ಚಿಕ್ಕಬಳ್ಳಾಪುರ: ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಗೆ ಡ್ರಾಪ್ ಕೊಡುವ ನೆಪದಲ್ಲಿ ಸ್ಕೂಟರ್ ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿ (Rape) ಪರಾರಿಯಾಗಿದ್ದ ಇಬ್ಬರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ (arrested).
ಚಿಕ್ಕಬಳ್ಳಾಪುರದ ಮೆಕ್ಯಾನಿಕ್ ಸಿಕಂದರ್‌ಬಾಬಾ (30 ವರ್ಷ) ಮತ್ತು ಗುಜರಿ ವ್ಯಾಪಾರಿ ಜನಾರ್ದನಾಚಾರಿ (31 ವರ್ಷ) ಬಂಧಿತರು.
ಸಂತ್ರಸ್ತ ಯುವತಿ ಕೆಲಸ ಹುಡುಕಿಕೊಂಡು ಮಂಚೇನಹಳ್ಳಿಯಿಂದ ಚಿಕ್ಕಬಳ್ಳಾಪುರ ನಗರಕ್ಕೆ ಬಂದಿದ್ದಳು. ಬಳಿಕ ವಾಪಸ್ ಹೋಗುತ್ತಿದ್ದಾಗ ಡ್ರಾಪ್ ಕೊಡುವ ನೆಪದಲ್ಲಿ ಹೇಯ ಕೃತ್ಯ ಎಸಗಲಾಗಿದೆ ಎಂದು ವರದಿಯಾಗಿದೆ.