ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ (Socio-educational survey) ಶಿಕ್ಷಕರು ಪಾಲ್ಗೊಳ್ಳುವ ಕಾರಣ ಸರ್ಕಾರಿ ಮತ್ತು ಅನುದಾನಿತ ಶಾಲಾ (School) ತರಗತಿ ಸಮಯವನ್ನು ಮರು ನಿಗದಿಪಡಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಜಾತಿವಾರು ಸಮೀಕ್ಷೆಯ ಅವಧಿ ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ವ್ಯಾಪ್ತಿ ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ಶಾಲಾ ತರಗತಿಗಳನ್ನು ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ನಿರ್ವಹಿಸುವಂತೆ ಸೂಚಿಸಲಾಗಿದೆ. ನಂತರದ ಅವಧಿಯಲ್ಲಿ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್ 8ರಿಂದ 24ರವರೆಗೆ ಶಾಲಾ ತರಗತಿಗಳನ್ನು ಬೆಳಿಗ್ಗೆ 8 ಗಂಟೆಯಿಂದ ಅಪರಾಹ್ನ 1 ಗಂಟೆಯವರೆಗೆ ಇರಲಿದೆ. ಅಲ್ಲದೆ ಸಮೀಕ್ಷೆಯನ್ನು ಅಕ್ಟೋಬರ್ 24ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ.
ರಾಜ್ಯತ ಇತರೆ ಭಾಗಗಳಲ್ಲಿ ಅಕ್ಟೋಬರ್ 8ರಿಂದ 12ರವರೆಗೆ ಶಾಲಾ ತರಗತಿ ಬೆಳಿಗ್ಗೆ 8ರಿಂದ ಅಪರಾಹ್ನ 1 ಗಂಟೆಯವರೆಗೆ ಇರಲಿದೆ. ಅಲ್ಲದೆ ಸಮೀಕ್ಷೆಯನ್ನು ರಜಾ ದಿನಗಳಲ್ಲಿಯೂ ಕೈಗೊಂಡು ಅಕ್ಟೋಬರ್ 12ರೊಳಗೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.