Holiday extended for government and aided schools till October 18

ಮನೆ ಮನೆ ಸಮೀಕ್ಷೆ: ಅ.18 ರ ವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ರಜೆ ವಿಸ್ತರಣೆ

ಬೆಂಗಳೂರು: “ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪೂರ್ಣಗೊಳಿಸಲು ಹೆಚ್ಚಿನ ಕಾಲಾವಕಾಶ ಬೇಕೆನ್ನುವ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕಕ್ಷಕರ ಸಂಘದ ಮನವಿ ಮೇರೆಗೆ ಇದೇ ತಿಂಗಳು 18 ರವರೆಗೆ ಅಂದರೆ 10 ದಿನಗಳ ಕಾಲ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಿಗೆ (Schools) ಸರ್ಕಾರ ರಜೆ ಘೋಷಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ( D.K. Shivakumar) ತಿಳಿಸಿದರು.

ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

“ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಶೇ.90ರಷ್ಟು ಜನರು ಸಮೀಕ್ಷೆಗೆ ಸಹಕಾರ ನೀಡಿದ್ದಾರೆ. ಸರ್ಕಾರದ ಪರವಾಗಿ ಅವರಿಗೆ ಅಭಿನಂದಿಸುತ್ತೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ತರಬೇತಿ ಹಾಗೂ ಚುನಾವಣಾ ಆಯೋಗದ ಕೆಲಸಗಳ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ಸ್ವಲ್ಪ ತಡವಾಗಿ ಆರಂಭಿಸಿದ್ದೇವೆ. ಈ ಭಾಗದಲ್ಲಿ ಸಮೀಕ್ಷೆ ಮಂದಗತಿಯಲ್ಲಿದ್ದು, ಶೇ.25ರಷ್ಟು ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಐದೂ ಪಾಲಿಕೆ ಆಯುಕ್ತರು ಹಾಗೂ ಶಿಕ್ಷಣ ಇಲಾಖೆಯ ಜತೆಗೆ ಸಭೆ ಮಾಡಿ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

“ರಾಜ್ಯದಲ್ಲಿರುವ ಎಲ್ಲಾ ಜನರಿಗೆ ನ್ಯಾಯ ಒದಗಿಸಿಕೊಡಲು ಸರ್ಕಾರ ಸಮೀಕ್ಷೆ ನಡೆಸುತ್ತಿದೆ. ಬೆಂಗಳೂರು ನಗರದಲ್ಲಿರುವ ಜನರು ಈ ಸಮೀಕ್ಷೆಗೆ ಸಂಪೂರ್ಣ ಸಹಕಾರ ನೀಡಬೇಕು. ಈ ಸಮೀಕ್ಷೆಯಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿಯೂ ಸಾರ್ವಜನಿಕರು ಮಾಹಿತಿ ಸಲ್ಲಿಸಬಹುದು. ನಿಮಗೆ ಇಚ್ಛೆಯಿರುವಷ್ಟು ಮಾಹಿತಿ ನೀಡಬಹುದು. ಇಲ್ಲಿ ಸರ್ಕಾರ ಹೆಚ್ಚಿನ ಒತ್ತಡ ಹಾಕುವುದಿಲ್ಲ” ಎಂದು ತಿಳಿಸಿದರು.

“ಗ್ರಾಮೀಣ ಭಾಗದ ಜನರ ಬದುಕಿನ ಪ್ರಗತಿ ಬಗ್ಗೆ ಅರಿಯಲು ಕೆಲವು ಪ್ರಶ್ನೆಗಳನ್ನು ಸೇರಿಸಲಾಗಿದೆ. ಅನೇಕರು ಗ್ರಾಮೀಣ ಭಾಗದಿಂದ ಬಂದು ಇಲ್ಲಿ ವಾಸವಾಗಿದ್ದಾರೆ. ಇವರ ಜೀವನದಲ್ಲಿ ಶೈಕ್ಷಣಿಕ ಪರಿಸ್ಥಿತಿ, ಆರ್ಥಿಕ ಶಕ್ತಿ ಬಗ್ಗೆ ತಿಳಿಯಲು ಸರ್ಕಾರ ಪ್ರಯತ್ನಿಸುತ್ತಿದೆ. ಇದಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇವೆ. ಇನ್ನು ಕರ್ನಾಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ವಿಧಾನ ಪರಿಷತ್ ಸದಸ್ಯರಾದ ಪುಟ್ಟಣ್ಣ ಅವರ ನೇತೃತ್ವದಲ್ಲಿ ಸಿಎಂ ಹಾಗೂ ನನ್ನನ್ನು ಭೇಟಿ ಮಾಡಿ ತಮ್ಮ ಮನವಿ ನೀಡಿದ್ದಾರೆ. ಈ ಸಮೀಕ್ಷೆಯಲ್ಲಿ ಭಾಗವಹಿಸುತ್ತೇವೆ, ನಮಗೆ ಸ್ವಲ್ಪ ಕಾಲಾವಕಾಶ ಬೇಕು ಎಂದು ಕೋರಿದ್ದಾರೆ. ಇದು ಖಾಸಗಿ ಹಾಗೂ ಪಿಯುಸಿಗಳಿಗೆ ಅನ್ವಯವಾಗುವುದಿಲ್ಲ” ಎಂದರು.

ನಾವು ಯಾರನ್ನೂ ವಿಭಜಿಸುವುದಿಲ್ಲ

ಲಿಂಗಾಯತ ಧರ್ಮದ ವಿಚಾರವಾಗಿ ಕಾಂಗ್ರೆಸ್ ನಲ್ಲೇ ಭಿನ್ನಮತವಿದೆ ಎಂದು ಹೇಳಿದಾಗ, “ನಾವು ಯಾರನ್ನೂ ವಿಭಜಿಸುವುದಿಲ್ಲ. ಈ ವಿಚಾರ ಆ ಸಮಾಜಕ್ಕೆ ಹಾಗೂ ಜನರಿಗೆ ಬಿಡುತ್ತೇವೆ. ಈ ಸಮುದಾಯದ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವಿಚಾರವಾಗಿ ಮಾತ್ರ ಅವರ ಸಮುದಾಯದ ಗುರುತು ಕೇಳುತ್ತಿದ್ದೇವೆ. ಇದರ ಹೊರತಾಗಿ ನಮ್ಮ ಮುಂದೆ ಬೇರೆ ಯಾವುದೇ ಆಲೋಚನೆಗಳಿಲ್ಲ. ಅವುಗಳ ಬಗ್ಗೆ ನಾವು ಚಿಂತಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ರಾಜಕೀಯ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿಗೆ ಬೆಣ್ಣೆ, ನಮಗೆ ಸುಣ್ಣ: ಕೇಂದ್ರದ ವಿರುದ್ಧ ಎಂ ಬಿ ಪಾಟೀಲ ಅಸಮಾಧಾನ

ತಮಿಳುನಾಡಿನ (Tamil Nadu) ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ರಾಜ್ಯದ ಹುಬ್ಬಳ್ಳಿ ಮತ್ತು ಬೆಳಗಾವಿ ವಿಮಾನ‌ ನಿಲ್ದಾಣಗಳ ಬಗ್ಗೆ ಇಂತಹ ನಿರ್ಧಾರ ಘೋಷಿಸದೆ ಇರುವುದು

[ccc_my_favorite_select_button post_id="120142"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!