Annabhagya Yojane; Thinking of giving grocery kits instead of additional five kg rice: DCM D.K. Shivakumar

ಅನ್ನಭಾಗ್ಯ ಯೋಜನೆ; ಹೆಚ್ಚುವರಿ ಐದು ಕೆ.ಜಿ ಅಕ್ಕಿ ಬದಲು ದಿನಸಿ ಕಿಟ್ ನೀಡಲು ಚಿಂತನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಅನ್ನಭಾಗ್ಯ ಯೋಜನೆಯಲ್ಲಿ ಹೆಚ್ಚುವರಿಯಾಗಿ ನೀಡಲಾಗುತ್ತಿರುವ ಅಕ್ಕಿ ದುರ್ಬಳಕೆಯಾಗುತ್ತಿರುವುದನ್ನು ತಪ್ಪಿಸಲು, ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ಸೇರಿದಂತೆ ಐದಾರು ಪದಾರ್ಥಗಳಿರುವ ಇಂದಿರಾ ಕಿಟ್ ವಿತರಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ನಡೆದ ವಿಶ್ವ ಆಹಾರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

ಈ ಸರ್ಕಾರ ಬರುವ ಮುನ್ನ ಅನ್ನ ಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯನ್ನು 10 ಕೆ.ಜಿಗೆ ಏರಿಸುವುದಾಗಿ ಭರವಸೆ ನೀಡಿದೆವು. ನಂತರ ಇದರ ದುರ್ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಸಚಿವ ಸಂಪುಟದಲ್ಲಿ ಹೊಸ ತೀರ್ಮಾನಕ್ಕೆ ಬಂದಿದ್ದೇವೆ.

ನಾವು ಯಾರ ಒತ್ತಡಕ್ಕೂ ಒಳಗಾಗಿ ಈ ತೀರ್ಮಾನ ಮಾಡಿಲ್ಲ. ಈ ವಿಚಾರವಾಗಿ ಸಮೀಕ್ಷೆ ನಡೆಸಿ, ಜನಸಾಮಾನ್ಯರು ಹಾಗೂ ಶಾಸಕರ ಜೊತೆ ಚರ್ಚಿಸಿ ತೀರ್ಮಾನ ಮಾಡಿದ್ದೇವೆ. ಸಾಮಾನ್ಯವಾಗಿ ಪ್ರತಿ ಕುಟುಂಬದಲ್ಲಿ ತಿಂಗಳಿಗೆ ವ್ಯಕ್ತಿಗೆ 5-6 ಕೆ.ಜಿಗೆ ಅಕ್ಕಿ ಮಾತ್ರ ಬಳಸುತ್ತಾರೆ. ಹೀಗಾಗಿ ನಾವು ಕೊಟ್ಟ ಮಾತನ್ನೂ ಉಳಿಸಿಕೊಳ್ಳುವುದಕ್ಕೆ ಇಂದಿರಾ ಕಿಟ್ ವಿತರಿಸಲು ಮಾರ್ಗದರ್ಶನ ನೀಡಲಾಗಿದೆ.

ನಮ್ಮ ಸರ್ಕಾರ ಸಿದ್ದರಾಮಯ್ಯ ಅವರ ನೇತೃತ್ವ ಹಾಗೂ ಸಚಿವ ಮುನಿಯಪ್ಪ ಅವರ ಮುಖಂಡತ್ವದಲ್ಲಿ ಈ ಐತಿಹಾಸಿಕ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

ಈ ವಿಚಾರವಾಗಿ ರಾಜಕೀಯ ಚರ್ಚೆ ಮಾಡುತ್ತಾರೆ. ಯಡಿಯೂರಪ್ಪ ಅವರು ಒಂದು ಕಾಳು ಕಡಿಮೆ ಕೊಟ್ಟರು ಹೋರಾಟ ಮಾಡುವುದಾಗಿ ಹೇಳುತ್ತಿದ್ದರು. ಅವರು ಭಾವನೆ ಮೇಲೆ ರಾಜಕಾರಣ ಮಾಡುತ್ತಾರೆ.

ನಮ್ಮ ಸರ್ಕಾರ ಸದಾ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ಇಡೀ ದೇಶದಲ್ಲಿ ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡಿ ಅವರ ರಾಜ್ಯಗಳ ಯೋಜನೆ ನಿರ್ಣಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಪ್ರತಿ ಅಗುಳಿಗೂ ಪ್ರಾಮುಖ್ಯತೆ ನೀಡಿ

ಪ್ರತಿ ಹನಿ ನೀರಿಗೆ ಕೊಡುವ ಪ್ರಾಮುಖ್ಯತೆಯನ್ನು ಪ್ರತಿ ಅಗುಳು ಅನ್ನಕ್ಕೂ ನೀಡಬೇಕು. ನಾವೆಲ್ಲರೂ ಪ್ರಕೃತಿ ನಿಯಮದಲ್ಲಿ ಬದುಕುತ್ತಿದ್ದು, ಗಾಳಿ, ನೀರು, ಸೂರ್ಯನ ಜೊತೆಗೆ ಆಹಾರದ ಮೇಲೆ ಅವಲಂಬಿತವಾಗಿದ್ದೇವೆ.

ಪ್ರಕೃತಿ ಆಹಾರದ ಮೂಲಕ ನಮ್ಮನ್ನು ಕಾಪಾಡಿಕೊಂಡು ಬಂದಿದೆ. ಹಸಿದವನಿಗೆ ಮಾತ್ರ ಆಹಾರದ ಬೆಲೆ ಗೊತ್ತಿದೆ. ಎಲ್ಲರೂ ಕಷ್ಟಪಡುವುದೂ ಒಂದು ತುತ್ತು ಆಹಾರ, ಒಂದು ಗೇಣು ಬಟ್ಟೆಗಾಗಿ. ಇದರ ಹೊರತಾಗಿ ನಾವು ಏನೇ ಮಾಡಿದರೂ ಅವು ತಾತ್ಕಾಲಿಕ ಮಾತ್ರ ಎಂದು ಹೇಳಿದರು.

ಬಡವರ ಬದುಕು ಬದಲಿಸಲು ಕಾಂಗ್ರೆಸ್ ಯೋಜನೆಗಳು

ಈ ದೇಶದಲ್ಲಿ ಬಡವರ ಬದುಕಿನಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷ ಹೇಗೆ ತೀರ್ಮಾನ ಮಾಡಿದ್ದೇವೆ ಎಂದು ಕಾಂಗ್ರೆಸ್ ಸರ್ಕಾರದ ಪ್ರತಿನಿಧಿಯಾಗಿ ನನಗೆ ಗೊತ್ತಿದೆ. ನೆಹರೂ ಅವರ ಕಾಲದಿಂದ ಬಡವರಿಗೆ ಆಹಾರ ವಿತರಣೆ ಕಾರ್ಯಕ್ರಮ ರೂಪಿಸಿದರು.

ಇಂದಿರಾ ಗಾಂಧಿ ಹಾಗೂ ದೇವರಾಜ ಅರಸು ಅವರ ಕಾಲದಲ್ಲಿ ಉಳುವವನಿಗೆ ಭೂಮಿ ಕೊಡಲಾಯಿತು. ಬಡವರಿಗೆ ಪಡಿತರ ಜೊತೆಗೆ ಪಡಿತರ ಚೀಟಿ ವ್ಯವಸ್ಥೆ ಮಾಡಲಾಯಿತು. ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಶಾಲೆಗಳಲ್ಲಿ ಮಕ್ಕಳನ್ನು ಆಕರ್ಷಿಸಲು ಮಧ್ಯಾಹ್ನ ಬಿಸಿಯೂಟ ಯೋಜನೆ ಆರಂಭಿಸಲಾಯಿತು. ನಂತರ ಸಿದ್ದರಾಮಯ್ಯ ಅವರು ಬಸವ ಜಯಂತಿ ದಿನ ಅಧಿಕಾರ ಸ್ವೀಕರಿಸಿ ಮೊದಲ ದಿನವೇ ರಾಜ್ಯದಲ್ಲಿ ಯಾರೊಬ್ಬರೂ ಹಸಿವಿನಿಂದ ಇರಬಾರದು ಎಂದು ಅನ್ನಭಾಗ್ಯ ಯೋಜನೆ ಜಾರಿಗೆ ತಂದರು.

ನಮ್ಮ ಈ ಕಾರ್ಯಕ್ರಮಗಳನ್ನು ಯಾವುದೇ ಸರ್ಕಾರಗಳು ನಿಲ್ಲಿಸಲು ಸಾಧ್ಯವಾಗಿಲ್ಲ. ನಂತರ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಸೋನಿಯಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ದೇಶದಲ್ಲಿ ಆಹಾರ ಭದ್ರತೆ ಕಾಯ್ದೆ ಜಾರಿಗೆ ತಂದರು ಎಂದು ಸ್ಮರಿಸಿದರು.

ಟೀಕೆ ಮಾಡಿದವರೇ ನಮ್ಮ ಗ್ಯಾರಂಟಿ ನಕಲು ಮಾಡುತ್ತಿದ್ದಾರೆ

ಈ ಹಿಂದೆ ಉಚಿತ ಗ್ಯಾಸ್ ನೀಡುವ ಯೋಜನೆಗೆ ಮೋದಿ ಫೋಟೋ ಹಾಕಿ ಎಲ್ಲಾ ಪೆಟ್ರೋಲ್ ಬಂಕ್ ಗಳ ಮುಂದೆ ಹಾಕುತ್ತಿದ್ದರು. ಈಗ ಅದನ್ನು ನಿಲ್ಲಿಸಿದ್ದಾರೆ. 400 ರೂಪಾಯಿ ಇದ್ದ ಅಡುಗೆ ಅನಿಲ 1100ಕ್ಕೆ ಏರಿಕೆಯಾಗಿತ್ತು. ಎಲ್ಲದರ ಬೆಲೆಗಳು ಗಗನಕ್ಕೇರಿದೆ, ಆದಾಯ ಪಾತಾಳಕ್ಕೆ ಕುಸಿದಿದೆ ಎಂದು ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ಇದಕ್ಕೆ ಪ್ರತಿ ವರ್ಷ 53 ಸಾವಿರ ಕೋಟಿ ಅನುದಾನ ನೀಡುತ್ತಿದ್ದೇವೆ.

ಪ್ರಧಾನಮಂತ್ರಿಗಳು ಹಾಗೂ ಇತರೆ ನಾಯಕರು ನಮ್ಮ ಯೋಜನೆ ಟೀಕೆ ಮಾಡಿದರೂ ಕೊನೆಗೆ ತಮ್ಮ ರಾಜಕೀಯ ಸ್ಥಾನಮಾನ ಉಳಿಸಿಕೊಳ್ಳಲು ನಮ್ಮ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ. ಬಿಹಾರದಲ್ಲಿ ಚುನಾವಣೆಯೇ ಘೋಷಣೆಯೇ ಆಗದಿದ್ದ ವೇಳೆಯಲ್ಲೇ ಆ ರಾಜ್ಯದ ಮಹಿಳೆಯರ ಖಾತೆಗೆ 10 ಸಾವಿರ ಹಾಕುತ್ತಿದ್ದಾರೆ. ಇಲ್ಲಿ ಜನರ ಹೊಟ್ಟೆಪಾಡು ವಿಚಾರ ಬಹಳ ಮುಖ್ಯ ಎಂದು ಸಾಬೀತಾಗುತ್ತದೆ ಎಂದರು.

ಏಷ್ಯಾ ಹಾಗೂ ನಮ್ಮ ದೇಶಗಳಲ್ಲಿ ಮಾತ್ರ ಬಿಸಿ ಬಿಸಿ ಆಹಾರ ತಿನ್ನುತ್ತೇವೆ. ಉಳಿದಂತೆ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಜಂಕ್ ಆಹಾರ, ಬ್ರೆಡ್, ಫಾಸ್ಟ್ ಫುಡ್ ಸೇವನೆ ಮಾಡುತ್ತಾರೆ. ನಮ್ಮ ದೇಶ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿ, ವಿದೇಶಗಳಿಗೆ ರಫ್ತು ಮಾಡುವ ಶಕ್ತಿ ಪಡೆದಿದ್ದೇವೆ.

ಗುಜರಾತಿಗಿಂತ ಹೆಚ್ಚು ಹಾಲು ಉತ್ಪಾದನೆ ಮಾಡುತ್ತಿದ್ದೇವೆ. ನಮ್ಮ ಸರ್ಕಾರದ ಯೋಜನೆಗಳು ಜನಪರ ಕಾರ್ಯಕ್ರಮವಾಗಿದ್ದು, ದೇಶಕ್ಕೆ ಮಾದರಿಯಾಗಿವೆ ಎಂದು ತಿಳಿಸಿದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!