ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ (Accident) ತಾಲೂಕಿನ ಕೆಸ್ತೂರು ಗೇಟ್ ಬಳಿ ಸಂಭವಿಸಿದೆ.

ಘಟನೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ದ್ವಿಚಕ್ರ ವಾಹನ ಸವಾರರಿಬ್ಬರಿಗೆ ತೀವ್ರ ಪೆಟ್ಟಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ.
108 ಅಂಬುಲೆನ್ಸ್ ಅವ್ಯವಸ್ಥೆಗೆ ಆಕ್ರೋಶ
ಅಪಘಾತದಲ್ಲಿ ಗಾಯಗೊಂಡಿರುವ ಕುರಿತಂತೆ ಇತರೆ ವಾಹನ ಸವಾರರು, ಸ್ಥಳೀಯರು 108 ಅಂಬುಲೆನ್ಸ್ಗೆ ಕರೆ ಮಾಡಿ ಹಲವು ಗಂಟೆಗಳ ಕಾಲ ಗಾಯಾಳುಗಳನ್ನು ರಸ್ತೆ ಬದಿಯಲ್ಲಿಯೇ ಕೂರಿಸಿ ಕಾದರು. ಆದರೆ ಅಂಬುಲೆನ್ಸ್ ಸಿಗಲಿಲ್ಲ ಎಂದು ದೂರಿದ್ದಾರೆ.
ಬಳಿಕ ರಸ್ತೆಯಲ್ಲಿ ಬಂದ ಕಾರೊಂದನ್ನು ನಿಲ್ಲಿಸಿ, ಅವರ ನೆರವಿಂದ ಆಸ್ಪತ್ರೆಗೆ ಕರೆದೊಯ್ದಿದ್ದು, ಅಂಬುಲೆನ್ಸ್ ಅವ್ಯವಸ್ಥೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇತ್ತೀಚೆಗಷ್ಟೇ ಸಾಸಲು ಸಮೀಪದ ಗುಮ್ಮನಹಳ್ಳಿ- ಲಿಂಗದವೀರನಹಳ್ಳಿ ನಡುವೆ ಸಂಭವಿಸಿದ ಅಪಘಾತದಲ್ಲಿ ಅಂಬುಲೆನ್ಸ್ ಸಿಗದೆ ಮಹಿಳೆಯೋರ್ವರು ಸಾವನಪ್ಪಿದ್ದರು.
ಆ ವೇಳೆ ಅಂಬುಲೆನ್ಸ್ ಅವ್ಯವಸ್ಥೆ ಕುರಿತು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಆದಿಯಾಗಿ ತಾಲೂಕಿನಲ್ಲಿ ಆಕ್ರೋಶ ವ್ಯಕ್ತವಾಗಿತ್ತು.