Bihar election: Jai Kumar Singh shocked Nitish Kumar

Bihar election: ನಿತೀಶ್ ಕುಮಾರ್‌ಗೆ ಶಾಕ್ ಕೊಟ್ಟ ಪರಮಾಪ್ತ ಜೈ ಕುಮಾರ್ ಸಿಂಗ್..!

ಪಾಟ್ನಾ; ಬಿಹಾರ ಚುನಾವಣೆ (Bihar election) ದಿನಾಂಕ ಘೋಷಣೆ ಬೆನ್ನಲ್ಲೇ ಸಿಎಂ ನಿತೀಶ್ ಕುಮಾರ್ (Nitish Kumar) ಅವರಿಗೆ ಶಾಕ್ ಎದುರಾಗಿದ್ದು, ಜೆಡಿಯುನ ಹಿರಿಯ ನಾಯಕ ಮತ್ತು ನಿತೀಶ್ ಕುಮಾರ್ ಅವರಿಗೆ ಪರಮಾಪ್ತರಾಗಿದ್ದ ಜೈ ಕುಮಾರ್ ಸಿಂಗ್ (Jai Kumar Singh) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಈಗಾಗಲೇ ಬಿಹಾರ ಚುನಾವಣೆಗೂ ಮುನ್ನವೇ ವಿರೋಧ ಪಕ್ಷಗಳಾದ ಆರ್‌ಜೆಡಿ ಮತ್ತು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವೋಟ್ ಚೋರಿ (Vote Chori ಆರೋಪಿಸಿ ಇಡೀ ಬಿಹಾರ ರಾಜ್ಯದಲ್ಲಿ ಯಾತ್ರೆ ನಡೆಸುವ ಮೂಲಕ ಆಕ್ರಮಣಾಕಾರಿಯಾಗಿ ಮುಗಿಬಿದ್ದಿವೆ.

ಮತ್ತೊಂದೆಡೆ ಬಿಹಾರದ ರೋಡ್ತಾಸ್‌ನ ದಿನಾರಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದ, ನಿತೀಶ್ ಕುಮಾರ್ ಅವರಿಗೆ ಬಹಳಷ್ಟು ಜನ ಆತ್ಮೀಯರು ಕೈ ಕೊಟ್ಟು ಪಕ್ಷ ಬಿಟ್ಟು ಹೋದರು, ಜೀವನ ಪೂರ್ತಿ ಅವರ ಹಿಂದೆ ನಿಲ್ಲುವೆ, ನಿತೀಶ್ ಕುಮಾರ್ ನನ್ನ ಹೃದಯದಲ್ಲಿದ್ದಾರೆ, ಅವರೇ ನನ್ನ ಆದರ್ಶ ಎನ್ನುತ್ತಿದ್ದ ಜೈ ಕುಮಾರ್ ಸಿಂಗ್ ಪಕ್ಷವನ್ನು ತ್ಯಜಿಸಿರುವುದು, ಪಕ್ಷದ ಟಿಕೇಟ್ ಹಣವಂತರಿಗೆ ಮಾರಾಟವಾಗುತ್ತಿದೆ ಎಂದು ಆರೋಪಿಸಿರುವುದು ಜೆಡಿಯು ಪಕ್ಷಕ್ಕೆ ದೊಡ್ಡಮಟ್ಟದ ಹೊಡೆತವನ್ನು ನೀಡಿದೆ.

ಜೆಡಿಯು ಪಕ್ಷದಲ್ಲಿ ಆಂತರಿಕ ವಿಪ್ಲವ

ಪಕ್ಷಕ್ಕೆ ಸಲ್ಲಿಸಿದ ರಾಜೀನಾಮೆ ಬಳಿಕ ಸುದ್ದಿಗಾರರೊಂದಿಗೆ ಮಾತಾನಾಡಿರುವ ಜೈ ಕುಮಾರ್ ಸಿಂಗ್, ಜೆಡಿಯು ಪಕ್ಷದಲ್ಲಿ ಆಂತರಿಕ ವಿಪ್ಲವ ಸೃಷ್ಟಿಯಾಗಿದೆ. ಪ್ರಮುಖ ರಾಜಕೀಯ ನಿರ್ಧಾರ ಕೈಗೊಳ್ಳುವ ನಾಯಕತ್ವ ಕಣ್ಮರೆಯಾಗಿದೆ. ಪಕ್ಷದ ಸಾಕಷ್ಟು ವಿಚಾರಗಳನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಗಮನಕ್ಕೆ ತರುತ್ತಿಲ್ಲ. ಹೀಗಾಗಿ ಜೆಡಿಯು ಗಂಭೀರ ಪರಿಣಾಮಗಳನ್ನು ಎದುರಿಸಲಿದೆ.

ನಿತೀಶ್ ಕುಮಾರ್ ಅವರು ಸರಿ ಇದ್ದಿದ್ದರೆ ಇಂದು ನಾ ಪಕ್ಷ ಬಿಡುವ ಸಂದರ್ಭ ಬರುತ್ತಿರಲಿಲ್ಲ. ನಿತೀಶ್ ಕುಮಾರ್ ಅವರು, ಜೈ ಕುಮಾರ್ ಸಂಕಷ್ಟ ಸಂದರ್ಭದಲ್ಲಿ ಇದ್ದೇನೆ ನಿನಗೆ ಟಿಕೆಟ್ ಕೊಡಲು ಸಾಧ್ಯವಾಗುತ್ತಿಲ್ಲ ಎಂದಿದ್ದರೆ ನನ್ನ ಸಮುದಾಯಕ್ಕೆ ನಾ ಹೇಳುತ್ತಿದ್ದೆ ಅನೇಕ ಬಾರಿ ಶಾಸಕನಾಗಿ, ಸಚಿವನಾಗಿ ಸೇವೆ ಸಲ್ಲಿಸಿದ್ದೇನೆ ನನಗೆ ಟಿಕೇಟ್ ಬೇಡ ಎಂದು.

ಒಂದು ವೇಳೆ ನನ್ನ ಕ್ಷೇತ್ರದ ಟಿಕೆಟ್ ಬಿಜೆಪಿಗೆ ನೀಡಿದ್ದರು ನಾ ಈ ಮುಂಚಿನ ಚುನಾವಣೆಯಲ್ಲಿ ಅವರಿಂದ ನೆರವಾಗಿದೆ. ಈ ಚುನಾವಣೆಯಲ್ಲಿ ಅವರಿಗೆ ಬಿಟ್ಟುಕೊಡುವೆ ಎಂದು ಹೆಮ್ಮೆಯಿಂದ ಕೇಳುತ್ತಿದ್ದೆ. ಆದರೆ ನನ್ನ ಕ್ಷೇತ್ರದ ಟಿಕೆಟ್ ರಾಷ್ಟ್ರೀಯ ಲೋಕ ಮೋರ್ಚಾಗೆ (RLM) ಬಿಟ್ಟುಕೊಡಲಾಗಿದೆ. ಆದರೆ ರಾಷ್ಟ್ರೀಯ ಲೋಕ ಮೋರ್ಚಾ ಅಭ್ಯರ್ಥಿಗೆ ಒಂದು ಪೈಸೆ ರಾಜಕೀಯ ತಿಳಿದಿಲ್ಲ. ಅವರತ್ರ ಹಣ ಇದೆ ಅಷ್ಟೇ.

ನಾ ಅಧಿಕಾರಕ್ಕಾಗಿ ಎಂದು ರಾಜಕೀಯ ಮಾಡಿಲ್ಲ, ಮೂರು ಬಾರಿ ಗೆದ್ದು, ನಾಲ್ಕು ಸಚಿವ ಸ್ಥಾನ ನಿಭಾಯಿಸಿದ್ದೇನೆ, ಆದರೆ ಆತ್ಮಾಭಿಮಾನವನ್ನು ಬಲಿಕೊಡಲು ಸಾಧ್ಯವಿಲ್ಲ.. ಹೀಗಾಗಿ ನಾನು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆಯ ಸನಿಹದಲ್ಲಿ ರಾಜಪೂತ ಸಮುದಾಯದ ಜೈ ಕುಮಾರ್ ಸಿಂಗ್ ಅವರ ಈ ನಡೆ ಎನ್‌ಡಿಎ ಮೈತ್ರಿಕೂಟಕ್ಕೆ ಡ್ಯಾಮೇಜ್ ಮಾಡುವ ಆತಂಕ ಎದುರಾಗಿದೆ.

ಆದರೆ ಈ ವಿಷಯದ ಬಗ್ಗೆ ಜೆಡಿಯುನ ಯಾವುದೇ ಹಿರಿಯ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!