Doddaballapura: Maharishi Valmiki Jayanti celebrated By Kasapa

ದೊಡ್ಡಬಳ್ಳಾಪುರ: ಕಸಾಪದಿಂದ ಮಹರ್ಷಿ ವಾಲ್ಮೀಕಿ ಜಯಂತಿ

ದೊಡ್ಡಬಳ್ಳಾಪುರ: ಮಹರ್ಷಿ ವಾಲ್ಮೀಕಿ (Maharishi Valmiki) ಜಗತ್ತಿನ ಶ್ರೇಷ್ಠ ಕವಿಗಳಲ್ಲಿ ಒಬ್ಬರು. ಅವರ ರಾಮಾಯಣ ಮಹಾಕಾವ್ಯ ಒಂದು ಭಾವನಾಪ್ರಧಾನ ಕೃತಿಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಸಾಸಲು ಹೋಬಳಿ ಘಟಕದ ಅಧ್ಯಕ್ಷ ಜಿ.ಎಂ.ನಾಗರಾಜು ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತೀಯ ಭಾಷೆಗಳಿಗೆ ವಾಲ್ಮೀಕಿ ಅವರ  ರಾಮಾಯಣ ಮಹಾಕಾವ್ಯ ಉಂಟು ಮಾಡಿದ ಪ್ರೇರಣೆ ಮತ್ತು ಪ್ರಭಾವ ಅನನ್ಯವಾದುದು. ಹೀಗಾಗಿ ವಾಲ್ಮೀಕಿಯನ್ನು ಭಾರತದ ಆದಿ ಕವಿ ಎಂದು ಕರೆಯಲಾಗುತ್ತಿದೆ.
ರಾಮಾಯಣ ಕಾವ್ಯ ಓದು ನಿರಂತರವಾಗಿದೆ.

ಭಾರತ ದೇಶದ ನದಿ, ವನ, ಪರ್ವತಗಳ ವರ್ಣನೆ ಪರಿಸರವನ್ನು ಪರಿಚಯಿಸುತ್ತದೆ. ವಿವಿಧಗಳು ಪಾತ್ರಗಳು ಮತ್ತು ಸನ್ನಿವೇಶಗಳು ಭಾರತದ ಸಾಮಾಜಿಕ, ರಾಜಕೀಯ ವ್ಯವಸ್ಥೆಯನ್ನು ವಿಶ್ಲೇಷಣೆ ಮಾಡುತ್ತವೆ ಎಂದರು.

ಮಹರ್ಷಿ ವಾಲ್ಮೀಕಿಯ ಜೀವನದ ಕುರಿತಾಗಿ ಅನೇಕ ದಂತಕಥೆಗಳಿವೆ. ಮಹರ್ಷಿ ವಾಲ್ಮೀಕಿಯನ್ನು ರಾಮನಿಗೆ ಸಮಕಾಲೀನರೆಂದು ಪರಿಗಣಿಸಲಾಗಿದೆ.  ರಾಮನಿಂದ ಸೀತೆಯು  ಬಹಿಷ್ಕೃತಗೊಂಡಾಗ ಸೀತೆಗೆ ಆಶ್ರಯ ನೀಡುವವರು ಮಹರ್ಷಿ ವಾಲ್ಮೀಕಿ ಆಗಿದ್ದಾರೆ. ಶತಶತಮಾನಗಳಿಂದ ಭಾರತೀಯರ ಮನ್ನಣೆಗೆ ಪಾತ್ರವಾಗಿರುವ   ವಾಲ್ಮೀಕಿ ರಾಮಾಯಣ ಮಹಾಕಾವ್ಯ  ಹಲವು ವೈಶಿಷ್ಟ್ಯಗಳಿಂದ ಕೂಡಿದೆ. ವಾಲ್ಮೀಕಿಯ ವಿದ್ವತ್ತಿಗೆ ಜನಮನ್ನಣೆ ದೊರೆತಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ ಮಾತನಾಡಿ, ಆದಿಕವಿ ವಾಲ್ಮೀಕಿಯ ರಾಮಾಯಣವು ಭಾರತ ದೇಶದ  ಸಾಮಾಜಿಕ, ರಾಜಕೀಯ, ಭೌಗೋಳಿಕ ಚಿತ್ರಣ, ಆದರ್ಶ, ನೈತಿಕತೆ, ಧರ್ಮಗಳ ಸೂಕ್ಷ್ಮತೆ, ಪರಿಸರ ಪ್ರಜ್ಞೆ ಮುಂತಾದ ಹಲವಾರು  ವಿಚಾರಧಾರೆಗಳನ್ನು ಒಳಗೊಂಡಿದೆ.  ವಾಲ್ಮೀಕಿಯ ಸೃಜನಶೀಲತೆ ಮತ್ತು ಕಲಾತ್ಮಕತೆಯ ಪ್ರಭಾವದಿಂದಾಗಿ ಭಾರತೀಯ ಭಾಷೆಗಳಲ್ಲಿ ರಾಮಾಯಣ ಕೃತಿಗಳು‌ ರಚನೆಗೊಂಡಿವೆ ಎಂದರು.

ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು,  ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ರಾಜಘಟ್ಟ ರವಿ, ಕನ್ನಡ ಪಕ್ಷದ ರಾಜ್ಯ ಉಪಾಧ್ಯಕ್ಷ ಸಂಜೀವ್ ನಾಯಕ್, ಜಿಲ್ಲಾ ಅಧ್ಯಕ್ಷ ಮುನಿಪಾಪಣ್ಣ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ದೊಡ್ಡಬಳ್ಳಾಪುರ ತಾಲ್ಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು,  ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಸಂಘಟನಾ ಕಾರ್ಯದರ್ಶಿ ಆರ್.ಗೋವಿಂದರಾಜು.

ಕಸಬಾ ಹೋಬಳಿ ಘಟಕದ  ಕೋಶಾಧ್ಯಕ್ಷ ಜಿ.ಸುರೇಶ್, ದೊಡ್ಡಬೆಳವಂಗಲ ಘಟಕದ ಕಾರ್ಯದರ್ಶಿ ಅಂಜನಮೂರ್ತಿ,  ಪ್ರತಿನಿಧಿಗಳಾದ ನಾಗರತ್ನಮ್ಮ,   ರಾಧಮಣಿ, ಸಫೀರ್, ಇಸ್ತೂರು ಕೋದಂಡರಾಮ ಭಜನಾ ಮಂಡಲಿಯ ರಂಗಸ್ವಾಮಯ್ಯ, ರಂಗಭೂಮಿ ಕಲಾವಿದ ಸಂಘದ ಜಿಲ್ಲಾ ಕಾರ್ಯದರ್ಶಿ  ಪುಟ್ಟಸಿದ್ದಯ್ಯ, ಗೆಜ್ಜಗದಹಳ್ಳಿ ಮುನಿರಾಜು,

ಲಾವಣ್ಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್,  ನಿವೃತ್ತ ಮುಖ್ಯಶಿಕ್ಷಕ ಜಿ.ಎಸ್.ಚೌಧರಿ,   ಶಿಕ್ಷಕರ ಸಂಘಟನೆಯ ಕೆ.ಆರ್.ಜಯರಾಮ್, ಸಹ ಶಿಕ್ಷಕರುಗಳಾದ ಕೋದಂಡರಾಮ್, ಗಣೇಶ್.

ಕಲಾವಿದ ಬಾಶೆಟ್ಟಿಹಳ್ಳಿ ಮಂಜುನಾಥ್, ದರ್ಗಾಜೋಗಿಹಳ್ಳಿ ಮಲ್ಲೇಶ್, ಕವಿ  ಮಹಾದೇವಪ್ಪ, ದುರ್ಗಾಶ್ರೀಕಾಂತ್  ಮುಂತಾದವರು ಭಾಗವಹಿಸಿದ್ದರು

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!