ಬೆಂ.ಗ್ರಾ.ಜಿಲ್ಲೆ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಅಕ್ಟೋಬರ್ 15 ರಂದು ದೊಡ್ಡಬಳ್ಳಾಪುರದ ಕೈಗಾರಿಕಾ ಅಸೋಸಿಯೇಷನ್ ಸಭಾಂಗಣದಲ್ಲಿ ವ್ಯಾಪಾರ ಸ್ವೀಕೃತಿ ರಿಯಾಯಿತಿ ವ್ಯವಸ್ಥೆ (Trade Receivables Discounting System) ಕುರಿತು ಕಾರ್ಯಗಾರವನ್ನು (Training workshop) ಆಯೋಜಿಸಲಾಗಿದೆ.
ಕಾರ್ಯಗಾರದಲ್ಲಿ ಎಂ.ಎಸ್.ಎಂ.ಇ ಕೈಗಾರಿಕೆಗಳಿಗೆ ಮುಂಗಡ ಪಾವತಿಸುವ ಕುರಿತು ತಿಳುವಳಿಕೆ ನೀಡುವ ಜೊತೆಗೆ ವಹಿವಾಟುಗಳಿಗೆ ಸಂಬಂಧಿಸಿದಂತೆ ಆರ್ಥಿಕ ಸವಾಲುಗಳಿಗೆ ಪರಿಹಾರ ಸೂಚಿಸುವ ವೇದಿಕೆಯಾಗಲಿದೆ. ಕೈಗಾರಿಕೆಗಳು, ತಜ್ಞರು ಮತ್ತು ಸರ್ಕಾರಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉಪನ್ಯಾಸಗಳು, ಮತ್ತು ಪರಾಮರ್ಶಿಸುವ ಅಧಿವೇಶನಗಳು ನಡೆಯಲಿವೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಠಡಿ ಸಂಖ್ಯೆ 203, 2ನೇ ಮಹಡಿ ಜಿಲ್ಲಾಡಳಿತ ಭವನ ಬೀರಸಂದ್ರ ಗ್ರಾಮ ಕುಂದಾಣ ಹೋಬಳಿ ದೇವನಹಳ್ಳಿ ದೂರವಾಣಿ ಸಂಖ್ಯೆ 080-29787458 ಗೆ ಸಂಪರ್ಕಿಸಬಹುದು ಎಂದು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)