ಮೈಸೂರು: ದುಷ್ಕರ್ಮಿಗಳು ಹಾಡಹಗಲೇ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ (Murder) ಮಾಡಿ ಪರಾರಿಯಾಗಿರುವ ಘಟನೆ ಇಲ್ಲಿನ ವಸ್ತುಪ್ರದರ್ಶನ ಮೈದಾನದ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಕ್ಯಾತಮಾರನಹಳ್ಳಿ ವೆಂಕಟೇಶ್ ಎನ್ನಲಾಗಿದೆ.
ವೆಂಕಟೇಶ್ ದೊಡ್ಡಕೆರೆ ಮೈದಾನದ ಬಳಿ ಕಾರಿನಲ್ಲಿ ತೆರಳುತ್ತಿದ್ದಾಗ, ಆಟೋ ಮತ್ತು ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಣಾಂತಿಕವಾಗಿ ದಾಳಿ (Murder) ನಡೆಸಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡ ವೆಂಕಟೇಶ್ ಸಾವನಪ್ಪಿದ್ದಾರೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕರ್, ಡಿಸಿಪಿಗಳಾದ ಬಿಂದುರಾಣಿ, ಕೆ.ಎಸ್.ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ: ಸೋನಮ್ ವಾಂಗ್ಚುಕ್ ಬಂಧನ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟೀಸ್