RSS ban is a pipe dream; Yatnal

RSS: ಸಂಘದ ನಿಷೇಧ ಕನಸಿನ ಮಾತು; ಯತ್ನಾಳ್

ಬೆಂಗಳೂರು: ಸರ್ಕಾರಿ ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಶಾಖೆಗಳನ್ನು ಪಥಸಂಚಲನ, ಬೈಠಕ್ ಗಳನ್ನು ನಿಷೇಧಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಪತ್ರ ಬರೆದಿರುವುದು ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

ಈ ಕುರಿತಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನಸಿನ ಮಾತು

ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಅವರು ಸಂಘದ ನಿಷೇಧ ಕನಸಿನ ಮಾತು ಎಂದಿದ್ದಾರೆ.

ಸರ್ಕಾರಿ ಸ್ಥಳಗಳಲ್ಲಿ ನಡೆಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗಳನ್ನು, ಪಥಸಂಚಲನ, ಬೈಠಕ್ ಗಳನ್ನು ನಿಷೇಧಿಸಬೇಕೆಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗಳಿಗೆ ಬರೆದಿದ್ದಾರೆ. ಜಗತ್ತಿನ ಅತ್ಯಂತ ದೊಡ್ಡ ಸ್ವಯಂಸೇವಕರ ಪಡೆ ಹೊಂದಿರುವ ಆರ್.ಎಸ್.ಎಸ್. (RSS) ನ ನಿಷೇಧಕ್ಕೆ ಕರೆ ಕೊಟ್ಟಿರುವುದು ಇವರ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ.

ಪ್ರಕೃತಿ ವಿಕೋಪ, ರೈಲು ದುರಂತ, ಕೋವಿಡ್, ಅಪಘಾತಗಳು, ಭೂಕಂಪ, ನೆರೆಯಾದಾಗ ನೊಂದವರಿಗೆ ಮೊದಲು ಆಸರೆಯಾಗುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ವಯಂ ಸೇವಕರು.

ಸೇವಾತತ್ಪರತೆ, ಸಮಾಜ ಸೇವೆ, ರಾಷ್ಟ್ರ ಪ್ರೇಮದ ಬಗ್ಗೆ ಜಾಗೃತಿ, ಶಿಸ್ತಿಗೆ ಮತ್ತೊಂದು ಹೆಸರೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ. ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಹಗಲು ರಾತ್ರಿ ಎನ್ನದೇ ನಿಸ್ವಾರ್ಥ ಸೇವೆ ನೀಡುವ ಪ್ರಪಂಚದ ಏಕೈಕ ಸಂಘಟನೆಯಾಗಿದೆ.

ಮನ ಮನೆಗಳನ್ನು ಬೆಸೆದುಕೊಳ್ಳುತ್ತಿರುವ ಸಂಘ ಚಿಂತನೆ ವ್ಯಾಪಿಸಿದ ಮತ್ತು ವ್ಯಾಪಿಸುತ್ತಿರುವ ರೀತಿ ಅನನ್ಯ.

ಸಂಘವನ್ನು ನಿಷೇದ ಮಾಡಲು ಯಾರಿಂದಲೂ ಸಾಧ್ಯವಾಗಿಲ್ಲ. ವಿರೋಧಿಗಳು ಪ್ರೀತಿಸುವ, ಗೌರವಿಸುವ ಜಗತ್ತಿನ ಏಕೈಕ ಸಂಘಟನೆಯೇ ಆರ್.ಎಸ್.ಎಸ್. (RSS) ರಾಜಕೀಯ ಪ್ರೇರಿತ ಹೇಳಿಕೆಗಳನ್ನು ಕೊಡುವುದನ್ನು ಬಿಟ್ಟು ಸ್ವಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಶ್ರೀ ಪ್ರಿಯಾಂಕ್ ಖರ್ಗೆ ಅವರು ಶ್ರಮಿಸಲಿ.

ಅಷ್ಟಕ್ಕೂ, ನಿಷೇಧಗೊಳಿಸಬೇಕಾಗಿದ್ದರೆ ಕೂಡಲೇ ಎಸ್.ಡಿ.ಪಿ.ಐ ನಂತ ದೇಶ ವಿರೋಧಿ ಸಂಘಟನೆಗಳನ್ನು ನಿಷೇದ ಮಾಡಲಿ. ಅನ್ಯ ಕೋಮಿನ ಹಬ್ಬಗಳಂದು ತಲ್ವಾರ್ ತೋರಿಸಿ ಬೀದಿಗಳಲ್ಲಿ ಹೆಲ್ಮೆಟ್ ಧರಿಸದೇ ಓಡಾಡುವ ಪುಂಡರ ಹೆಡೆಮುರಿಕಟ್ಟಲಿ .

ಬಕ್ರೀದ್ ಸೇರಿದಂತೆ ಇತರ ಹಬ್ಬಗಳಲ್ಲಿ ಆಗುವ ಪ್ರಾಣಿಬಲಿಯನ್ನು ನಿಷೇಧಿಸಲಿ. ಆಂಗ್ಲ, ವಿಜ್ಞಾನ, ಗಣಿತ, ಸಮಾಜ ಹೇಳಿಕೊಡದೆ ದ್ವೇಷ, ಬೇರೆ ಧರ್ಮಗಳ ಬಗ್ಗೆ ತಪ್ಪು ವಿಚಾರಗಳನ್ನು ಕಲಿಸುವ ಮದರಸಗಳನ್ನು ನಿಷೇದ ಮಾಡಲಿ.

ಸ್ವಾತಂತ್ರ್ಯ ಬಂದು ಏಳು ದಶಕಗಳಾದರೂ ಅತ್ಯಂತ ಹಿಂದುಳಿದ ಜಿಲ್ಲೆ ಎಂದು ಕರೆಸಿಕೊಳ್ಳುವ ಹಾಗೂ ಅವರೇ ಪ್ರತಿನಿಧಿಸುವ ಕಲ್ಬುರ್ಗಿಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡಲಿ.

ಸಂಘದ ನಿಷೇದ ಕನಸಿನ ಮಾತು ಎಂದು ಯತ್ನಾಳ್ ಮತ್ತೊಮ್ಮೆ ಹೇಳಿದ್ದಾರೆ.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!