I cannot be silenced by threats, personal insults: Priyank Kharge

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಸರ್ಕಾರಿ ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಚಟುವಟಿಕೆಗಳನ್ನು ನಿಷೇಧಿಸಬೇಕೆಂದು ಸಿಎಂ ಸಿದ್ದರಾಮಯ್ಯ (Cmsiddaramaiah) ಅವರಿಗೆ ಪತ್ರ ಬರೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ (Priyank Kharge) ಅನೇಕ ಬೆದರಿಕೆ ಕರೆ ಬರುತ್ತಿದೆ ಎಂದು ಸ್ವತಃ ಅವರೇ ಹೇಳಿಕೊಂಡಿದ್ದರು‌.

ಇದೀಗ ಆರ್‌ಎಸ್ಎಸ್ ಕಾರ್ಯಕರ್ತ ಎಂದು ಹೇಳಲಾಗುವ ವ್ಯಕ್ತಿಯೊಬ್ಬರ ಸಂಭಾಷಣೆಯನ್ನು ಪ್ರಿಯಾಂಕ್ ಖರ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, RSS ಯುವಕರ, ಮಕ್ಕಳ ಮನಸುಗಳಲ್ಲಿ ಕಲ್ಮಶ ತುಂಬುವ ಕೆಲಸ ಮಾಡುತ್ತಿದೆ ಎಂದಿದ್ದೆ ಅವರು ತುಂಬಿದ ಕಲ್ಮಶವು ಹೇಗಿರುತ್ತದೆ ಎಂಬುದಕ್ಕೆ ಸಣ್ಣ ಉದಾಹರಣೆ ಇಲ್ಲಿದೆ.

ಇದು ಸ್ಯಾಂಪಲ್ ಅಷ್ಟೇ

ಕೆಲವು ದಿನಗಳಿಂದ ನನಗೆ ನಿರಂತರವಾಗಿ ಬರುತ್ತಿದ್ದ ಬೆದರಿಕೆ ಮತ್ತು ನಿಂದನೆಯ ಕರೆಗಳಲ್ಲಿ ಇದೊಂದು ಸ್ಯಾಂಪಲ್ ಅಷ್ಟೇ.

ತಾಯಿ, ಸಹೋದರಿಯರ ಹೆಸರು ಹಿಡಿದು ಅತ್ಯಂತ ತುಚ್ಚವಾಗಿ ನಿಂದಿಸುವುದೇ ಶಾಖೆಗಳಲ್ಲಿ ನೀಡುವ ಸಂಸ್ಕಾರವೇ.. ಈ ಹಿಂದೆ ಮೋದಿ ಹಾಗೂ ಮೋಹನ್ ಭಾಗವತ್ ಅವರ ತಾಯಿಯಂದಿರಿಗೆ ಇದೇ ಬಗೆಯಲ್ಲಿ ನಿಂದಿಸುವುದನ್ನು ಬಿಜೆಪಿಯ ನಾಯಕರು ವಿರೋಧಿಸಿದ್ದರು. ಆದರೆ ಇದೀಗ ಇದನ್ನು ಬಿಜೆಪಿ ನಾಯಕರು ಒಪ್ಪುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ನಾಯಕರ ಮಕ್ಕಳು ತಮ್ಮ ಭವ್ಯ ಭವಿಷ್ಯ ರೂಪಿಸಿಕೊಳ್ಳುತ್ತಿದ್ದಾರೆ, ಬಡವರ ಮಕ್ಕಳನ್ನು ಹೀಗೆ ನಿಂದಿಸುವುದಕ್ಕೆ ಬೆದರಿಸುವುದಕ್ಕೆ ಮತ್ತು ಬಲಿಯಾಗುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ನಾನು ದೂರು ನೀಡಿದರೆ ಆ ವ್ಯಕ್ತಿಯ ಬದುಕಿನಲ್ಲಿ ಹಾನಿಯಾಗುತ್ತದೆಯೇ ಹೊರತು ಆತನನ್ನು ಇಂತಹ ಮನಸ್ಥಿತಿಗೆ ತಳ್ಳಿದವರಿಗೆ ಯಾವ ಹಾನಿಯೂ ಆಗುವುದಿಲ್ಲ ಎಂದಿದ್ದಾರೆ.

ನಮ್ಮದು ವ್ಯಕ್ತಿಗಳ ವಿರುದ್ಧದ ಹೋರಾಟವಲ್ಲ, RSS ಪಸರಿಸುತ್ತಿರುವ ಈ ಕೊಳಕು ಮನಸ್ಥಿತಿಯ ವಿರುದ್ಧದ ಹೋರಾಟ, ಮುಗ್ಧರನ್ನು ಟ್ರೈನ್ ವಾಶ್ ಮಾಡಿ ಅವರ ಚಿಂತನೆಗಳನ್ನು ಕಲುಷಿತಗೊಳಿಸುತ್ತಿರುವ ಕ್ಷುದ್ರ ಶಕ್ತಿಗಳ ವಿರುದ್ಧದ ಹೋರಾಟ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

RSS ನ ಕಾಲಾಳುಗಳಾಗಿರುವ ಜನರನ್ನು ವಿಕಾರಧಾರೆಯಿಂದ ವಿಚಾರಧಾರೆಯೆಡೆಗೆ ಕರೆತರಬೇಕಿದೆ, ಬುದ್ಧ ಬಸವ, ಅಂಬೇಡ್ಕ‌ರ್ ಅವರ ಮೌಲ್ಯಯುತ ಚಿಂತನೆಗಳನ್ನು ಪರಿಚಯಿಸಬೇಕಿದೆ. ಮುಗ್ಧ ಮಕ್ಕಳು, ಯುವ ಸಮುದಾಯವನ್ನು ಇಂತಹ ಕಲುಷಿತ ವ್ಯವಸ್ಥೆಗೆ ಬಲಿಯಾಗದಂತೆ ತಡೆಯುವ ಸಲುವಾಗಿಯೇ ನಾನು ಹೋರಾಡುತ್ತೇನೆ ಮತ್ತು ದೃಢವಾದ ಹೆಜ್ಜೆಗಳನ್ನು ಇಡುತ್ತೇನೆ ಎಂದು ಖರ್ಗೆ ಹೇಳಿದರು.

ಈ ಬೆದರಿಕೆಗಳು, ಬೈಗುಳಗಳಿಂದ ನಾನು ವಿಚಲಿತನಾಗುತ್ತೇನೆ ಎಂದು ಭಾವಿಸಿದ್ದರೆ ಅದು ಅವರ ಭ್ರಮೆಯಷ್ಟೇ. ನನ್ನದು ಕೇವಲ ಅಧಿಕಾರ ಕೇಂದ್ರಿತ ರಾಜಕಾರಣವಲ್ಲ, ಸೈದ್ದಾಂತಿಕ ರಾಜಕಾರಣ, ಮುಗ್ಧ ಯುವ ಸಮುದಾಯವನ್ನು ವಿಷವರ್ತುಲದಿಂದ ಹೊರತರುವ ಜನಕೇಂದ್ರಿತ ರಾಜಕಾರಣ. ಇವೆಲ್ಲದಕ್ಕೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!