ಹಾಸನ; ಇತಿಹಾಸ ಪ್ರಸಿದ್ಧ ಹಾಸನಾಂಬ (Hasanambha) ದೇವಿಯ ದರ್ಶನಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಭಕ್ತ ಸಾಗರವೇ (Devotees) ಹರಿದುಬರುತ್ತಿದ್ದು ಈವರೆಗೂ ಸುಮಾರು ಅಂದಾಜು 9. ಲಕ್ಷ ಭಕ್ತರು ದರ್ಶನ ಪಡೆದಿದ್ದಾರೆ.
ಸಚಿವ ಕೃಷ್ಣಭೈರೇಗೌಡ ಮಾರ್ಗದರ್ಶನದಲ್ಲಿ ಜಿಲ್ಲಾಡಳಿತದಿಂದ ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಲಾಗಿದ್ದು, ದರ್ಶನ ಪಡೆದ ಭಕ್ತಾಧಿಗಳು ಸೌಕರ್ಯ ಕಂಡು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಸಚಿವ ಕೃಷ್ಣಭೈರೇಗೌಡ, ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಅವರ ಕಾಳಜಿಣ ಶ್ರಮವನ್ನು ಪಕ್ಷಾತೀತವಾಗಿ ಎಲ್ಲರೂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
Hasanambha ದರ್ಶನ ಸಮಯ ಬದಲಾವಣೆ
ಹಾಸನಾಂಬೆ ದೇಗುಲ ದರ್ಶನದ ವೇಳಾಪಟ್ಟಿಯಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ಭಕ್ತಾಧಿಗಳು ಸಹಕರಿಸುವಂತೆ ನೀಡುವಂತೆ ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡಿದ್ದಾರೆ.
ಇಂದುಅ.16), 18 ಹಾಗೂ 21 ರಂದು ದೇವರ ದರ್ಶನ ಕೆಲ ಕಾಲ ಬಂದ್ ಮಾಡಲಾಗುತ್ತದೆ. ಅಕ್ಟೋಬರ್ 16 ಗುರುವಾರ ಇವತ್ತು ಬೆಳಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಮಧ್ಯಾಹ್ನ 3:30 ರಿಂದ ರಾತ್ರಿ 12 ರವರೆಗೆ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆದರೆ ರಾತ್ರಿ 10 ಗಂಟೆಗೆ ಗೇಟ್ ಬಂದ್ ಮಾಡಲಾಗುತ್ತದೆ.
ಇನ್ನು ಅಕ್ಟೋಬರ್ 18 ಶನಿವಾರ ಬೆಳಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆ ಹಾಗೂ ಮಧ್ಯಾಹ್ನ 3:30 ರಿಂದ ರಾತ್ರಿ 12 ರವರೆಗೆ ಅವಕಾಶ ನೀಡಲಾಗಿದೆ.
ಅಕ್ಟೋಬರ್ 21 ಮಂಗಳವಾರದಂದು ಬೆಳಗ್ಗೆ 5 ರಿಂದ ಮಧ್ಯಾಹ್ನ 2 ಗಂಟೆ ಹಾಗೂ ಮಧ್ಯಾಹ್ನ 3:30 ರಿಂದ ರಾತ್ರಿ 12 ರವರೆಗೆ ದರ್ಶನಕ್ಕೆ ಬಂದ್ ಮಾಡಲಾಗುತ್ತದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
ಹಾಸನಾಂಬ ದರ್ಶನಕ್ಕೆ ಕಳೆದ ಐದು ದಿನಗಳಲ್ಲಿ ಸುಮಾರು 9 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದಾರೆ. ಇವರಲ್ಲಿ ಶೇ.80 ರಷ್ಟು ಮಹಿಳೆಯರೇ ಇದ್ದಾರೆ.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಸಿಕ್ಕಿರುವುದರಿಂದ ಈ ಬಾರಿ ಮಹಿಳಾ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ.
ಅಲ್ಲದೆ ಖಾಸಗಿ ವಾಹನಗಳ ಮೂಲಕ ಹಾಸಬಾಂಬೆಯ ದರ್ಶನಕ್ಕೆ ಸಾವಿರಾರು ಮಂದಿ ಇಂದು ತೆರಳುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ