Survey of 1.10 crore families completed: CM Siddaramaiah

1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಪೂರ್ಣ; CM ಸಿದ್ದರಾಮಯ್ಯ

ಕೊಪ್ಪಳ: ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು.

ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ.

ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ.

ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಕೊಪ್ಪಳದಲ್ಲಿ ಶೇ.97ರಷ್ಟು ಸಮೀಕ್ಷೆ ಪೂರ್ಣ: CM

ಕೊಪ್ಪಳ ಜಿ್ಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದರು.

ಕೊಪ್ಪಳದಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದಾ, ಕಡಿಮೆ ಅಂತರದಲ್ಲಿ ಸೋತಿದ್ದರೂ, ಕೊಪ್ಪಳದ ಜನ ತನ್ನನ್ನು ಆಶೀರ್ವದಿಸಿದ್ದರು ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಜನತೆಗೆ ಧನ್ಯವಾದಗಳನ್ನು ತಿಳಿಸಿದರು.

ಬಲ್ಡೋಟಾ ಕಾರ್ಖಾನೆ

ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತಂತೆ ಕೊಪ್ಪಳದಲ್ಲಿ ಹೋರಾಟಗಳು ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಲ್ಡೋಟಾ ಕಾರ್ಖಾನೆಯ ವಿಚಾರ ನ್ಯಾಯಾಲಯದಲ್ಲಿ ವಿಲೇ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಪರಿಸರ ಮಾಲಿನ್ಯ ತಡೆಯಲು ಕ್ರಮ

ಎಂಎಸ್ ಪಿ ಎಲ್ ಸೇರಿದಂತೆ ವಿವಿಧ ಕೈಗಾರಿಕೆಗಳಿಂದ ಬರುವ ಧೂಳಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರದ ಕ್ರಮ ತೆಗೆದುಕೊಳ್ಳುತ್ತಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಕಾರ್ಖಾನೆಗಳಿಂದ ಬರುವ ಧೂಳನ್ನು ಪರೀಕ್ಷೆ ನಡೆಸಿ, ಧೂಳು ಬರದಂತೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

ಕೇಂದ್ರ ಸರ್ಕಾರವೂ ಜಾತಿಗಣತಿ ನಡೆಸಲಿದೆ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದಾರೆ. ಕೇಂದ್ರ ಸರ್ಕಾರ ನಡೆಸಲಿರುವ ಜಾತಿಗಣತಿಗೂ ವಿರೋಧ ವ್ಯಕ್ತಪಡಿಸುತ್ತಾರೆಯೇ ? ಎಂದು ಪ್ರಶ್ನಿಸಿದರು.

ಲಿಂಗಾಯಿತ ಪ್ರತ್ಯೇಕ ಧರ್ಮ: ಜನರೇ ನಿಲುವೇ ನನ್ನ ನಿಲುವು

ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮ ಎನ್ನುವ ಬಗ್ಗೆ ಮುಖ್ಯಮಂತ್ರಿಗಳ ನಿಲುವೇನು ಎಂಬ ಪ್ರಶ್ನೆಗೆ ಉತ್ತರಿಸಿ, ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ, ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.

ಗ್ಯಾರಂಟಿಗಳು ಸಮರ್ಪಕವಾಗಿ ತಲುಪುತ್ತಿದೆ

ಗ್ಯಾರಂಟಿಗಳು ಸಮರ್ಪಕವಾಗಿ ಜನರಿಗೆ ತಲುಪುತ್ತಿಲ್ಲ ಎಂಬುದಕ್ಕೆ ಉತ್ತರಿಸಿ, ಗ್ಯಾರಂಟಿಗಳನ್ನು ಸಮರ್ಪಕವಾಗಿ ತಲುಪಿಸಲಾಗುತ್ತಿದೆ ಎಂದರು.

ಕೆಮ್ಮಿನ ಔಷಧಿ-ಎಚ್ಚರಿಕೆ ವಹಿಸುವಂತೆ ಇಲಾಖೆಗೆ ಸೂಚನೆ

ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ರಾಜ್ಯಸರ್ಕಾರದ ಕ್ರಮವೇನು ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.

ಇದನ್ನೂ ಓದಿ: D.K. Shivakumar: ವೈಯಕ್ತಿಕ ಮಾಹಿತಿ ಕೇಳಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!