ಬೆಂಗಳೂರು: ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್‌ಎಸ್‌ಎಸ್‌ನ (RSS) ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಪತ್ರ ಬರೆದಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು, ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ.
ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ.
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 12, 2025
ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್… pic.twitter.com/b1Gn63uoEq
ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ.
ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್ಎಸ್ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ ಎಂದಿದ್ದಾರೆ.
ಪತ್ರದಲ್ಲಿ ಪೊಲೀಸ್ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ ಎಂದು ದೂರಿದ್ದಾರೆ.
ಮುನಿರತ್ನ ವಿರುದ್ಧ ಆಕ್ರೋಶ
ಮತ್ತೊಂದೆಡೆ ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಜೆಪಿ ಪಾರ್ಕ್ ನಲ್ಲಿ ನಡೆಸಿದ ಕುಂದುಕೊರತೆ ಸಭೆಯ ವೇಳೆ RSS ಗಣ ವೇಷಧಾರಿಯಾಗಿ ಬಂದು ಅವಾಂತರ ಸೃಷ್ಟಿಸಿರುವ ಶಾಸಕ ಮುನಿರತ್ನ ವರ್ತನೆ ಹಿಂದೂಪರ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
RSS ಸಮವಸ್ತ್ರ ಧರಿಸಿ ಅಗೌರವ ತೋರಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿದ್ದಾರೆ.