ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ತಡವಾಗಿ ಸಮೀಕ್ಷೆ ಶುರುವಾಗಿದೆ. ನರಕ ಚತುರ್ದಶಿ ಒಳಗೆ ಸಮೀಕ್ಷೆ ಮುಗಿಸಲು ಸೂಚಿಸಲಾಗಿದೆ. ಶಿಕ್ಷಕರು ಕೂಡ ಇಷ್ಟರೊಳಗೆ ಸಮೀಕ್ಷೆ ಮುಗಿಸುವ ಭರವಸೆ ನೀಡಿದ್ದಾರೆ ಎಂದು ಸಿಎಂ (Cm) ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ಚೀಟ್ ಮಾಡಿರುವ ಅವರು, ಸಮೀಕ್ಷೆಯ ವೇಳೆ ಮೂವರು ಶಿಕ್ಷಕರು ಮೃತಪಟ್ಟಿದ್ದಾರೆ. ಇವರಿಗೆ ತಲಾ 20 ಲಕ್ಷ ಪರಿಹಾರ ನೀಡಲಾಗುವುದು ಎಂದಿದ್ದಾರೆ
ಅಲ್ಲದೆ ಸಮೀಕ್ಷಾದಾರರಿಗೆ ರೂ.20,000 ಗೌರವಧನ ಕೊಡಲಾಗುವುದು. ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳಲು ಒಪ್ಪದ, ಹಿಂದೇಟು ಹಾಕುವವರ ವಿರುದ್ಧ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ ಎಂದು ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.