ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ

If the sanctity of Chamundeshwari temple is violated, 'Chamundeshwari Chalo'; R. Ashoka

ಬೆಂಗಳೂರು: ಮೈಸೂರಿನಲ್ಲಿ ದಸರಾ ಸಂಭ್ರಮಾಚರಣೆಯ ಸಮಯದಲ್ಲೇ ಬಾಲಕಿಯ ಅತ್ಯಾಚಾರವಾಗುವುದನ್ನು ತಡೆಗಟ್ಟಲು ಪೊಲೀಸರಿಗೆ ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಆಕ್ರೋಶ ಹೊರಹಾಕಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಬಲೂನ್‌ ಮಾರುತ್ತಿದ್ದ ಕುಟುಂಬದ ಬಾಲಕಿಯ ಅತ್ಯಾಚಾರವಾಗಿರುವುದು ದೊಡ್ಡ ದುರಂತ. ಕಾಂಗ್ರೆಸ್‌ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ಸೋತಿದೆ. ರಾಜ್ಯದಲ್ಲಿ ಮಕ್ಕಳು ನಿರ್ಭೀತಿಯಿಂದ ಓಡಾಡುವ ಪರಿಸ್ಥಿತಿ ಇಲ್ಲ. ಇಷ್ಟೆಲ್ಲ ಆದರೂ ರಾತ್ರಿ ಪೊಲೀಸರು ಎಲ್ಲಿ ಬೀಟ್‌ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಇದರ ಬಗ್ಗೆ ಮಾತೇ ಆಡಿಲ್ಲ ಎಂದರು.

ಮೈಸೂರಿನಲ್ಲಿ ದಸರಾ ಸಮಯದಲ್ಲಿ ನಾಲ್ಕೈದು ಜಿಲ್ಲೆಗಳ ಪೊಲೀಸರನ್ನು ನಿಯೋಜಿಸಲಾಗಿತ್ತು. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ದೆಹಲಿಯಲ್ಲಿ ರಸ್ತೆ ಗುಂಡಿ ಕಂಡುಹಿಡಿಯಲು ಸಾಧ್ಯವಾಗುತ್ತದೆ. ಆದರೆ ಅತ್ಯಾಚಾರವಾಗುವುದನ್ನು ತಡೆಯುವುದು ಸಾಧ್ಯವಾಗುವುದಿಲ್ಲ.

ಸಿಎಂ ಸಿದ್ದರಾಮಯ್ಯ ತಮ್ಮ ತವರು ಜಿಲ್ಲೆಯಲ್ಲಿ ವಿಜೃಂಭಣೆಯಿಂದ ದಸರಾ ಮಾಡಿದ್ದಾರೆ. ಆದರೆ ದಸರಾ ಸಂದರ್ಭದಲ್ಲೇ ಇಂತಹ ದುರಂತ ನಡೆದಿದೆ. ಪರಪ್ಪನ ಅಗ್ರಹಾರದೊಳಗೆ ಬರ್ತ್‌ಡೇ ಪಾರ್ಟಿ ನಡೆಯುತ್ತದೆ. ಜೈಲಿನೊಳಗೆ ಮಾದಕ ವಸ್ತುಗಳು ಪೂರೈಕೆಯಾಗುತ್ತದೆ. ಕಾನೂನು ವ್ಯವಸ್ಥೆ ಇಷ್ಟು ಅಧೋಗತಿಗೆ ಹೋಗಿದೆ ಎಂದರು.

ಬಿಹಾರ ಚುನಾವಣೆಗೆ ಹಣ ಬಳಕೆ

ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಚಿನ್ನದ ಗಟ್ಟಿಗಳನ್ನು ಹಾಗೂ 300 ಕೋಟಿ ರೂ. ಗೂ ಅಧಿಕ ಹಣವನ್ನು ಬಿಹಾರ ಚುನಾವಣೆಗೆ ಕಳುಹಿಸಿದ್ದಾರೆ. ಕರ್ನಾಟಕ ಎಂದರೆ ಕಾಂಗ್ರೆಸ್‌ನ ಎಟಿಎಂ ಆಗಿದೆ. ಯಾವ ಶಾಸಕರು ಎಷ್ಟು ಹಣ ಕೊಡುತ್ತಾರೋ ಎಂದು ಲೆಕ್ಕಹಾಕಿ ಅಂತಹವರಿಗೆ ಸ್ಥಾನಮಾನ ನೀಡಲಾಗುತ್ತದೆ. ಪ್ರತಿ ಇಲಾಖೆಯಲ್ಲಿ ಎಷ್ಟು ಪ್ರಮಾಣದ ಹಗರಣ ನಡೆಯುತ್ತಿದೆ ಎಂದು ಉದ್ಯಮಿ ಮೋಹನ್‌ದಾಸ್‌ ಪೈ ಹೇಳಿದ್ದಾರೆ ಎಂದರು.

ಪ್ರವಾಹ ಹಾನಿ ಪರಿಹಾರವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್‌ ಸರ್ಕಾರದಿಂದ ಎಷ್ಟು ಪರಿಹಾರ ನೀಡಲಾಗಿದೆ ಎಂದು ತಿಳಿಸಲಿ. ಬಜೆಟ್‌ಗೆ ಹೋಲಿಸುವುದಾದರೆ ಈಗಿನ ಸರ್ಕಾರ ಅತಿ ಹೆಚ್ಚು ಪರಿಹಾರ ನೀಡಬೇಕಾಗುತ್ತದೆ ಎಂದರು.

ಸಿಎಂ ಬದಲಾವಣೆ ಆಗುವುದು ಖಚಿತ. ಅದನ್ನು ಕಾಂಗ್ರೆಸ್‌ನ ಶಾಸಕರೇ ಹೇಳುತ್ತಿದ್ದಾರೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಕೂಡ ಆ ಬಗ್ಗೆ ಮಾತಾಡಿದ್ದಾರೆ. ನವೆಂಬರ್‌ ಕ್ರಾಂತಿಯ ಕಾರಣಕ್ಕಾಗಿಯೇ ಸಿಎಂ ಸಿದ್ದರಾಮಯ್ಯ ತರಾತುರಿಯಲ್ಲಿ ಜಾತಿ ಸಮೀಕ್ಷೆ ಮಾಡಿಸುತ್ತಿದ್ದಾರೆ ಎಂದರು.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಯನ್ನು ನಾನು ಬಹಿಷ್ಕರಿಸುತ್ತೇನೆ. ಆದರೆ ವೋಟ್‌ ಚೋರಿ ಎಂಬ ಕಾಂಗ್ರೆಸ್‌ ಕೂಡ ಬಿಹಾರ ಚುನಾವಣೆಯನ್ನು ಬಹಿಷ್ಕಾರ ಮಾಡಲಿ. ಜಿಬಿಎದಲ್ಲಿ ಮೇಯರ್‌ಗೆ ಅಧಿಕಾರ ನೀಡದೆ, ಸಿಎಂಗೆ ಎಲ್ಲವನ್ನೂ ನೀಡಲಾಗಿದೆ.

ಪಾಲಿಕೆಗಳ ಅಧಿಕಾರವನ್ನು ಕಿತ್ತುಕೊಳ್ಳಲಾಗಿದೆ. ಇದು ಅಧಿಕಾರ ವಿಕೇಂದ್ರೀಕರಣ ಅಲ್ಲ, ಅಧಿಕಾರವನ್ನು ಕಿತ್ತುಕೊಳ್ಳಲಾಗಿದೆ. ಅಭಿವೃದ್ಧಿ ಬಗ್ಗೆ ಮಾತಾಡುವುದಾದರೆ, ರಸ್ತೆ ಗುಂಡಿಗಳನ್ನು ಮುಚ್ಚಿಸಲಿ.

ಮಳೆ ಬಂದು ರಸ್ತೆಯಲ್ಲಿ ನೀರು ತುಂಬಿದ್ದರೆ ಅದರ ಮೇಲೆ ಡಾಂಬರು ಹಾಕುತ್ತಾರೆ. ಇಂತಹ ತಂತ್ರಜ್ಞಾನ ಕಾಂಗ್ರೆಸ್‌ ಸರ್ಕಾರದಿಂದ ಮಾತ್ರ ತರಲು ಸಾಧ್ಯ. ಡಾಂಬರು ಬಿಸಿಯಾಗಿಯೇ ಇರಬೇಕು. ಕೋಲ್ಡ್‌ ಟಾರ್‌ ಬಗ್ಗ ನನಗೂ ತಿಳಿದಿದೆ. ಆದರೆ ನೀರು ನಿಂತಲ್ಲಿ ಇದನ್ನು ಹಾಕಲು ಸಾಧ್ಯವಿಲ್ಲ. ಆದರೂ ಅದು ತಾತ್ಕಾಲಿಕ ಎಂದರು.

ರಾಜಕೀಯ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಜಿ.ಪಂ ಸೇರಿ 8 ಕ್ಷೇತ್ರಗಳ ಪುನರ್ ವಿಂಗಡಣೆ

ಬೆಂಗಳೂರು ಗ್ರಾಮಾಂತರ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾ ಪಂಚಾಯಿತಿ (Z.P) ಕ್ಷೇತ್ರಗಳ (Constituencies) ಗಡಿ ಗುರುತಿಸಿ ಮತ್ತು ಚುನಾಯಿತ ಸದಸ್ಯರ ಸಂಖ್ಯೆ ನಿಗದಿಪಡಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

[ccc_my_favorite_select_button post_id="121409"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ವೇಶ್ಯಾವಾಟಿಕೆ ದಂಧೆ; ಇಬ್ಬರ ಬಂಧನ

ಗ್ರಾಮದ ಲಾಡ್ಜ್ ಒಂದರ ಮೇಲೆ ಪೊಲೀಸರು ದಾಳಿ (Police Raid) ನಡೆಸಿದ್ದು, ವೇಶ್ಯಾವಾಟಿಕೆ (Prostitution) ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿದ್ದಾರೆ. ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.

[ccc_my_favorite_select_button post_id="121407"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]