CJI case: Complaint against Bhaskar Rao in Doddaballapur..!

ಸಿಜೆಐ ಪ್ರಕರಣ: ಭಾಸ್ಕರ್ ರಾವ್ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ದೂರು..!

ದೊಡ್ಡಬಳ್ಳಾಪುರ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI) ಬಿ.ಆರ್.ಗವಾಯಿ (B.R.Gawai) ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ಪ್ರಕರಣದ ವಿಚಾರದಲ್ಲಿ ಬಿಜೆಪಿ (BJP) ಮುಖಂಡ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao) ಅವರು ನೀಡಿದ್ದ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದರ ಬೆನ್ನಲ್ಲೇ, ದೊಡ್ಡಬಳ್ಳಾಪುರದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕ್ರಮಕೈಗೊಳ್ಳುವಂತೆ ಕಾಂಗ್ರೆಸ್ ಕಾನೂನು ಘಟಕದಿಂದ ದೂರು ನೀಡಲಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಕಾಂಗ್ರೆಸ್ ಯುವ ಮುಖಂಡರು ಇನ್ಸ್ಪೆಕ್ಟರ್ ಸಾಧಿಕ್ ಪಾಷಾ ಅವರಿಗೆ, ಭಾರತದ ಮುಖ್ಯ ನ್ಯಾಯಮೂರ್ತಿ ಗೌರವಾನ್ವಿತ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆಯುವ ಘಟನೆಗೆ ಬೆಂಬಲವಾಗಿ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ವಕ್ತಾರ ಭಾಸ್ಕರ್ ರಾವ್ ವಿರುದ್ಧ ದೂರು ನೀಡಿದ್ದಾರೆ.

ಸಿಜೆಐ ಪ್ರಕರಣ: ಭಾಸ್ಕರ್ ರಾವ್ ವಿರುದ್ಧ ದೊಡ್ಡಬಳ್ಳಾಪುರದಲ್ಲಿ ದೂರು..!

ಈ ವೇಳೆ ರಾಜ್ಯ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ವಸಂತ್ ಕುಮಾರ್ ಎಚ್.ಎನ್., ರಾಜ್ಯ ಕಾರ್ಯದರ್ಶಿ ನವೀನ್ ಕುಮಾರ್ ಬಿ.ಸಿ., ಬೆಂಗಳೂರು ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಶರತ್ ಪಟೇಲ್, ಬೆಂಗಳೂರು ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ವಿಭಾಗದ ಅಧ್ಯಕ್ಷ ನವೀನ್ ಕುಮಾರ್ ಎಂ., ಉಪಾಧ್ಯಕ್ಷ ಹರ್ಷ ಹಾಗೂ ದೇವನಹಳ್ಳಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಸಂದೀಪ್ ಕೆ.ಎಂ. ಇದ್ದರು.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ಪ್ರಕರಣದ ವಿಚಾರದಲ್ಲಿ ಬಿಜೆಪಿ ಮುಖಂಡ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು, ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಾಕಿದ್ದರು.

ಪ್ರಶಂಸೆ

‘ಇದು ಕಾನೂನಿನ ಪ್ರಕಾರ ತಪ್ಪು ಎನಿಸಿದ್ದರೂ ಈ ವಯಸ್ಸಿನಲ್ಲಿ ಯಾವುದೇ ಪರಿಣಾಮ ಲೆಕ್ಕಿಸದೆ ನಿಲುವು ತೆಗೆದುಕೊಂಡು ಅದರಲ್ಲಿ ದೃಢವಾಗಿ ನಿಲ್ಲುವ ನಿಮ್ಮ ಧೈರ್ಯವನ್ನು ನಾನು ಮೆಚ್ಚುತ್ತೇನೆ’ ಎಂದು ವಕೀಲ ರಾಕೇಶ್ ಕಿಶೋ‌ರ್ ‘ಎಕ್ಸ್’ ಪೋಸ್ಟ್‌ಗೆ ಭಾಸ್ಕರ್ ರಾವ್ ಅವರು ಪ್ರತಿಕ್ರಿಯಿಸಿದ್ದರು.

ಪೊಸ್ಟ್ ಡಿಲೀಟ್

ಆ ಪೋಸ್ಟ್ ಅನ್ನು ಗಮನಿಸಿದ್ದ ಹಲವರು ಭಾಸ್ಕರ್ ಅವರನ್ನು ಟೀಕಿಸಿ ಆಕ್ರೋಶ ಹೊರಹಾಕಿದ್ದರು. ತಮ್ಮ ‘ಎಕ್ಸ್’ ಪೋಸ್ಟ್‌ಗೆ ತೀವ್ರ ಟೀಕೆ ವ್ಯಕ್ತವಾಗುತ್ತಿದ್ದಂತೆಯೇ ಅವರು ಆ ಪೋಸ್ಟ್ ಅನ್ನು ಅಳಿಸಿ ಹಾಕಿದ್ದರು.

ಕ್ಷಮಿಸಿ

ಬಳಿಕ ನೋವಾಗಿದ್ದರೆ ಕ್ಷಮಿಸಿ… ‘ಕೃತ್ಯ ಎಸಗಿದ (ವಕೀಲ) ವ್ಯಕ್ತಿಯ ನಡೆ ನನಗೆ ಆಘಾತವನ್ನು ಉಂಟು ಮಾಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಥವಾ ಯಾವುದೇ ಸಮುದಾಯವನ್ನು ಅವಮಾನಿಸಿಲ್ಲ. ನನ್ನ “ಎಕ್ಸ್’ ಪೋಸ್ಟ್‌ನಿಂದ ಯಾರಿಗಾದರೂ ನೋವು ತಂದಿದ್ದರೆ ಕ್ಷಮಿಸಿ’ ಎಂದು ಭಾಸ್ಕ‌ರ್ ರಾವ್ ಪ್ರತಿಕ್ರಿಯಿಸಿದ್ದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!