂದು (ಸೋಮವಾರ) ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಆಗಮಿಸುತ್ತಿದ್ದಾರೆ ಎಂದು ಚಿಕ್ಕಬಳ್ಳಾಪುರ ಎಸ್‌ಪಿ ಕುಶಾಲ್ ಚೌಕ್ಷೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಇತ್ತೀಚೆಗೆ ಕರೂರು ಮತ್ತು ಆರ್‌ಸಿಬಿ ಕಾಲ್ತುಳಿತದಂತಹ ದುರಂತಗಳು ನಡೆದಿರುವ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂತಹ ದುರಂತಗಳು ಮರುಕಳಿಸದಂತೆ ಕಾರ್ಯಕ್ರಮದ ಸುರಕ್ಷತೆಗಾಗಿ ಬಿಗಿ ಭದ್ರತಾ ಕ್ರಮಗಳ ಕುರಿತು ಎಚ್ಚರಿಕೆ ವಹಿಸಲಾಗಿದೆ.
ಕಾರ್ಯಕ್ರಮ ಕುರಿತಂತೆ ಈಗಾಗಲೇ ಆಯೋಜಕರೊಂದಿಗೆ ಮೂರು ಬಾರಿ ಸಭೆ ನಡೆಸಲಾಗಿದ್ದು, ಸತತ 17 ದಿನಗಳಿಂದ ಸಂಪರ್ಕಲ್ಲಿದ್ದೇವೆ. ಅಧಿಕಾರಿಗಳೊಂದಿಗೂ ಹಲವು ಸಭೆಗಳನ್ನು ನಡೆಸಲಾಗಿದೆ. ನಮ್ಮ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದರು.
Pawan Kalyan ಭೇಟಿ; ಸ್ಪೋಟಕ, ಮಾದಕ ವಸ್ತುಗಳ ಸಂಪೂರ್ಣ ನಿಷೇಧ..!
ಕಾರ್ಯಕ್ರಮ ನಡೆಯುವ ವೇಳೆ ಸ್ಫೋಟಕ ವಸ್ತುಗಳು ಮತ್ತು ಮಾದಕ ದ್ರವ್ಯಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಭದ್ರತೆಗಾಗಿ 500 ಪೊಲೀಸ್ ಪೇದೆಗಳು, 6 ಡಿವೈಎಸಿಗಳು, 30 ಇನ್ ಪೆಕ್ಟರ್‌ಗಳು, 50 ಪಿಎಸ್‌ಐಗಳು, 4 ಕೆಎಸ್ ಆರ್‌ಪಿ ತುಕಡಿ ಗಳು, 6 ಡಿಎಆರ್ ತುಕಡಿಗಳು ಮತ್ತು 3 ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: Astrology; ದಿನ ಭವಿಷ್ಯ: ಈ ರಾಶಿಯವರು ವಾಹನ ಚಾಲನೆ ಮಾಡುವಾಗ ಜಾಗರೂಕರಾಗಿರಬೇಕು