ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲೆ ಜಿಲ್ಲಾಸ್ಪತ್ರೆ ನಿರ್ಮಾಣ: ಸಚಿವ ಕೆ.ಎಚ್.ಮುನಿಯಪ್ಪ ಭರವಸೆ

Construction of District Hospital in Doddaballapur taluk: Minister KH Muniyappa promised

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯನ್ನು (District Hospital) ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲೆ ನಿರ್ಮಾಣ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ (K.H. Muniyappa) ತಿಳಿಸಿದರು.  

ಜಿಲ್ಲಾ ಉಸ್ತುವಾರಿ ಸಚಿವರ ಗೃಹ ಕಛೇರಿಯಲ್ಲಿ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿಯವರು ಆಸ್ಪತ್ರೆ ನಿರ್ಮಾಣಕ್ಕೆ    ಶಂಕುಸ್ಥಾಪನೆ ನೆರವೇರಿಸಿದರೂ ಕಾಮಗಾರಿ ವಿಳಂಬವಾಗುತ್ತಿದೆ. ಶೀಘ್ರ ಕಾಮಗಾರಿ ಪ್ರಾರಂಭ ಪೂರ್ಣಗೊಳಿಸಬೇಕೆಂದು ನೀಡಿದ ಮನವಿಯನ್ನು ಸ್ವೀಕರಿಸಿ ಮಾತನಾಡಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣ ಕುರಿತು ಸಂಬಂಧಿಸಿದ ಸಚಿವರು ಮತ್ತು ಅಧಿಕಾರಗಳ ಜೊತೆ ಮಾತನಾಡಿದ್ದೇನೆ. ಆಸ್ಪತ್ರೆ ಕಾಮಗಾರಿ ಪೂರ್ಣಗೊಳ್ಳಲು ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಪಡೆಯಲಾಗುವುದು ಎಂದರು.

ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿ, 250 ಹಾಸಿಗೆಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆಯನ್ನು ದೊಡ್ಡಬಳ್ಳಾಪುರ ನಗರದ ಸಿದ್ಧೇನಾಯಕನಹಳ್ಳಿ ಗ್ರಾಮದ ಸರ್ವೆ ನಂ.20ರಲ್ಲಿ ಒಟ್ಟು 9.38 ಎಕರೆ ಜಾಗದಲ್ಲಿ ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದ್ದಾರೆ.

ಜಿಲ್ಲಾ ಆಸ್ಪತ್ರೆಗೆ 6.8 ಎಕರೆ ಜಾಗ ಹೆಚ್ಚುವರಿ ಸೇರ್ಪಡೆ ಮಾಡಿ ಒಟ್ಟು 16 ಎಕರೆ ಜಮೀನಿನಲ್ಲಿ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ಯೋಜನೆಗೆ ಒಟ್ಟು ರೂ.192ಕೋಟಿ ಅನುದಾನ ನಿಗದಿಪಡಿಸಿದೆ. ಆದರೆ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗದೆ ವಿಳಂಬವಾಗುತ್ತಿದೆ.

ಮತ್ತೊಂದೆಡೆ ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಇಎಸ್‍ಐ ಆಸ್ಪತ್ರೆ ನಿರ್ಮಾಣ ಆಗಿ ವರ್ಷಗಳೇ ಕಳೆದಿವೆ. ಆದರೆ ಉದ್ಘಾಟನೆ ಮಾತ್ರ ಆಗಿಲ್ಲ. ಜಿಲ್ಲಾ ಆಸ್ಪತ್ರೆ ಕಾಮಗಾರಿ ಪ್ರಾರಂಭಿಸಬೇಕು ಮತ್ತು ಇಎಸ್ಐ ಆಸ್ಪತ್ರೆ ಉದ್ಘಾಟನೆ ಆಗಬೇಕು. ‌

ಈ ಆಸ್ಪತ್ರೆಗಳಿಂದ ದೊಡ್ಡಬಳ್ಳಾಪುರ ಮಾತ್ರವಲ್ಲದೇ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ಗೌರಿಬಿದನೂರು ಸೇರಿದಂತೆ ತಾಲ್ಲೂಕಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಲಭ್ಯವಾಗುತ್ತದೆ. ಅ.19 ರಂದು ಭಾನುವಾರ ದೊಡ್ಡಬಳ್ಳಾಪುರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಆಸ್ಪತ್ರೆಗೆ ಅನುದಾನ ಬಿಡುಗಡೆ ಮತ್ತು ಇಎಸ್ಐ ಆಸ್ಪತ್ರೆ ಉದ್ಘಾಟನೆ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರಬೇಕೆಂದರು.

ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ನೀಡುವ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿಯ ಮುಖಂಡರಾದ ಸಂಜೀವ್ ನಾಯಕ್, ಆರ್‌.ಚಂದ್ರತೇಜಸ್ವಿ, ಪಿ.ಗೋವಿಂದರಾಜು, ಪಿ.ಎ.ವೆಂಕಟೇಶ್, ಮುನಿಪಾಪಣ್ಣ, ಚಿದಾನಂದ್, ಡಿ.ವೆಂಕಟೇಶ್, ನವೀನ್, ಪಿ.ಕೆ.ವೆಂಕಟೇಶ್, ಸುಬ್ಬಣ್ಣ ಮುಂತಾದವರು ಭಾಗವಹಿಸಿದ್ದರು.

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]