ಕೊಪ್ಪಳ: ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ (31 ವರ್ಷ) ಅವರನ್ನು ಮಂಗಳವಾರ ರಾತ್ರಿ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಕೊಚ್ಚಿ ಕೊಲೆ (Murder) ಮಾಡಿದ್ದಾರೆ.
ಸ್ನೇಹಿತರೆಲ್ಲರೂ ಸೇರಿಕೊಂಡು ರಾತ್ರಿ ಊಟಕ್ಕೆ ಹೋಗಿದ್ದ ವಾಪಸ್ ಬರುವಾಗ ಏಳೆಂಟು ಜನ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಬಂದು ಹಲ್ಲೆ ಮಾಡಿದ್ದಾರೆ, ಜೊತೆಯಲ್ಲಿದ್ದ ವೆಂಕಟೇಶ ಸ್ನೇಹಿತರನ್ನು ಬೆದರಿಸಿ ಓಡಿಸಿದರು ಎಂದು ಗೆಳೆಯರು ಮಾಧ್ಯಮಗಳಿಗೆ ಹೇಳಿದ್ದಾರೆ.
ಇನ್ನೂ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಪರಿಶೀಲನೆ ನಡೆಸಿದ್ದು, ಶ್ವಾನದಳ ಹಾಗೂ ಬೆರಳಚ್ಚು ತಂಡದವರು ಭೇಟಿ ನೀಡಿದ್ದಾರೆ.
ಕೊಲೆಗೆ ಕಾರಣ ತಿಳಿದುಬಂದಿಲ್ಲ. ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.