ದೊಡ್ಡಬಳ್ಳಾಪುರ: ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ನಗರಸಭೆ ಅನುದಾನದಿಂದ ನವೀಕರಿಸಿದ ವರನಟ ಡಾ.ರಾಜ್‌ಕುಮಾರ್ (Dr. Rajkumar) ಅವರ ಕಂಚಿನ ಪ್ರತಿಮೆಯ ಪೀಠದ ಜೀರ್ಣೋದ್ಧಾರದೊಂದಿಗೆ ಪುನರ್ ಪ್ರತಿಷ್ಟಾಪನಾ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿಸಲಾಯಿತು.
ದೊಡ್ಡಬಳ್ಳಾಪುರ ತಾಲ್ಲೂಕು ಶಿವರಾಜ್ ಕುಮಾರ್ ಕನ್ನಡ ಸೇನಾ ಸಮಿತಿ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿವನಟ ಡಾ.ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಪ್ರತಿಮೆ ಅನಾವರಣಗೊಳಿಸಿದರು.
ಬಳಿಕ ಮಾತನಾಡಿದ ನಟ ಡಾ.ಶಿವರಾಜ್ ಕುಮಾರ್ ಅವರು, ದೊಡ್ಡಬಳ್ಳಾಪುರ ನನಗೆ ಹೊಸದೇನಲ್ಲ. ಅನೇಕ ಸಿನಿಮಾಗಳನ್ನು ಇಲ್ಲಿ ಮಾಡಿದ್ದೇನೆ. ಕೆ.ಸಿ.ಎನ್ ಗೌಡರು ಅನ್ನದಾತರು ಅಪ್ಪಾಜಿ ಹೇಳುತ್ತಿದ್ದರು ಎಂದು ಹೇಳಿದ ಸ್ಮರಿಸಿದರು.
ಶಾಸಕ ಧೀರಜ್ ಮುನಿರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಸುಮಿತ್ರಆನಂದ್, ಜೆಡಿಎಸ್ ಮುಖಂಡ ಹರೀಶ್ ಗೌಡ, ಪೌರಾಯುಕ್ತ ಆರ್.ಕಾರ್ತಿಕೇಶ್ವರ, ತಾಲ್ಲೂಕು ಶಿವರಾಜ್‌ಕುಮಾರ್ ಕನ್ನಡ ಸೇನಾ ಸಮಿತಿಯ ಗೌರವ ಅಧ್ಯಕ್ಷ ಕೆ.ಆನಂದ್ ಕುಮಾರ್, ಅಧ್ಯಕ್ಷ ಜೆ.ಆರ್. ರಮೇಶ್, ಪ್ರಧಾನ ಕಾರ್ಯದರ್ಶಿ ಎನ್.ಎಸ್.ಗುರುರಾಜ್ ಸೇರಿದಂತೆ ಪದಾಧಿಕಾರಿಗಳು ಭಾಗವಹಿಸಿದ್ದರು.
ಕಿಕ್ಕಿರಿದು ಸೇರಿದ ಅಭಿಮಾನಿಗಳು

ಡಾ.ರಾಜ್‌ಕುಮಾರ್ ಕಂಚಿನ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರಕ್ಕೆ ಶಿವಣ್ಣ ಆಗಮನದ ಹಿನ್ನೆಲೆಯಲ್ಲಿ ಅಪಾರ ಅಭಿಮಾನಿಗಳು ಬಂದಿದ್ದರು.
ಶಿವರಾಜ್ ಕುಮಾರ್ ಅವರನ್ನು ವೇದಿಕೆ ಕರೆತರುವ ವೇಳೆ ಹಾಗೂ ಮತ್ತೆ ಕಾರಿನ ಬಳಿ ಕರೆದೊಯ್ಯುವ ವೇಳೆ ಸೆಲ್ಪಿಗಾಗಿ ಮುಗಿಬಿದ್ದರು, ಈ ವೇಳೆ ಡಿವೈಎಸ್ಪಿ ರವಿ ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಅಭಿಮಾನಿಗಳನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.