RSS activity banned; This is what CM Siddaramaiah said

RSS ಚಟುವಟಿಕೆ ನಿರ್ಬಂಧ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಇಷ್ಟು

ಬಾಗಲಕೋಟೆ: ಸರ್ಕಾರಿ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಅವರು ಇಂದು ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಿಸಿದೆ

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುತ್ತಾ, ಅವರ ಆರೋಗ್ಯ ಸುಧಾರಣೆಯಾಗುತ್ತಿದ್ದು, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು.

ಸಚಿವ ಪ್ರಿಯಾಂಕ ಖರ್ಗೆಯವರು ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳನ್ನು ನಿರ್ಬಂಧಿಸಲು ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆರ್ ಎಸ್ ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ ಎಂದರು.

ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಸಂಬಂಧವಿಲ್ಲ

ರಾಜ್ಯದಲ್ಲಿ ಬದಲಾವಣೆಯಲ್ಲಿ ಹೈಕಮಾಂಡ್ ನವರ ನಿರ್ಧಾರವೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ ಕೆ.ಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಕ್ಷದ ವರಿಷ್ಠರ ಮತ್ತು ಶಾಸಕರ ಅಭಿಪ್ರಾಯ ಬಹಳ ಮುಖ್ಯ. ಶಾಸಕರ ಒಮ್ಮತ ಹಾಗೂ ಹೈಕಮಾಂಡ್ ನ ಆರ್ಶೀವಾದವಿರಬೇಕು. ಇಂದಿನ ಭೋಜನಕೂಟ ಕಾರ್ಯಕ್ರಮದಲ್ಲಿ ಯಾವುದೇ ವಿಶೇಷತೆ ಇಲ್ಲ. ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಯಾವುದೇ ಸಂಬಂಧವಿಲ್ಲ. ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿಯೂ ಇಲ್ಲ ಎಂದರು.

ನನಗೆ ಮಾಟಮಂತ್ರಗಳಲ್ಲಿ ನಂಬಿಕೆಯಿಲ್ಲ

ಶಾಸಕ ಮುನಿರತ್ನ ಮತ್ತು ಡಿಕೆ ಶಿವಕುಮಾರ್ ಅವರ ನಡೆದ ಮಾತುಕತೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಸಿಎಂ ಡಿ ಕೆ ಶಿವಕುಮಾರ್ ರವರು ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್ಬಾಗ್ ನಂತೆ ಮತ್ತಿಕರೆಯ ಜೆಪಿಪಾರ್ಕ್ ದಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ . ನಾನು ಯಾವುದೇ ಮಾಟಮಂತ್ರಗಳಲ್ಲಿ ನಂಬಿಕೆಯಿರಿಸಿಲ್ಲ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಸೂಕ್ತ ಅನುದಾನ ನೀಡಿ, ಮುಂದಿನ ನಾಲ್ಕು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು.

ಸಂಪುಟ ಪುನರ್ರಚನೆ

ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ನೀಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರು ರಾಜಿನಾಮೆ ನೀಡಿದ್ದು, ಸರ್ಕಾರ ಅವರನ್ನು ತೆಗೆದುಹಾಕಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಸಂಪುಟ ಪುನರ್ರಚನೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ರಾಜಕೀಯ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ ಸಂಗ್ರಹ: ಸಚಿವರ ಭರವಸೆ

ದೊಡ್ಡಬಳ್ಳಾಪುರ ಸೀರೆಗೆ ಜಿಐ ಟ್ಯಾಗ್‌ಗೆ ಯತ್ನ: ಸೂರತ್‌ ಸೀರೆ ನಿಷೇಧಕ್ಕೆ ತಜ್ಞರ ಅಭಿಪ್ರಾಯ

ದೊಡ್ಡಬಳ್ಳಾಪುರ (Doddaballapura) ಸೀರೆಗೆ ಜಿಐ ಟ್ಯಾಗ್‌ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಿದ್ದು, ಸೂರತ್‌ ಸೀರೆಗಳ ನಿಷೇದಕ್ಕೆ ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುವುದು ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ

[ccc_my_favorite_select_button post_id="117062"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ದೊಡ್ಡಬಳ್ಳಾಪುರ: ನಡು ರಸ್ತೆಯಲ್ಲಿ ಯುವಕನ ಬರ್ಬರ ಹತ್ಯೆ..!

ಜಾಲಪ್ಪ ಕಾಲೇಜು ವಸತಿ ಗೃಹದಲ್ಲಿ ವಾಸವಿದ್ದ ವ್ಯಕ್ತಿಯೋರ್ವನ ನಡು ರಸ್ತೆಯಲ್ಲಿ ಕೊಚ್ಚಿಕೊಂದಿರುವ (Brutally Murdered) ಘಟನೆ ಡಿಕ್ರಾಸ್-ಟಿಬಿ ವೃತ್ತದ ನಡುವಿನ ಚರ್ಚ್‌ ಗೇಟ್ ಬಳಿ ಸೋಮವಾರ ರಾತ್ರಿ 11.30ಕ್ಕೆ ನಡೆದಿದೆ

[ccc_my_favorite_select_button post_id="117043"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!