Bigg Boss bandh; Instructions to find solutions to problems: DCM D.K. Shivakumar

ಬಿಗ್ ಬಾಸ್ ಬಂದ್; ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಆಗ್ರಹಿಸಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಕೇಳಿದಾಗ, “ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದರು.

ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸೂಚನೆ; D.K. Shivakumar

ಬಿಗ್ ಬಾಸ್ ಕಾರ್ಯಕ್ರಮ ನಡೆಯುವ ಜಾಲಿವುಡ್ ಸ್ಟುಡಿಯೋವನ್ನು ಉದ್ಘಾಟನೆ ಮಾಡಿದ್ದೇ ನಾನು. ಅಲ್ಲಿ ಏನಾಗಿದೆ ಎಂಬ ಬಗ್ಗೆ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ. ಜೊತೆಗೆ ಉದ್ಯೋಗ ಮುಖ್ಯ ಎಂದೂ ಹೇಳಿದ್ದೇನೆ.

ಖಾಸಗಿಯವರು ಹೂಡಿಕೆ ಮಾಡಿರುತ್ತಾರೆ. ಇದಕ್ಕೆ ಏನು ಪರಿಹಾರ ಕಂಡುಕೊಳ್ಳಬಹುದೋ ಅದಕ್ಕೆ ಅವಕಾಶ ನೀಡಿ ಎಂದೂ ತಿಳಿಸಿದ್ದೇನೆ. ಬಿಗ್ ಬಾಸ್ ಒಂದೇ ಅಲ್ಲ. ಎಲ್ಲಾ ಮನರಂಜನಾ ಕಾರ್ಯಕ್ರಮಗಳು ನಡೆಯಬೇಕು ಎಂದರು.

ಜಾಲಿವುಡ್ ಸ್ಟುಡಿಯೋದವರು ಮಾಲಿನ್ಯ ನಿಯಮಗಳನ್ನು ಪಾಲಿಸಿಲ್ಲ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ನೀಡಲಾಗಿತ್ತು. ಅದರ ಆದೇಶದಂತೆ ಈಗ ಕ್ರಮ ತೆಗೆದುಕೊಳ್ಳಲಾಗಿದೆ.

ಅಧಿಕಾರಿಗಳು ಕಾನೂನಾತ್ಮಕವಾಗಿ ಕೆಲಸ ಮಾಡಿದ್ದಾರೆ. ಈ ವಿಚಾರಗಳನ್ನು ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡೆ ಎಂದು ಹೇಳಿದರು.

ನಟ್ಟು ಬೋಲ್ಟ್ ಟೈಟ್ ಎಂದು ಜೆಡಿಎಸ್ ಹಾಗೂ ಕುಮಾರಸ್ವಾಮಿ ಅವರು ಎಕ್ಸ್ (ಟ್ವೀಟ್) ಮಾಡಿರುವ ಬಗ್ಗೆ ಕೇಳಿದಾಗ, “ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ಕುಮಾರಸ್ವಾಮಿ ಅವರಾದರೂ ಮಾಡಿಕೊಳ್ಳಲಿ, ಮೇಲಿನಿಂದ ಯಾರನ್ನಾದರೂ ಕರೆದುಕೊಂಡಾದರೂ ಬಂದು ಮಾಡಿಕೊಳ್ಳಲಿ” ಎಂದು ವ್ಯಂಗ್ಯವಾಡಿದರು.

“ಈ ವಿಚಾರದಲ್ಲಿ ಜೆಡಿಎಸ್ ಹಾಗೂ ಕುಮಾರಸ್ವಾಮಿ ಅವರು ರಾಜಕೀಯ ಮಾಡುತ್ತಿದ್ದಾರೆ. ಪ್ರತಿದಿನ ನನ್ನನ್ನು, ನನ್ನ ಹೆಸರನ್ನು ನೆನಪಿಸಿಕೊಳ್ಳದಿದ್ದರೆ ಅವರಿಗೆ (ಕುಮಾರಸ್ವಾಮಿ) ನೆಮ್ಮದಿ, ನಿದ್ದೆ ಹಾಗೂ ಯಾವುದಕ್ಕೂ ಶಕ್ತಿ ಬರುವುದಿಲ್ಲ” ಎಂದು ಲೇವಡಿ ಮಾಡಿದರು.

ಲಾಲ್ ಬಾಗ್ ವಿರೂಪಗೊಳ್ಳುವುದಿಲ್ಲ

ಟನಲ್ ರಸ್ತೆಯಿಂದ ಲಾಲ್ ಬಾಗ್ ವಿರೂಪಗೊಳ್ಳಲಿದೆ ಎನ್ನುವ ಬಗ್ಗೆ ಕೇಳಿದಾಗ, ಬೆಂಗಳೂರಿನ ಪ್ರಗತಿಗೆ ಟನಲ್ ರಸ್ತೆ ಮಾಡಲಾಗುತ್ತಿದೆ. ನಾವು ಯಾವುದೇ ರೀತಿಯಲ್ಲೂ ಲಾಲ್ ಬಾಗ್ ಅನ್ನು ವಿರೂಪಗೊಳಿಸಲು ಹೋಗುವುದಿಲ್ಲ.

ಲಾಲ್ ಬಾಗ್ ಗೆ ಐತಿಹಾಸಿಕ ಮಹತ್ವವಿದೆ, ಅದು ಎಷ್ಟು ಪವಿತ್ರವಾದುದು ಎಂಬುದು ನಮಗೆ ತಿಳಿದಿದೆ. ಮುಂದಿನ ಸೋಮವಾರ ಲಾಲ್ ಬಾಗ್ ಅನ್ನು ಅಧಿಕಾರಿಗಳ ಜೊತೆ ವೀಕ್ಷಣೆ ಮಾಡುತ್ತೇನೆ. ಈ ಕುರಿತು ಯಾರಿಗೂ ಆತಂಕ ಬೇಡ ಎಂದರು‌.

ಸಚಿವ ಸಂಪುಟ ಪುನರ್ ವಿಸ್ತರಣೆ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಗೊತ್ತಿಲ್ಲ” ಎಂದರು.

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!