ಬೆಂಗಳೂರು: 2025ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು (Maharishi Valmiki Award) ರಾಜ್ಯ ಸರಕಾರ ಘೋಷಿಸಿದೆ.
ಮಾಧ್ಯಮ ಕ್ಷೇತ್ರದಿಂದ ಬೆಂಗಳೂರಿನ ನಾಗರಾಜು ಗಾಣದ ಹುಣಸೆ, ರಂಗಭೂಮಿ ಕ್ಷೇತ್ರದಿಂದ ಚಳ್ಳಕೆರೆಯ ಪಿ.ತಿಪ್ಪೇಸ್ವಾಮಿ, ಸಂಘಟನಾ ಕ್ಷೇತ್ರದಿಂದ ವಿರಾಜಪೇಟೆಯ ಜೆ.ಕೆ. ಮುತ್ತಮ್ಮ, ಸಮಾಜಸೇವೆ ಕ್ಷೇತ್ರದಿಂದ ವಿಜ ಯಪುರದ ಮಳಸಿದ್ದ ಲಕ್ಷ್ಮಣ ನಾಯಕೋಡಿ, ಹಾಗೂ ಹರಪನಹಳ್ಳಿಯ ಕೆ. ಉಚ್ಚಂಗಪ್ಪ ಅವರನ್ನು ಆಯ್ಕೆ ಮಾಡಿದೆ.
ಸಿಎಂ ಅಭಿನಂದನೆ
2025ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾಗಿರುವ ನಾಗರಾಜು ಗಾಣದ ಹುಣಸೆ, ಪಿ.ತಿಪ್ಪೇಸ್ವಾಮಿ, ಜೆ.ಕೆ.ಮುತ್ತಮ್ಮ, ಮಳಸಿದ್ದ ಲಕ್ಷ್ಮಣ ನಾಯಕೋಡಿ ಹಾಗೂ ಕೆ.ಉಚ್ಚಂಗಪ್ಪ ಅವರಿಗೆ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.
ಸಾಹಿತ್ಯ, ಸಂಘಟನೆ, ರಂಗಭೂಮಿ, ಮಾಧ್ಯಮ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಈ ಎಲ್ಲ ಗಣ್ಯರ ಸಾಧನೆ ಸಮಾಜಕ್ಕೆ ಮಾದರಿಯಾಗಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.