ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಐದು ವರ್ಷಗಳ ಆಡಳಿತ ಮಂಡಳಿಗೆ ನವೆಂಬರ್ 2 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ನಗರದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣ ಅಧಿಕಾರಿ ಆರ್.ರಾಮಾಂಜಿನಪ್ಪ ವೇಳಪಟ್ಟಿ ಪ್ರಕಟಿಸಿದ್ದಾರೆ.
ಅಕ್ಟೋಬರ್ 23 ರಿಂದ 25 ರವರೆಗೆ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಟಿಎಪಿಎಂಸಿಎಸ್ ಕಚೇರಿಯಲ್ಲಿ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.
ನಾಮಪತ್ರಗಳ ಪರಿಶೀಲನೆ ಅಕ್ಟೋಬರ್ 26. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ಅಕ್ಟೋಬರ್ 27 ರಂದು ಮಧ್ಯಾಹ್ನ 3 ಗಂಟೆವರೆಗೆ. ನವೆಂಬರ್ 2 ರಂದು ಸಂಜೆ 4 ಗಂಟೆಗೆ ಮತದಾನ ಮುಕ್ತಾಯವಾದ ನಂತರ ಮತಗಳ ಎಣಿಕೆ ನಡೆಯಲಿದೆ.
ಟಿಎಪಿಎಂಸಿಎಸ್ ನಲ್ಲಿ (TAPMCS) ಒಟ್ಟು 13 ಸ್ಥಾನಗಳಿದ್ದು ‘ಎ’ ತರಗತಿಗೆ 5 ಸ್ಥಾನ, ‘ಬಿ’ ತರಗತಿಗೆ 8 ಸ್ಥಾನಗಳಿವೆ. 8 ಜನ ನಿರ್ದೇಶಕ ಸ್ಥಾನಗಳ ಪೈಕಿ 2 ಸಾಮಾನ್ಯ ಅಭ್ಯರ್ಥಿಗಳಿಗೆ, 1 ಬಿಸಿಎಂ ‘ಬಿ’, 1 ಬಿಸಿಎಂ ‘ಎ’, 2 ಮಹಿಳಾ ಅಭ್ಯರ್ಥಿಗಳಿಗೆ, 1 ಪರಿಶಿಷ್ಟ ಜಾತಿ, 1 ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿದೆ.
ಉಳಿದಂತೆ ಬಿಡಿಸಿಸಿ ಬ್ಯಾಂಕ್ ಪ್ರತಿನಿಧಿಯಾಗಿ 1 ಹಾಗೂ ಸರ್ಕಾರದ ನಾಮನಿರ್ದೇಶನದ ಮೂಲಕ ಒಬ್ಬರು ನೇಮಕವಾಗಲಿದ್ದಾರೆ.